ಬಿಜೆಪಿ-ಜೆಡಿಎಸ್​​ ಬಗ್ಗೆ ಯಾವುದೇ ಅಸಮಾಧಾನ ಇಲ್ಲ: ಮೈತ್ರಿಗೆ ಬೆಂಬಲ ಸೂಚಿಸಿದ ಜಫ್ರುಲ್ಲಾ ಖಾನ್

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ನಡುವೆ​​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೆಡಿಎಸ್​ ಪಕ್ಷದ ಅಲ್ಪಸಂಖ್ಯಾತ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಕೆಲವರು ಪಕ್ಷದಿಂದ ಹೊರಬಂದಿದ್ದಾರೆ. ಆದರೆ ಇದರ ಮಧ್ಯೆ JDS​​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ-ಜೆಡಿಎಸ್​​ ಬಗ್ಗೆ ಯಾವುದೇ ಅಸಮಾಧಾನ ಇಲ್ಲ: ಮೈತ್ರಿಗೆ ಬೆಂಬಲ ಸೂಚಿಸಿದ ಜಫ್ರುಲ್ಲಾ ಖಾನ್
JDS​​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on: Oct 09, 2023 | 3:50 PM

ಬೆಂಗಳೂರು, ಅಕ್ಟೋಬರ್​​ 09: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ನಡುವೆ​​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೆಡಿಎಸ್​ ಪಕ್ಷದ ಅಲ್ಪಸಂಖ್ಯಾತ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಕೆಲವರು ಪಕ್ಷದಿಂದ ಹೊರಬಂದಿದ್ದಾರೆ. ಆದರೆ ಇದರ ಮಧ್ಯೆ JDS​​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಬೆಂಬಲ ಸೂಚಿಸಿದ್ದಾರೆ. ನಗರದಲ್ಲಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್​​ ಮೈತ್ರಿ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ರಾಜಕಾರಣ ನಿಂತ ನೀರಲ್ಲ, ಹೀಗಾಗಿ ವರಿಷ್ಠರು ಈ ನಿರ್ಧಾರ ಕೈಗೊಂಡಿದ್ದಾರೆ. ಜಾತ್ಯತೀತ ತತ್ವದ ಜೊತೆಗೆ ರಾಜ್ಯದ ಹಿತದೃಷ್ಟಿಯಿಂದ ಮೈತ್ರಿ ಮಾಡಿಕೊಳ್ಳಲಾಗಿದೆ. ಕೆಲ ಮುಸ್ಲಿಂ ನಾಯಕರಿಗೆ ಅಸಮಾಧಾನ ಆಗಿರಬಹುದು, ಅದನ್ನ ಸರಿಪಡಿಸುತ್ತೇವೆ. ಆದರೆ ಮುಸ್ಲಿಂ ನಾಯಕರು ಜೆಡಿಎಸ್​ನಿಂದ ದೂರ ಹೋಗುವುದಿಲ್ಲ ಎಂದರು.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ: ಕಲಬುರಗಿಯಲ್ಲಿ JDS ಮುಸ್ಲಿಂ ಮುಖಂಡರು, ಕಾರ್ಯಕರ್ತರ ಸಭೆ ಅಂತ್ಯ

ಬಿಜೆಪಿ-JDS​​ ಮೈತ್ರಿ ಬಗ್ಗೆ ಮಾತಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ. ಕಾಂಗ್ರೆಸ್​​​​​​ಗೆ ಜಾತ್ಯತೀತ ಅಂದರೆ ಗೊತ್ತಿದೆಯಾ? ಶಿವಸೇನೆ ಜೊತೆ ಕಾಂಗ್ರೆಸ್ ಕೈಜೋಡಿಸಿಲ್ಲವೇ ಅದು ಜಾತ್ಯತೀತನಾ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ-ಜೆಡಿಎಸ್​​ ಮೈತ್ರಿ ಬಗ್ಗೆ ನಾಯಕರಲ್ಲಿ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.

ಮೈತ್ರಿ ವಿಚಾರವಾಗಿ JDSನಲ್ಲಿ ಅಸಮಾಧಾನದ ಹೆಚ್ಚಾಗಿದ್ದರಿಂದ ಇತ್ತೇಚೆಗೆ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಜೆಡಿಎಸ್ ನಾಯಕರ ಜತೆ ಸಭೆ ಮಾಡಿದ್ದರು. ಮೈತ್ರಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ದೇವದುರ್ಗ ಶಾಸಕ ಕರೆಮ್ಮ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಮೈತ್ರಿ ಸರ್ಕಾರ ಪತನವಾಗಲು ಡಿಕೆ ಶಿವಕುಮಾರ್​ ಕಾರಣ ಎಂಬ ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ತಿರುಗೇಟು

ಸಿ.ಎಂ ಇಬ್ರಾಹಿಂ ಹಾದಿಯಾಗಿ ಶರಣಗೌಡ ಕಂದಕೂರ್ ಸೇರಿದಂತೆ ಅನೇಕ ಮುಸ್ಲಿಂ ಮುಖಂಡರು ಸಭೆಯಿಂದ ದೂರ ಉಳಿದಿದ್ದರು. ಹಾಗಾಗಿ ಖುದ್ದು ದೇವೇಗೌಡರೇ ಇಬ್ರಾಹಿಂಗೆ ಕರೆ ಮಾಡಿ ಸಭೆಗೆ ಆಗಮಿಸುವಂತೆ ಆಹ್ವಾನಿಸಿದ್ದರು. ಆದರೆ ಒಂದು ಕಾಲು ಆಚೆ ಇಟ್ಟಿರುವ ಇಬ್ರಾಹಿಂ, ಮುಂದಿನ ದಿನದಲ್ಲಿ ಪ್ರತ್ಯೇಕವಾಗಿ ಮಾತನಾಡುವುದಾಗಿ ಹೇಳಿದ್ದರು.

ಮೈತ್ರಿಯಿಂದ ಬಹಳಷ್ಟು ಜನ ನೊಂದಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಜ್ಯಾತ್ಯಾತೀತ ತತ್ವ ನಂಬಿ ನಾವೆಲ್ಲಾ ಜೆಡಿಎಸ್​​ನಲ್ಲಿದ್ದೆವು. ಆದರೆ ದಿಢೀರನೆ ಇದೀಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ನಾಸೀರ್ ಹುಸೇನ್ ಇತ್ತೀಚೆಗೆ ಅಸಮಾಧಾನ ಹೊರಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ