ಮತ್ತೆ 2019ರ ಲೋಕಸಭೆ ಚುನಾವಣೆ ಸೋಲು ನೆನೆದ ನಿಖಿಲ್ ಕುಮಾರಸ್ವಾಮಿ
ಮೂರು ಪಕ್ಷಗಳ ಹುನ್ನಾರದಿಂದ ನಾನು ಸೋಲಬೇಕಾಯಿತು. ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರ ಒತ್ತಡದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೆ. ಆ ಸೋಲಿನಿಂದ ನಾನು ಧೃತಿಗೆಟ್ಟಿಲ್ಲ. ನನ್ನ ವಯಸ್ಸು ಇನ್ನೂ ಚಿಕ್ಕದಿದೆ.
ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ(HD Kamaraswamy) ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) 2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಂಡ ಸೋಲನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯು ಪಾತ್ರ ಮಾಡಿದಂತೆ ಕಳೆದ ಲೋಕಸಭೆ ಚುನಾವಣೆಯಲ್ಲಿ ನಾನು ಕುರುಕ್ಷೇತ್ರದ ಅಭಿಮನ್ಯುವಿನಂತೆ ಏಕಾಂಗಿಯಾದೆ. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಎಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ ಸಂಚು ಮಾಡಿ ನನ್ನನ್ನು ಸೋಲಿಸಿದರು ಅಂತ ಅಭಿಪ್ರಾಯಪಟ್ಟರು.
ಮೂರು ಪಕ್ಷಗಳ ಹುನ್ನಾರದಿಂದ ನಾನು ಸೋಲಬೇಕಾಯಿತು. ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರ ಒತ್ತಡದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೆ. ಆ ಸೋಲಿನಿಂದ ನಾನು ಧೃತಿಗೆಟ್ಟಿಲ್ಲ. ನನ್ನ ವಯಸ್ಸು ಇನ್ನೂ ಚಿಕ್ಕದಿದೆ. ಕಾರ್ಯಕರ್ತರು, ಮುಖಂಡರೊಂದಿಗೆ ಬೆರೆಯುವುದನ್ನು ತಂದೆ ಹಾಗೂ ತಾತಾ ಹೇಳಿಕೊಟ್ಟಿದ್ದಾರೆ ಎಂದು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚಿತ್ರರಂಗದಲ್ಲಿ ತಕ್ಕಮಟ್ಟಿಗೆ ಯಶಸ್ಸು ಕಂಡಿದ್ದೇನೆ. ಇಂತಹ ಸಂದರ್ಭದಲ್ಲಿ ಪಕ್ಷ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಅಂತ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ನಾನು ಆಕಸ್ಮಿಕವಾಗಿ ಅಭ್ಯರ್ಥಿಯಾದೆ. ಸ್ಥಾನಮಾನಗಳು ಬೇಕೆಂದು ಹುಚ್ಚಿಡಿಸಿಕೊಂಡು ಅಭ್ಯರ್ಥಿಯಾಗಲಿಲ್ಲ. ನನಗೆ ಅಧಿಕಾರದ ಹುಚ್ಚಿದ್ದರೆ 2018 ರಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಆರ್ ಶಿವರಾಮೇಗೌಡ ಅವರಿಗೆ ಟಿಕೆಟ್ ಕೊಡದೆ ನಾನೇ ನಿಲ್ಲುತ್ತಿದ್ದೆ. ತಂದೆಯ ಹೆಸರಿನಿಂದ ಅಧಿಕಾರ ಹಿಡಿಯಬೇಕಾದ ಪರಿಸ್ಥಿತಿ ನನಗೆ ಬಂದಿಲ್ಲ ಅಂತ ನಿಖಿಲ್ ಹೇಳಿದ್ದಾರೆ.
ಇದನ್ನೂ ಓದಿ
‘ಗರುಡ ಗಮನ..’ ಚಿತ್ರದ ಇನ್ನೊಂದು ಮೈಲಿಗಲ್ಲು; ‘ಸೋಜುಗಾದ ಸೂಜು ಮಲ್ಲಿಗೆ’ ಸಾಧನೆ ಏನು?
ಪುನೀತ್ ಇಲ್ಲದೇ ಕಳೆಯಿತು ಒಂದು ತಿಂಗಳು; ಕಂಠೀರವ ಸ್ಟುಡಿಯೋದಲ್ಲಿ ಇಂದಿನ ಕಾರ್ಯಗಳೇನು?