AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ: ಶಾಮನೂರು ಪುತ್ರ ಸಚಿವ ಮಲ್ಲಿಕಾರ್ಜುನ ಸ್ಪಷ್ಟನೆ

ಅವರ ವೈಯಕ್ತಿಕ ವಿಚಾರ ಏನೂ ಎಂದು ಗೊತ್ತಿಲ್ಲ. ತಂದೆಯವರ ಜೊತೆಗೆ ನಾನು ಮಾತನಾಡಿಲ್ಲ. ಈ ವಿಷಯ ಕುರಿತು ಸಿಎಂ ಹಾಗೂ ತಂದೆ ಶಾಮನೂರು ಶಿವಶಂಕರಪ್ಪ ಅವರೇ ಮಾತಾಡಿಕೊಳ್ಳುತ್ತಾರೆ. ಇದು ಮುಗಿದು ಹೋದ ಅಧ್ಯಾಯ ಎಂದು ಗಣಿ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್ ಸ್ಪಷ್ಟಪಡಿಸಿದ್ದಾರೆ.

ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ: ಶಾಮನೂರು ಪುತ್ರ ಸಚಿವ ಮಲ್ಲಿಕಾರ್ಜುನ ಸ್ಪಷ್ಟನೆ
ಎಸ್​ಎಸ್​ ಮಲ್ಲಿಕಾರ್ಜುನ್
Follow us
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2023 | 2:39 PM

ಬೆಂಗಳೂರು, ಅ.05: ನಮ್ಮ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ಗಣಿ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್(S.S Mallikarjun) ಅವರು ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಈ ಬಗ್ಗೆ ತಂದೆ ಶಾಮನೂರು ಶಿವಶಂಕರಪ್ಪ (Shamanuru Shivashankarappa) ರನ್ನೇ ಕೇಳಿ, ಅವರ ವೈಯಕ್ತಿಕ ವಿಚಾರ ಏನೂ ಎಂದು ಗೊತ್ತಿಲ್ಲ. ತಂದೆಯವರ ಜೊತೆಗೆ ನಾನು ಮಾತನಾಡಿಲ್ಲ. ಈ ವಿಷಯ ಕುರಿತು ಸಿಎಂ ಹಾಗೂ ತಂದೆ ಶಾಮನೂರು ಶಿವಶಂಕರಪ್ಪ ಅವರೇ ಮಾತಾಡಿಕೊಳ್ಳುತ್ತಾರೆ. ಇದು ಮುಗಿದು ಹೋದ ಅಧ್ಯಾಯ ಎಂದು ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಹೇಳಿಕೆ ಸಮರ್ಥಿಸಿಕೊಂಡ ವಿನಯ್ ಕುಲಕರ್ಣಿ

‘ಲಿಂಗಾಯತ  ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದಿದ್ದ ಶಾಮನೂರು ಅವರ ಹೇಳಿಕೆಯನ್ನು   ಮಾಜಿ ಸಚಿವ ವಿನಯ್ ಕುಲಕರ್ಣಿ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ‘ ಕಾಂಗ್ರೆಸ್​ಗೆ ಲಿಂಗಾಯತರು ವೋಟ್​ ಹಾಕಿಲ್ಲ ಎನ್ನುವವನು ಮೂರ್ಖ, ವೀರೇಂದ್ರ ಪಾಟೀಲ್ ಬಳಿಕ ಕಾಂಗ್ರೆಸ್ ಪರ ನಿಂತಿದ್ದಾರೆ. ಈ ಬಾರಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್​ಗೆ ವೋಟ್ ಹಾಕಿದ್ದಾರೆ. ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಯಾರೂ ಕೌಂಟರ್ ಕೊಡೋದು ಬೇಡ. ಅವರಿಗೆ 92 ವಯಸ್ಸಾಗಿದ್ದು, ನಮ್ಮ ಹಿರಿಯರು. ಸಿಎಂ ನಮ್ಮ ಹೊರಗಿನವರಲ್ಲ, ನಮ್ಮದೇ ಕುಟುಂಬ. ನಮ್ಮವರೇ ಹೋಗಿ ಅವರ ಬಳಿ ಮಾತನಾಡಿದರೆ ತಪ್ಪೇನಿದೆ ಅದರಲ್ಲಿ ಎಂದಿದ್ದಾರೆ.

ಇದನ್ನೂ ಓದಿ:ಶಾಮನೂರು ಶಿವಶಂಕರಪ್ಪ ಯಾಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ, ಅವರೊಂದಿಗೆ ಚರ್ಚೆ ಮಾಡ್ತೀನಿ: ಡಿಕೆ ಶಿವಕುಮಾರ್

ಒಂದು ಸಮಾಜದಿಂದ ಯಾರೂ ಸಿಎಂ ಹಾಗೂ ಶಾಸಕಾರಾಗುವುದಿಲ್ಲ. ಅಧಿಕಾರಿಗಳು ಅಥವಾ ರಾಜಕಾರಣಿಗಳಿಗೆ ಸಮಸ್ಯೆ ಆಗುತ್ತಿದ್ದರೆ, ಅಂತವರು ನಮ್ಮ ಗಮನಕ್ಕೆ ತರಲಿ. ಅಧಿಕಾರಿಗಳು ನಮ್ಮ ಬಳಿ ಬರಲಿ, ನಾವೇ ಸಿಎಂ ಬಳಿ ಮಾತನಾಡುತ್ತೇವೆ.  ನಮ್ಮ ಒಳಗಡೆಯೇ ಇದೆಲ್ಲ ಸರಿಪಡಿಸಿಕೊಳ್ಳುತ್ತೇವೆ. ಎಲ್ಲರ ವಿಚಾರಗಳೂ ಒಂದೇ ತರಹ ಇರಲ್ಲ. ಯಾರಾದ್ರೂ ನಾಲ್ಕು ಜನ ಸಚಿವರನ್ನು ಶಾಮನೂರು ಬಳಿ ಕಳಿಸಿ ಮಾತನಾಡಿದರೆ ತಪ್ಪೇನಿದೆ ಎಂದರು.

ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿರುವ ಸಚಿವ ಈಶ್ವರ ಖಂಡ್ರೆ

ಹೌದು, ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆರೋಪ ಕೇಳಿಬಂದಿದ್ದು, ಈ ಕುರಿತು ಸಚಿವ ಈಶ್ವರ ಖಂಡ್ರೆ ಅವರು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಲಿದ್ದಾರೆ. ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಕೂಡ ಆಗಿರುವ ಈಶ್ವರ ಖಂಡ್ರೆ ಅವರು ಭೇಟಿ ವೇಳೆ ಶಾಮನೂರು ಹೇಳಿಕೆ ಬಗ್ಗೆಯೂ ಚರ್ಚೆ ಮಾಡಿ, ಲಿಂಗಾಯತ ಅಧಿಕಾರಿಗಳ ಸಮಸ್ಯೆಗಳ ಬಗ್ಗೆ ವಿವರಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ