ಯಾವ ಶಾಸಕರೂ ಜೆಡಿಎಸ್​​ ಬಿಟ್ಟು ಹೋಗುವುದಿಲ್ಲ; ಹೆಚ್​ಡಿ ದೇವೇಗೌಡ ಸ್ಪಷ್ಟನೆ

HD Deve Gowda; ಪಕ್ಷ ಸಂಘಟನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ನಮಗೆ ಯಾವ ಪಕ್ಷದ ಮೇಲೂ ದ್ವೇಷ ಇಲ್ಲ. ನಮ್ಮ ಪಕ್ಷ ಸಂಘಟನೆಗೊಳಿಸಿ ಉಳಿಸಬೇಕೆಂದು ಕೆಲಸ ಮಾಡುತ್ತಿದ್ದೇವೆ. ನಾನು ಕೂಡ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೆಚ್​ಡಿ ದೇವೇಗೌಡ್ ಹೇಳಿದರು.

ಯಾವ ಶಾಸಕರೂ ಜೆಡಿಎಸ್​​ ಬಿಟ್ಟು ಹೋಗುವುದಿಲ್ಲ; ಹೆಚ್​ಡಿ ದೇವೇಗೌಡ ಸ್ಪಷ್ಟನೆ
ಹೆಚ್​ಡಿ ದೇವೇಗೌಡ
Follow us
TV9 Web
| Updated By: Ganapathi Sharma

Updated on:Aug 28, 2023 | 12:57 PM

ಬೆಂಗಳೂರು, ಆಗಸ್ಟ್ 28: ಯಾವ ಶಾಸಕರೂ ಜೆಡಿಎಸ್​​ (JDS) ಬಿಟ್ಟು ಹೋಗುವುದಿಲ್ಲ. ಇದೆಲ್ಲ ಬರೀ ಊಹಾಪೋಹ ಅಷ್ಟೇ ಎಂದು ಪಕ್ಷಾಂತರ ವದಂತಿಗಳ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ತಿಂಗಳು 10 ರಂದು ಒಂದು ಸಭೆ ನಡೆಸುತ್ತೇನೆ. ಅದಕ್ಕೆ ಎಲ್ಲಾ ಜಿಲ್ಲೆಗಳಿಂದ ಕಾರ್ಯಕರ್ತರು ಹಾಜರಾಗಲಿದ್ದಾರೆ ಎಂದರು. ಜತೆಗೆ, ಈ ತೊಂಭತ್ತೊಂದರ ವಯಸ್ಸಿನಲ್ಲಿ ಯಾರೂ ನನ್ನ ಕೈಬಿಡಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

ಪಕ್ಷ ಸಂಘಟನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ನಮಗೆ ಯಾವ ಪಕ್ಷದ ಮೇಲೂ ದ್ವೇಷ ಇಲ್ಲ. ನಮ್ಮ ಪಕ್ಷ ಸಂಘಟನೆಗೊಳಿಸಿ ಉಳಿಸಬೇಕೆಂದು ಕೆಲಸ ಮಾಡುತ್ತಿದ್ದೇವೆ. ನಾನು ಕೂಡ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಈ 2 ಪಕ್ಷಗಳ (ಬಿಜೆಪಿ, ಕಾಂಗ್ರೆಸ್) ನಡುವೆ ನಮ್ಮ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇನೆ. ಈ ದೇಶದ ರಾಜಕಾರಣ ಹೇಗೆ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ. ಜಿಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್​ ಕಮಿಟಿ ಮಾಡಿ ಪ್ರವಾಸ ರಾಜ್ಯಾದ್ಯಂತ ಆಯೋಜನೆ ಮಾಡಲಾಗುವುದು ಎಂದು ದೇವೇಗೌಡ ಹೇಳಿದರು.

ಸರ್ಕಾರ ವಿರುದ್ಧ ಬೇಸರ ವ್ಯಕ್ತಪಡಿಸಿದ ಹೆಚ್​​ಡಿ ದೇವೇಗೌಡ

ಸರ್ಕಾರ ವಿರುದ್ಧ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ, ಮನೆಯಲ್ಲಿ ಕುಳಿತುಕೊಂಡು ಎಲ್ಲವನ್ನೂ ನೋಡುತ್ತಿದ್ದೇನೆ. ಕುಮಾರಸ್ವಾಮಿ ಪೆನ್ ಡ್ರೈವ್ ವಾದ ವಿವಾದ ನೋಡಿದ್ದೇನೆ. ಅವರು ಅಷ್ಟು ಸುಲಭವಾಗಿ ಮಾತಾಡಲ್ಲ. ಅವರನ್ನು ಅಷ್ಟು ಸುಲಭವಾಗಿ ಜೀರ್ಣಾ ಮಾಡಿಕೊಳ್ಳೋಕೆ ಆಗಲ್ಲ. ಅದ್ದರಿಂದ ಅವರ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದು ಹೇಳಿದರು.

ಇದನ್ನೂ ಓದಿ: ಆಪರೇಷನ್ ಹಸ್ತ ಅಲ್ಲ ಬಿಜೆಪಿ ಅವ್ಯವಸ್ಥೆಗೆ ಪಕ್ಷ ಬಿಡುತ್ತಿದ್ದಾರೆ ಎನ್ನುತ್ತಿರುವ ಕಾಂಗ್ರೆಸ್ ನಾಯಕರು; ಕಮಲ ಪಡೆ ಹೇಳುವುದೇನು?

ರಾಮನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಶಿಫ್ಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೆಚ್​​ಡಿಕೆ ಸಿಎಂ ಆಗಿದ್ದಾಗ ಮೆಡಿಕಲ್ ಕಾಲೇಜು ಮಂಜೂರಾಗಿತ್ತು. ಕನಕಪುರ ಮನೆ ಇದ್ದ ಹಾಗೆ, ಆದರೆ ರಾಮನಗರ ಸೆಂಟರ್. ಮೆಡಿಕಲ್​ ಕಾಲೇಜಿನ ವಿಚಾರದಲ್ಲೂ ರಾಜಕೀಯ ಮಾಡಬಾರದು. ಅವರದ್ದೇ ಸರ್ಕಾರವಿದೆ ಕನಕಪುರಕ್ಕೆ ಇನ್ನೊಂದು ಕಾಲೇಜು ಮಾಡಲಿ. ಆದರೆ, ಹೆಚ್​ಡಿ ಕುಮಾರಸ್ವಾಮಿ ಮೇಲೆ ಆರೋಪ ಮಾಡಬೇಡಿ. ಕುಮಾರಸ್ವಾಮಿ ಯಾವುದೇ ದ್ವೇಷದಿಂದ ಮಾತನಾಡುತ್ತಿಲ್ಲ ಎಂದು ಅವರು ಹೇಳಿದರು.

ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಶಂಸೆ

ಚಂದ್ರಯಾನ-3 ರ ಯಶಸ್ಸಿಗಾಗಿ ಇಸ್ರೋ ವಿಜ್ಞಾನಿಗಳ ಸಾಧನೆಗೆ ದೇವೇಗೌಡ ಪ್ರಶಂಸೆ ವ್ಯಕ್ತಪಡಿಸಿದರು. ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಗೊಳಿಸಿ ಇಡೀ ವಿಶ್ವ ಭಾತರದ ಕಡೆ ನೋಡುವಂತೆ ಮಾಡಿದ್ದಾರೆ. ದೇಶದ ಘನತೆ ಮತ್ತು ಗೌರವ ಹೆಚ್ಚಿಸಿದ್ದಾರೆ. ವಿಜ್ಞಾನಿಗಳ ಈ ಸಾಧನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ರಾಜಕೀಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Mon, 28 August 23