Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ: ಸಿಎಂ ಸಿದ್ಧರಾಮಯ್ಯ

ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್​ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.

ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ: ಸಿಎಂ ಸಿದ್ಧರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 08, 2023 | 10:34 PM

ಬೆಂಗಳೂರು: ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಮಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಸದ್ಯ ಈ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ (Siddaramaiah) ಟ್ವೀಟ್​ ಮಾಡಿದ್ದು, ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುವುದಾಗಿ ಇತ್ತೀಚೆಗೆ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಹೊಸ ಘಟಕ ಆರಂಭಿಸ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Chikmagalur News; ಮುಸ್ಲಿಂ ಯುವತಿ ಜೊತೆ ಸ್ನೇಹ, ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಅಂತಾ ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.

ರಾಜ್ಯಕ್ಕೆ ಕೆಟ್ಟ ಹೆಸರು

ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ಚಿಂತಾಮಣಿಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್​​ಗಿರಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿಯ ಮೆಹಬೂಬ್​​ ನಗರದಲ್ಲಿ ಯುವಕರು ನೈತಿಕ ಪೊಲೀಸ್​​ಗಿರಿ ನಡೆಸಿರುವುದಾಗಿ ಇತ್ತೀಚೆಗೆ ತಿಳಿದುಬಂದಿತ್ತು. ಮುಸ್ಲಿಂ ಯುವತಿ ಜತೆ ಹಿಂದೂ ಯುವಕ ಇದ್ದಿದ್ದಕ್ಕೆ ಆತನ ಮೇಲೆ ಹಲ್ಲೆ ಯತ್ನ ನಡೆಸಲಾಗಿತ್ತು. ಜತೆಗೆ ಮುಸ್ಲಿಂ ಯುವತಿ ಮೇಲೆಯೂ ಹಲ್ಲೆಗೆ ಯತ್ನ ನಡೆಸಿದ್ದರು.

ಚೇಳೂರು ಮೂಲದ ಯುವತಿ, ಚಿಂತಾಮಣಿ ಮೂಲದ ಯುವಕ ಜತೆಗೆ ಇದ್ದಾಗ ಸ್ಥಳಕ್ಕೆ ಬಂದ ಯುವಕರು ಯುವಕನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದರು. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:18 pm, Thu, 8 June 23

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ