AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸ್ತಿಲಲ್ಲೇ ವೈಎಸ್​​ವಿ ದತ್ತಾಗೆ ಎದುರಾಯ್ತು ಕಾನೂನು ಸಂಕಷ್ಟ

ಚುನಾವಣೆ ಹೊಸ್ತಿಲಲ್ಲೇ ಮಾಜಿ ಶಾಸಕ ವೈಎಸ್​ವಿ ದತ್ತಾ ಅವರಿಗೆ ಚೆಕ್ ಬೌನ್ಸ್​​​ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ.

ಚುನಾವಣೆ ಹೊಸ್ತಿಲಲ್ಲೇ ವೈಎಸ್​​ವಿ ದತ್ತಾಗೆ ಎದುರಾಯ್ತು ಕಾನೂನು ಸಂಕಷ್ಟ
ವೈಎಸ್‌ವಿ ದತ್ತಾ
ರಮೇಶ್ ಬಿ. ಜವಳಗೇರಾ
|

Updated on: Apr 15, 2023 | 7:45 PM

Share

ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈಎಸ್‍ವಿ ದತ್ತಾ(YSV Datta)) ಅವರು ಟಿಕೆಟ್ ಕೈತಪ್ಪಿದಕ್ಕೆ ವಾಪಸ್​ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದು, ಕಡೂರು ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇದರ ಮಧ್ಯೆ ದತ್ತಾ ಅವರಿಗೆ ಚೆಕ್ ಬೌನ್ಸ್​​​ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಹೌದು.. ಚೆಕ್ ಬೌನ್ಸ್​​​ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್​​​, ದತ್ತಾ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಸಿಎಸ್​ ಸೋಮೇಗೌಡ ಅವರು ಸಲ್ಲಿಸಿದ್ದ ಚೆಕ್​ ಬೌನ್ಸ್​ ದೂರು ಅರ್ಜಿ ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಎಸಿಎಂಎಂ) ನ್ಯಾಯಾಧೀಶ ಜೆ ಪ್ರೀತ್ ಅವರು ದತ್ತಾ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಕಡೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ವೈಎಸ್​ವಿ ದತ್ತಾಗೆ ಫೈನಲ್, ಹಾಲಿ ಅಭ್ಯರ್ಥಿ ಧನಂಜಯ್​ಗೆ ನಿರಾಸೆ

ಕಳೆದ ವಿಚಾರಣೆಯಲ್ಲಿ ದತ್ತಾ ಅವರು ದೂರುದಾರರಿಂದ ಪಡೆದುಕೊಂಡಿದ್ದ ಹಣವನ್ನು ಇಂದು (ಏಪ್ರಿಲ್ 15) ಹಿಂದಿರುಗಿವುದಾಗಿ ಭರವಸೆ ನೀಡಿದ್ದರು. ಆದ್ರೆ, ಇಂದು ವಿಚಾರಣೆ ವೇಳೆ ದತ್ತಾ ಅವರ ಪರ ವಕೀಲರು ನಮ್ಮ ಕಕ್ಷಿದಾರರಿಗೆ ಖುದ್ದು ಹಾಜರಾತಿಗೆ ವಿನಾಯಿತಿ ನೀಡುವಂತೆ ಕೋರಿದರು. ಆದ್ರೆ, ಕೋರ್ಟ್​ ಮನವಿಯನ್ನು ತಿರಸ್ಕರಿಸಿದ್ದು, ಖುದ್ದು ಹಾಜರಾಗುವಂತೆ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ್ದು, ಏಪ್ರಿಲ್ 26ರಂದು ವೈಎಸ್ ವಿ ದತ್ತಾ ಹಾಜರುಪಡಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ.

2022ರಲ್ಲಿ ದೂರುದಾರ ಸೋಮಶೇಖರ್​ ಸೇರಿದಂತೆ ಇತರರು ದತ್ತಾ ಅವರ ವಿರುದ್ಧ ಚೆಕ್​ ಬೌನ್ಸ್​ ಪ್ರಕರಣ ದಾಖಲಿಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳು ಇದ್ದು ಇದೇ ನ್ಯಾಯಾಲದಲ್ಲಿ ವಿಚಾರಣಾ ಹಂತದಲ್ಲಿವೆ.

ಕಾಂಗ್ರೆಸ್‌ನಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬೇಸರಗೊಂಡಿದ್ದ ವೈ.ಎಸ್‌.ವಿ ದತ್ತ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಇತ್ತೀಚೆಗಷ್ಟೇ ಘೋಷಣೆ ಮಾಡಿದ್ದರು. ಟವೆಲ್ ಗುರುತಿನಿಂದ ಸ್ಪರ್ಧೆಗಿಳಿಯುವುದಾಗಿ ಘೋಷಣೆ ಮಾಡಿದ್ದರು. ಬಳಿಕ ಹೆಚ್​ಡಿ ರೇವಣ್ಣ ಅವರು ದತ್ತಾ ಅವರನ್ನು ಮರಳಿ ಜೆಡಿಎಸ್ ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ದೇವೇಗೌಡರ ಹತ್ತಿರ ಮಾತುಕತೆ ನಡೆಸಿ, ಅಂತಿಮವಾಗಿ ಅವರನ್ನು ವಾಪಸ್​ ಜೆಡಿಎಸ್​ ಕರೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಇಂದು ಬಿಡುಗಡೆಯಾದ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿಯಲ್ಲಿ ದತ್ತಾ ಹೆಸರು ಸಹ ಇದೆ. ಈ ಚುನಾವಣೆ ಭರಾಟೆ ಮಧ್ಯೆ ಇದೀಗ ಕೋರ್ಟ್ ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ