ಮೇಲ್ಮನೆ ಉಪಚುನಾವಣೆ: ಇಂದಿನಿಂದ ನಾಮಪತ್ರ, ಬಿಜೆಪಿ-ಜೆಡಿಎಸ್ ಸ್ಪರ್ಧೆ ಡೌಟ್: ಕಾಂಗ್ರೆಸ್ನಿಂದ ಯಾರಾಗ್ತಾರೆ ಎಂಎಲ್‌ಸಿ?
ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಇಂದಿನಿಂದ (ಜೂನ್ 13) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೆಡಿಎಸ್-ಕಾಂಗ್ರೆಸ್ ಸ್ಪೆರ್ಧೆ ಅನುಮಾನವಾಗಿದೆ. ಹಾಗಾದ್ರೆ, ಕಾಂಗ್ರೆಸ್ನಿಮದ ಯಾರೆಲ್ಲ ಎಂಎಲ್‌ಸಿ ಆಗಲಿದ್ದಾರೆ?
ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ತೆರವಾದ ಮೂರು ಸ್ಥಾನಗಳಿಗೆ ಉಪಚುನಾವಣೆ (MLC By Election) ಘೋಷಣೆಯಾಗಿದ್ದು, ಜೂ. 30ಕ್ಕೆ ಮತದಾನ ನಡೆಯಲಿದೆ. ಹೌದು.. ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಇಂದಿನಿಂದ (ಜೂನ್ 13) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮೂರು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದಕ್ಕೆ ಜೆಡಿಎಸ್ ತೀರ್ಮಾನಿಸಿದೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅನುಮಾನ. ಹೀಗಾಗಿ ಕಾಂಗ್ರೆಸ್ನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.
ಇದನ್ನೂ ಓದಿ: MLC By Election: ವಿಧಾನಪರಿಷತ್ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪ ಚುನಾವಣೆ, ಅಂದೇ ಫಲಿತಾಂಶ
ಮೂರು ಸ್ಥಾನಗಳು ಬೇರೆ ಬೇರೆ ಅವಧಿಯಲ್ಲಿ ಮುಕ್ತಾಯಗೊಳ್ಳುವುದರಿಂದ ಪ್ರತ್ಯೇಕವಾಗಿ ಮೂರು ಅಧಿಸೂಚನೆಯನ್ನು ಪ್ರಕಟಿಸಲಾಗುತ್ತದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಿದ್ದು, ಒಂದೇ ದಿನ ಮೂರು ಸ್ಥಾನಗಳಿಗೆ ಪ್ರತ್ಯೇಕ ಚುನಾವಣೆ ನಡೆಯಲಿದೆ. ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮೂರು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದಕ್ಕೆ ಜೆಡಿಎಸ್ ತೀರ್ಮಾನಿಸಿದೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅನುಮಾನ. ಹೀಗಾಗಿ ಅವಿರೋಧ ಆಯ್ಕೆಯಾಗುವ ನಿರೀಕ್ಷೆಯಿದೆ. ಈ ತಿಂಗಳ 20ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 23ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ.30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಮತ್ತು ಲಕ್ಷ್ಮಣ್ ಸವದಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಪಕ್ಷ ತೊರೆದು ರಾಜೀನಾಮೆ ನೀಡಿದ ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ.
ಬಾಬುರಾವ್ ಚಿಂಚನಸೂರು ಅವಧಿಯು 2024ರ ಜೂ.17ರವರೆಗೆ ಇತ್ತು. ಅಂತೆಯೇ ಆರ್.ಶಂಕರ್ ಅವಧಿಯು 2026ರ ಜೂ.30ಕ್ಕೆ ಮುಕ್ತಾಯವಾಗುತ್ತಿದ್ದು, ಲಕ್ಷ್ಮಣ್ ಸವದಿ ಅವಧಿಯು 2028ರ ಜೂ.14ರವರೆಗೆ ಇತ್ತು. ಆದ್ರೆ, ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರಿಂದ ರಾಜೀನಾಮೆ ನೀಡಿದ್ದರು.
ಯಾರಾಗ್ತಾರೆ ಎಂಲ್ಸಿ?
ಉಭಯ ಸದನಗಳ ಸದಸ್ಯರಲ್ಲದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ಎಸ್ ಬೋಸರಾಜು ಅವರು ಸ್ಪರ್ಧೆಸುವುದು ಖಚಿತವಾಗಿದೆ. ಮಾರ್ಚ್ 20, 2023 ರಂದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರನ್ನು ಕಾಂಗ್ರೆಸ್ ಆಯ್ಕೆ ಮರು ಆಯ್ಕೆ ಮಾಡುವ ಸಾಧ್ಯತೆ ಇದೆ. ಚಿಂಚನಸೂರ್ ಅವರ ಅಧಿಕಾರಾವಧಿಯು ಜೂನ್ 17, 2024ರಂದು ಕೊನೆಗೊಳ್ಳಲಿದೆ.
ಇನ್ನೊಂದು ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಸಚಿವೆ ಉಮಾಶ್ರೀ, ಮುಖಂಡರಾದ ಬಿಎಲ್ ಶಂಕರ್, ವಿಎಲ್ ಸುದರ್ಶನ್, ಐವನ್ ಡಿಸೋಜಾ, ಲಕ್ಷ್ಮಣ್, ಕವಿತಾ ರೆಡ್ಡಿ, ಪುಷ್ಪಾ ಅಮರನಾಥ್, ಮಂಜುಳಾ ಮಾನಸ ಸೇರಿದಂತೆ ಇತರರ ಹೆಸರು ಕೇಳಿಬರುತ್ತಿವೆ.