ಪಕ್ಷ ವಿರೋಧಿ ಹೇಳಿಕೆ ನೀಡಿದ 11 ಜನರಿಗೆ ನೋಟಿಸ್, ಬಹಿರಂಗ ಹೇಳಿಕೆ ನೀಡದಂತೆ ಸೂಚನೆ: ನಳಿನ್​ ಕುಮಾರ್ ಕಟೀಲು

| Updated By: ಗಂಗಾಧರ​ ಬ. ಸಾಬೋಜಿ

Updated on: Jun 30, 2023 | 3:02 PM

ಬಿಜೆಪಿಯಲ್ಲಿ ನಾಯಕರ ಬಹಿರಂಗ ಹೇಳಿಕೆಗೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು. ಬಳಿಕ ಮಾತನಾಡಿದ ಅವರು ಪಕ್ಷ ವಿರೋಧಿ ಹೇಳಿಕೆ ನೀಡಿದ 11 ಜನರಿಗೆ ನೋಟಿಸ್ ನೀಡಿದ್ದೇವೆ ಎಂದರು.

ಬೆಂಗಳೂರು: ಪಕ್ಷ ವಿರೋಧಿ ಹೇಳಿಕೆ ನೀಡಿದ 11 ಜನರಿಗೆ ನೋಟಿಸ್ (Notice) ನೀಡಿದ್ದೇವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್ ಕಟೀಲು ಹೇಳಿದರು. ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.

ಬಹಿರಂಗವಾಗಿ ಹೇಳಿಕೆ ನೀಡಿದವರನ್ನು ಕರೆದು ಮಾತನಾಡಿದ್ದೇವೆ. ಇನ್ಮುಂದೆ ಬಹಿರಂಗ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದೇವೆ. ಕಾಂಗ್ರೆಸ್ ಗ್ಯಾರಂಟಿ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ಮಾಡುತ್ತೇವೆ ಎಂದರು.

ಇದನ್ನೂ ಓದಿ: DK Shivakumar: ಜನರಿಗೆ ಕೊಟ್ಟಂಗೆ ನಮಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳ ಗ್ಯಾರಂಟಿ ಕೊಡಿ! ಪಕ್ಷಕ್ಕಾಗಿ ದುಡಿದ ಕಾಂಗ್ರೆಸ್​​ ಕಾರ್ಯಕರ್ತರ ಅಹವಾಲು

ಯತ್ನಾಳ್, ರೇಣುಕಾಚಾರ್ಯಗೆ ನೋಟಿಸ್

ಬಿಜೆಪಿ ನಾಯಕರಿಂದ ಬಹಿರಂಗ ಹೇಳಿಕೆ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ನಿನ್ನೆ ನೋಟಿಸ್ ಜಾರಿ ಮಾಡಲಾಡಗಿದೆ. ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ನೀಡಿದ್ದು, ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಇದಕ್ಕೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: ಸ್ವಪಕ್ಷದವರ ವಿರುದ್ಧವೇ ಬಹಿರಂಗ ಹೇಳಿಕೆ: ಯತ್ನಾಳ್, ರೇಣುಕಾಚಾರ್ಯಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಭೆ

ಬಿಜೆಪಿಯಲ್ಲಿ ನಾಯಕರ ಬಹಿರಂಗ ಹೇಳಿಕೆಗೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ಮಾಡಲಾಯಿತು. ಮಾಜಿ ಸಿಎಂ‌ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ‌ ಶಾಸಕ‌ರಾದ ಗೋವಿಂದ ಕಾರಜೋಳ, ಎ.ಎಸ್. ಪಾಟೀಲ್ ‌ನಡಹಳ್ಳಿ, ವೀರಣ್ಣ ಚರಂತಿಮಠ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:01 pm, Fri, 30 June 23