Nikhil Kumaraswamy: ನಿಖಿಲ್ ಕುಮಾರಸ್ವಾಮಿ ರಾಜೀನಾಮೆ, ಮುಂದಿನ ಜೆಡಿಎಸ್​ ಯುವ ಸಾರಥಿ ಯಾರು?

ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸ್ಥಾನ ಗಳಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಅಧ್ಯಕ್ಷ ಯಾರು ಎನ್ನುವುದು ಕುತೂಹಲ ಮೂಡಿಸಿದೆ.

Nikhil Kumaraswamy: ನಿಖಿಲ್ ಕುಮಾರಸ್ವಾಮಿ ರಾಜೀನಾಮೆ, ಮುಂದಿನ ಜೆಡಿಎಸ್​ ಯುವ ಸಾರಥಿ ಯಾರು?
ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
Follow us
ರಮೇಶ್ ಬಿ. ಜವಳಗೇರಾ
|

Updated on: May 25, 2023 | 8:04 AM

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಜೆಡಿಎಸ್ (JDS)​ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ಆದ್ರೆ, ರಾಜೀನಾಮೆ ಅಂಗೀಕಾರವಾಗಿಲ್ಲ. ಇದರ ಬೆನ್ನಲ್ಲೇ ಇದೀಗ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ರಾಜೀನಾಮೆ ನೀಡಿದ್ದಾರೆ.  ಪಕ್ಷದ ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರವಾನಿಸಿದ್ದಾರೆ. ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ. ಅಲ್ಲದೇ ಸೋಲೇ ಅಂತಿಮವಲ್ಲ. ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡಿದ್ದೇನೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಈಗ ನಿಖಿಲ್ ಸ್ಥಾನಕ್ಕೆ ಯಾರು ಸೂಕ್ತ ಎಂಬ ಪ್ರಶ್ನೆಗಳು ಸಹ ಉದ್ಭವವಾಗಿದೆ.

ಇದನ್ನೂ ಓದಿ: ಸೋಲಿನ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸ್ಥಾನ ಗಳಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಪಕ್ಷದ ಯುವಘಟಕದ ಅಧ್ಯಕ್ಷ ಸೇರಿದಂತೆ ಹಲವು ಘಟಕಗಳ ಪದಾಧಿಕಾರಿಗಳನ್ನು ಬದಲಿಸಲು ಜೆಡಿಎಸ್‌ ಪಾಳೆಯದಲ್ಲಿ ಚಿಂತನೆ ಆರಂಭವಾಗಿದೆ. ಚುನಾವಣೆಯಲ್ಲಿ ಪರಾಭವಗೊಂಡ ಕಾರಣ ರಾಜಕೀಯದಿಂದ ಸ್ವಲ್ಪ ಅಂತರ ಕಾಯ್ದುಕೊಂಡು ಸಿನಿಮಾ ಕ್ಷೇತ್ರದತ್ತ ಹೆಚ್ಚಿನ ಗಮನಹರಿಸುವ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಗಂಭೀರವಾಗಿ ಚಿಂತನೆ ನಡೆಸಿದ್ದಾರೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಹ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಷದ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಮಾಮೆ ನೀಡಿದ್ದಾರೆ. ಇನ್ನು ಯುವಘಟಕವನ್ನು ಸಮರ್ಥವಾಗಿ ಕೊಂಡೊಯ್ಯುವ ನಾಯಕರನ್ನು ಜೆಡಿಎಸ್‌ ಸದ್ದಿಲ್ಲದೆ ಹುಡುಕುತ್ತಿದ್ದು, ನಿಖಿಲ್‌ ಕುಮಾರಸ್ವಾಮಿ ಸ್ಥಾನಕ್ಕೆ ಯಾರು ಸೂಕ್ತ ಎಂಬ ಪ್ರಶ್ನೆಗಳು ಸಹ ಉದ್ಭವವಾಗಿದೆ.

ತೇಲಿಬಂದ ಪ್ರಜ್ವಲ್‌ ರೇವಣ್ಣ ಹೆಸರು

ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್​ ಯುವ ಸಾರಿಥಿ ಸಂಸದ ಪ್ರಜ್ವಲ್‌ ರೇವಣ್ಣ ಹೆಸರು ಪ್ರಬಲವಾಗಿ ಕೇಳಿ ಬಂದಿದೆ. ಆದ್ರೆ, ಕುಮಾರಸ್ವಾಮಿ ಇದಕ್ಕೆ ಸಮ್ಮತಿ ಸೂಚಿಸುವರೇ ಎಂಬುದು ಯಕ್ಷಪ್ರಶ್ನೆಯಾಗಿದೆ. ಕುಟುಂಬ ರಾಜಕಾರಣ ಇದಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ಕುಟುಂಬ ರಾಜಕಾರಣವನ್ನು ಬದಿಗಿಟ್ಟು ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುವುದಾದರೆ ಪ್ರಜ್ವಲ್‌ ರೇವಣ್ಣಗೆ ಯುವ ಘಟಕ ಹೊಣೆ ಒಲಿಯುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಇನ್ನು ಪ್ರಜ್ವಲ್ ರೇವಣ್ಣ ಜೊತೆಗೆ ಈ ಬಾರಿ ಗುರುಮಿಟ್ಕಲ್​ ಕ್ಷೇತ್ರದಿಂದ ಗೆದ್ದು ಶಾಸಕರಾಗಿರುವ ಶರಣಗೌಡ ಕಂದಕೂರು ಅವರ ಹೆಸರು ಸಹ ತೇಲಿ ಬಂದಿದೆ. ಒಂದು ವೇಳೆ ಪ್ರಜ್ವಲ್‌ಗೆ ಯುವಘಟಕ ಅಧ್ಯಕ್ಷ ಸ್ಥಾನ ನೀಡಲು ಕುಮಾರಸ್ವಾಮಿ ಹಿಂದೇಟು ಹಾಕಿದರೆ, ಪಕ್ಷದಲ್ಲಿ ಯುವ ಸಂಘಟಕರಾಗಿ ಓಡಾಡುವ ವ್ಯಕ್ತಿಯನ್ನು ಹುಡುಕುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಯುವ ಘಟಕದ ಅಧ್ಯಕ್ಷ ಸ್ಥಾನದ ಜತೆಗೆ ಇತರೆ ಘಟಕಗಳ ಪದಾಧಿಕಾರಿಗಳನ್ನು ಬದಲಿಸುವ ಸಾಧ್ಯತೆಯೂ ಇದೆ. ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಸ್ಥಳೀಯ ನಾಯಕರಿಗೆ ಮನ್ನಣೆ ದೊರಕುವ ಸಾಧ್ಯತೆ ಇದೆ ಎನ್ನಲಾಗಿದೆ.

ಒಟ್ಟಿನಲ್ಲಿ ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ಹಾಗೂ ಯುವ ಘಟಕಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದು, ಇವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್