ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿಲ್ಲ, ಕಾಂಗ್ರೆಸ್ ನಮ್ಮ ಬೆಂಬಲ ಕೇಳಿಲ್ಲ: ಎಚ್​ಡಿ ಕುಮಾರಸ್ವಾಮಿ

ನಮ್ಮನ್ನು ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್​ ಹೇಳುತ್ತಿದೆ. ಸಂಸತ್ ಚುನಾವಣೆ ವೇಳೆ ಎಂಪಿ ಚುನಾವಣೆಯಲ್ಲಿ ಯಾರು ಯಾರನ್ನು ಗೆಲ್ಲಿಸಿದರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿಲ್ಲ, ಕಾಂಗ್ರೆಸ್ ನಮ್ಮ ಬೆಂಬಲ ಕೇಳಿಲ್ಲ: ಎಚ್​ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 28, 2021 | 3:33 PM

ಕೋಲಾರ: ಜಾತ್ಯತೀತ ಜನತಾದಳವು (ಜೆಡಿಎಸ್​) ವಿಧಾನ ಪರಿಷತ್ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದೊಂದಿಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆದರೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ನಮ್ಮ ಬೆಂಬಲ ಕೇಳಿರುವುದು ನಿಜ. ಕಾಂಗ್ರೆಸ್​ ಈವರೆಗೆ ನಮ್ಮ ಬೆಂಬಲ ಕೋರಿಲ್ಲ ಎಂದು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಾತಿನ ಮೋಡಿ ಮಾಡಿ ದಾರಿ ತಪ್ಪಿಸುತ್ತಿದೆ. ನಮ್ಮನ್ನು ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್​ ಹೇಳುತ್ತಿದೆ. ಸಂಸತ್ ಚುನಾವಣೆ ವೇಳೆ ಎಂಪಿ ಚುನಾವಣೆಯಲ್ಲಿ ಯಾರು ಯಾರನ್ನು ಗೆಲ್ಲಿಸಿದರು? ಹಾಗಾದ್ರೆ ಕಾಂಗ್ರೆಸ್​ ಪಕ್ಷವನ್ನು ಯಾವ ಟೀಂ ಎಂದು ಕರೆಯಬೇಕು ಎಂದು ಪ್ರಶ್ನಿಸಿದರು.

ಬಿಜೆಪಿ ಜೊತೆಗೆ ಜೆಡಿಎಸ್ ಒಳಒಪ್ಪಂದ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಮ್ಮ ಅಭ್ಯರ್ಥಿಗಳು ಆರು ಕಡೆ ಮಾತ್ರ ನಿಂತಿದ್ದಾರೆ. ಉಳಿದ 19 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ನಿಂತಿಲ್ಲ. ನಮ್ಮ ಬೆಂಬಲ ಕೋರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಸಹಕಾರ ಕೊಡಿ ಎಂದು ಭಾವನೆ ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್​ ಪಕ್ಷದವರು ನಮ್ಮ ಬೆಂಬಲ ಕೋರಿಲ್ಲ. ಹೀಗಾಗಿ ನೀವು ಬಿಜೆಪಿಗೆ ಬೆಂಬಲ ಕೊಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು. ನಮ್ಮನ್ನು ತುಳಿಯಲು ಹೋಗಿ ಕಾಂಗ್ರೆಸ್‌ನವರೇ ಬೀಳುತ್ತಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸುವ ವಿಚಾರದ ಬಗ್ಗೆ ಇನ್ನೆರೆಡು ದಿನಗಳಲ್ಲಿ ನಮ್ಮ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಮುಂದಿನ‌ ಚುನಾವಣೆಗೆ ರಾಜ್ಯದ ಎಲ್ಲಾ ಕ್ಷೇತ್ರದಗಳಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ. ಸ್ವತಂತ್ರ ಸರ್ಕಾರ ತರುವ ಗುರಿ ಇರಿಸಿಕೊಂಡಿದ್ದೇವೆ ಎಂದರು.

ಜನಸಾಮಾನ್ಯರಿಗೆ, ಕೃಷಿಕರಿಗೆ ಸಂಕಷ್ಟ ಎದುರಾಗಿರುವ ಸಂದರ್ಭ ಇದು. ಕೋಲಾರ ರಾಜಕಾರಣದಲ್ಲಿ ಹಲವಾರು ರೀತಿಯ ಬದಲಾವಣೆಗಳು ಆಗುತ್ತಿವೆ. ಪ್ರಸ್ತುತ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದೆ. ಸ್ಥಳೀಯ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಷತ್​ನ ಅಭ್ಯರ್ಥಿ ರಾಮಚಂದ್ರ ಅವರಿಗೆ MLA ಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಫಾರಂ ನೀಡಿದ್ದೆವು. ಆದರೆ ಕಾರಣಾಂತರಗಳಿಂದ ಶಾಸಕ ಶ್ರೀನಿವಾಸಗೌಡರಿಗೆ ನಾವು ಟಿಕೆಟ್ ನೀಡಿದೆವು. ನಮ್ಮ ಬಗ್ಗೆ, ದೇವೇಗೌಡರ ಬಗ್ಗೆ ವೈಯಕ್ತಿಕವಾಗಿ ಶ್ರೀನಿವಾಸಗೌಡ್ರು ಟೀಕೆ ಮಾಡಲಿ ಅಭ್ಯಂತರವಿಲ್ಲ. ಅವರ ವಿರುದ್ಧ ನಾವ್ಯಾಕೆ ಕ್ರಮ ಕೈಗೊಳ್ಳಬೇಕು. ಇನ್ನೊಂದು ವರ್ಷದಲ್ಲಿ ಜನರೇ ತೀರ್ಮಾನ ಮಾಡುತ್ತಾರೆ. ನಿಮ್ಮ ಗೆಲುವಿಗೆ ಆಗ ರಾಮಚಂದ್ರಗೌಡರ ಕೊಡುಗೆ ಇದೆ. ಅದೇ ರೀತಿ ನೀವು ಸಹ ಸಹಕರಿಸಿ ಎಂದು ಶ್ರೀನಿವಾಸಗೌಡರನ್ನು ಕೋರಿದರು.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪರೋಕ್ಷವಾಗಿ ಮಾತಿನ ಗುದ್ದು ನೀಡಿದ ಕುಮಾರಸ್ವಾಮಿ, ಕೋಲಾರ ಜಿಲ್ಲೆಯಲ್ಲಿ ನಾನು ಪ್ರಾಮಾಣಿಕ, ಪರಿಶುದ್ಧ ರಾಜಕಾರಿಣಿ ಅಂತ ಒಬ್ಬರು ಬಿಂಬಿಸಿಕೊಂಡಿದ್ದಾರೆ. ದಲಿತ ಮುಖಂಡ ಕೆ.ಎಚ್.ಮುನಿಯಪ್ಪ ಅವರ ಸೋಲಿಗೆ ಯಾರು ಕಾರಣ? ತನ್ನ ಸ್ವಾರ್ಥಕ್ಕಾಗಿ ಯಾರನ್ನು ಎಲ್ಲಿಗೆ ಬೇಕಾದ್ರೂ ಅವರು ನಿಲ್ಲಿಸುತ್ತಾರೆ. ಬಿಜೆಪಿಯ ಶಕ್ತಿ ಇಲ್ಲದೆ ಇದ್ದರೂ ಇಲ್ಲಿ ಅವರು ಲೋಕಸಭಾ ಸೀಟ್ ಗೆದ್ದರು. ಕೋಲಾರ-ಚಿಕಬಳ್ಳಾಪುರ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷ ಗೋವಿಂದೇಗೌಡರು ಸಹ ನಮ್ಮ ಜೊತೆಯವರು. ಆ ಪ್ರಾಮಾಣಿಕ ವ್ಯಕ್ತಿ ಗೋವಿಂದೇಗೌಡರನ್ನು ಉಪಯೋಗ ಮಾಡಿಕೊಂಡು ನಮ್ಮ ಪಕ್ಷದ ಅಭ್ಯರ್ಥಿಯನ್ನೇ ಸೋಲಿಸಿದ್ರು. ಆದರೆ ಈಗ ಗೋವಿಂದೇಗೌಡರಿಗೆ ಕಾಂಗ್ರೆಸ್​ನಲ್ಲಿ ಟಿಕೆಟ್ ಕೊಡಿಸದೆ ಬೀದಿಯಲ್ಲಿ ತಂದು ನಿಲ್ಲಿಸಿದ್ದಾರೆ. ಈಗಿನ ಕಾಂಗ್ರೆಸ್ ಅಭ್ಯರ್ಥಿಯನ್ನು ಎಲ್ಲಿಗೆ ಕರೆದುಕೊಂಡು ಹೋಗಿ ನಿಲ್ಲಿಸುತ್ತಾರೆ ನೋಡೋಣ. ನಾವೆಲ್ಲಾ ಶೂದ್ರರು, ಇತಿಹಾಸ ಇರುವ ಸಮಾಜ ನಮ್ಮದಲ್ಲ ಎಂದು ಹೆಸರು ಹೇಳದೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ ಹರಿಹಾಯ್ದರು.

ವಿಪರೀತ ಮಳೆಯಿಂದ ಆಗಿರುವ ಹಾನಿಯನ್ನು ಸರಿದೂಗಿಸಿಕೊಳ್ಳಲು ರೈತರಿಗೆ ಇನ್ನೂ ಎರಡು ವರ್ಷ ಬೇಕು. ಒಂದೊಂದು ಜಿಲ್ಲೆಯಲ್ಲಿ ಒಂದೊಂದು ಪರಿಸ್ಥಿತಿ ಇದೆ. ಕೃಷಿಕರು, ಬೀದಿ ಬದಿ ವ್ಯಾಪಾರಸ್ಥರು ಸಂಕಷ್ಟದಲ್ಲಿದ್ದಾರೆ. ಎಸ್​ಡಿಆರ್​ಎಫ್, ಎನ್​ಡಿಆರ್​ಎಫ್ ಪರಿಹಾರದಿಂದ ರೈತರನ್ನು ಉಳಿಸಲು ಸಾಧ್ಯವೇ? ರೈತರಿಗೆ ದೊಡ್ಡ ಮಟ್ಟದ ಪರಿಹಾರ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು. ನಾನು ಎಂದೂ ನೀರಿನ ವಿಚಾರವಾಗಿ ಕೋಲಾರ-ಚಿಕ್ಕಬಳ್ಳಾಪುರಕ್ಕೆ ಮೋಸ ಮಾಡಿಲ್ಲ. ಬೆಂಗಳೂರಿನ ಕೊಳಚೆ ನೀರು ಕೊಡಲೂ ವಿರೋಧ ಮಾಡಿಲ್ಲ. ಆದರೆ ಈ ಯೋಜನೆಗಳಿಗೆ ನನ್ನ ವಿರೋಧವಿದೆ ಎಂದು ಬಿಂಬಿಸಲಾಯಿತು. ಯಾರದೋ ಹಂಗಿನಲ್ಲಿ ಸಮಿಶ್ರ ಸರ್ಕಾರ ನಡೆಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೆಸಿ ವ್ಯಾಲಿ ನೀರಿನಿಂದ ಬೆಳೆದಿದ್ದೀರಿ ಎಂಬ ಕಾರಣಕ್ಕೆ ಕೋಲಾರದ ತರಕಾರಿಗೆ ಬೆಲೆ ಇಲ್ಲದಂತಾಗಿದೆ. ಇದರ ಪರಿಣಾಮ ನಾಲ್ಕು ವರ್ಷಗಳ ಬಳಿಕ ತಿಳಿಯಲಿದೆ. ಎತ್ತಿನಹೊಳೆ ಯೋಜನೆಯಲ್ಲಿ ಹಣ ತಿಂದಿರೋದು ಬಿಟ್ರೆ ಕೆಲಸ ಆಗಿಲ್ಲ. ತಲಾ ಐದು ಟಿಎಂಸಿ ನೀರನ್ನು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೊಡುತ್ತೇವೆ ಎಂದಿದ್ದರು. ಆದರೆ ಈವರೆಗೂ ಡಿಪಿಆರ್ ಸಹ ಮಾಡಿಲ್ಲ. ಕೆಲಸ ಮಾಡುತ್ತಿದ್ದಾರೆ. ಇದು ಕೋಲಾರದ ಸಾಧನೆಯೇ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮತ್ತೊಮ್ಮೆ ಪರೋಕ್ಷವಾಗಿ ಟೀಕಿಸಿದರು.

ಇದನ್ನೂ ಓದಿ: ಕೊಡಗು: ಪರಿಷತ್ ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ; ಆಶ್ಚರ್ಯ ಮೂಡಿಸಿದ ದಿಢೀರ್ ನಿರ್ಧಾರ ಇದನ್ನೂ ಓದಿ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್​ ಅಭ್ಯರ್ಥಿ ಘೋಷಣೆ; ಕಾಂಗ್ರೆಸ್, ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ಕುಮಾರಸ್ವಾಮಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್