ಸಿಎಂ ಇಬ್ರಾಹಿಂರನ್ನು ಪರಿಗಣಿಸದಿರುವುದು ಅವರ ಪಕ್ಷಕ್ಕೆ ಸಂಬಂಧಿಸಿದ್ದು: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರವಾಗಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂದ ಸಹ ಅಸಮಾಧಾನಗೊಂಡಿದ್ದರು. ಸದ್ಯ ಈ ಕುರಿತಾಗಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯೆ ನಿಡಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂರನ್ನು ಪರಿಗಣಿಸದಿರುವುದು ಅವರ ಪಕ್ಷಕ್ಕೆ ಸಂಬಂಧಿಸಿದ್ದು ಎಂದಿದ್ದಾರೆ.

ಸಿಎಂ ಇಬ್ರಾಹಿಂರನ್ನು ಪರಿಗಣಿಸದಿರುವುದು ಅವರ ಪಕ್ಷಕ್ಕೆ ಸಂಬಂಧಿಸಿದ್ದು: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 01, 2023 | 8:24 PM

ನವದೆಹಲಿ, ಅಕ್ಟೋಬರ್​ 01: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂರನ್ನು ಪರಿಗಣಿಸದಿರುವುದು ಅವರ ಪಕ್ಷಕ್ಕೆ ಸಂಬಂಧಿಸಿದ್ದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ನನಗೆ ಇದೆ. ಮೈತ್ರಿ ಮಾತುಕತೆ ಬಗ್ಗೆ ಹಂತಹಂತವಾಗಿ ಎಲ್ಲಾ ಮಾಹಿತಿ ನನಗೆ ಬಂದಿದೆ. ನನಗೆ ಮಾಹಿತಿ ಇಲ್ಲ ಅನ್ನುವುದು ಸರಿಯಲ್ಲ, ವರಿಷ್ಠರು ಚರ್ಚಿಸಿದ್ದಾರೆ. ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ, ಇದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.

ಸಂಜೆ ನಡೆಯುವ ಸಭೆಯಲ್ಲಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಬಗ್ಗೆ ಚರ್ಚಿಸಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ಪ್ರಸ್ತಾಪಿಸಿದರೆ ನನ್ನ ಅಭಿಪ್ರಾಯ ತಿಳಿಸುವೆ. ಮೈತ್ರಿಗೆ ಸಂಬಂಧಿಸಿದಂತೆ ಬಿಜೆಪಿ ಯಾವ ನಾಯಕರಿಗೂ ಅಸಮಾಧಾನವಿಲ್ಲ. ಜೆಡಿಎಸ್‌ ಪಕ್ಷದಲ್ಲಿ ವಿಶೇಷವಾಗಿ ಮುಸ್ಲಿಂ ನಾಯಕರಿಗೆ ಅಸಮಾಧಾನವಿದೆ. ಕೆಲವು ನಾಯಕರು ಜೆಡಿಎಸ್‌ ಪಕ್ಷ ಬಿಟ್ಟು ಹೋಗುತ್ತಿದ್ದಾರೆ ಎಂದರು.

ಯಾರೋ ಒಬ್ಬರು ಹೋದರೆ ಪಕ್ಷಕ್ಕೆ ಪರಿಣಾಮ ಬೀರುವುದಿಲ್ಲ

ಈ ಹಿಂದೆಯೂ ಮುಸ್ಲಿಮರು ಜೆಡಿಎಸ್‌ಗೆ ವಾಸ್ತವಿಕವಾಗಿ ಬೆಂಬಲ ನೀಡಿರಲಿಲ್ಲ. ಮುಸ್ಲಿಮರು ಜೆಡಿಎಸ್‌ಗೆ ಬೆಂಬಲ ನೀಡಿದ್ರೆ 19 ಸ್ಥಾನಕ್ಕೆ ಸೀಮಿತವಾಗುತ್ತಿರಲಿಲ್ಲ. ಮುಸ್ಲಿಮರು ಜೆಡಿಎಸ್‌ ತೊರೆಯುತ್ತಿರುವುದರಿಂದ ಯಾವುದೇ ಪರಿಣಾಮ ಬೀರಲ್ಲ. ಕಾಂಗ್ರೆಸ್‌ಗೆ ಬಿಜೆಪಿಯವರು ಹೋಗಲ್ಲ, ಲಮಾಣಿ ಸೇರಿ ಎಲ್ಲರ ಜತೆ ಚರ್ಚಿಸುವೆ. ಕೆಲ ಕಾರಣಗಳಿಗೆ ಯಾರೋ ಒಬ್ಬರು ಹೋದರೆ ಪಕ್ಷಕ್ಕೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜತೆ ಮೈತ್ರಿಗೆ ಇಬ್ರಾಹಿಂ ಅಸಮಾಧಾನ, ಕರೆ ಮಾಡಿ ಮುನಿಸು ಶಮನಕ್ಕೆ ಯತ್ನಿಸಿದ ದೇವೇಗೌಡ

ಸೀಟು ಹಂಚಿಕೆ ಬಗ್ಗೆ ಈಗಾಗಲೇ ಹೈಕಮಾಂಡ್ ನಾಯಕರು ಮಾತನಾಡಿದ್ದಾರೆ. ಯಾವ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬಹುದು ಎಂದು ಮಾತನಾಡಿದ್ದಾರೆ. ಇವತ್ತಿನ ಸಭೆಯಲ್ಲಿ ಕೇಳಿದರೆ ನಾನು ಸಲಹೆ ಕೊಡುವೆ ಎಂದು ತಿಳಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ನನ್ನ ಸಹಮತವಿದೆ

ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗದ ಬಗ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಶಾಮನೂರು ಶಿವಶಂಕರಪ್ಪ ಹೇಳಿಕೆ ವಾಸ್ತವಿಕವಾಗಿದೆ, ನನ್ನ ಸಹಮತವಿದೆ. ನಮ್ಮ ಸಮಾಜ ಒಟ್ಟಾಗಬೇಕಿದೆ, ಒಟ್ಟಾದಾಗ ಮಾತ್ರ ಪರಿಹಾರ ಸಿಗಲು ಸಾಧ್ಯ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:23 pm, Sun, 1 October 23