ಆ.25 ರಂದು ಎಸ್​.ಟಿ ಸೋಮಶೇಖರ್ ದೆಹಲಿ ಪ್ರಯಾಣ; ಅಮಿತ್​ ಶಾ, ಬಿಲ್​ ಸಂತೋಷ್​ಗೆ ಭೇಟಿ

ರಾಜ್ಯ ರಾಜಕಾರಣದಲ್ಲಿ ಆಪರೇಷನ್​​ ಹಸ್ತ ಸಾಕಷ್ಟು ಚರ್ಚೆಯಾಗುತ್ತಿದೆ. ಬಿಜೆಪಿಯ ಕೆಲ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್​​ ಸೇರಲು ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಯಶವಂತರಪುರ ಬಿಜೆಪಿ ಶಾಸಕ ಎಸ್​​.ಟಿ ಸೋಮಶೇಖರ್​ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಬಿಜೆಪಿ ಪಾಳಯದಲ್ಲಿ ಕಳವಳ ಸೃಷ್ಠಿ ಮಾಡಿತು. ಇದೀಗ ಎಸ್​.ಟಿ ಸೋಮಶೇಖರ್​ ಹೈಕಮಾಂಡ್​ ನಾಯಕರನ್ನು ಭೇಟಿಯಾಗಲು ಆಗಸ್ಟ್ 25 ರಂದು ದೆಹಲಿಗೆ ತೆರಳಲಿದ್ದಾರೆ.

ಆ.25 ರಂದು ಎಸ್​.ಟಿ ಸೋಮಶೇಖರ್ ದೆಹಲಿ ಪ್ರಯಾಣ; ಅಮಿತ್​ ಶಾ, ಬಿಲ್​ ಸಂತೋಷ್​ಗೆ ಭೇಟಿ
ಶಾಸಕ ಎಸ್​ ಟಿ ಸೋಮಶೇಖರ್​​
Follow us
| Updated By: ವಿವೇಕ ಬಿರಾದಾರ

Updated on:Aug 22, 2023 | 2:57 PM

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಪರೇಷನ್​​ ಹಸ್ತ ಸಾಕಷ್ಟು ಚರ್ಚೆಯಾಗುತ್ತಿದೆ. ಬಿಜೆಪಿಯ (BJP) ಕೆಲ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್​ (Congress)​ ಸೇರಲು ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಯಶವಂತರಪುರ ಬಿಜೆಪಿ ಶಾಸಕ ಎಸ್​​.ಟಿ ಸೋಮಶೇಖರ್ (ST Somshekar)​ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿದ್ದು ಬಿಜೆಪಿ ಪಾಳಯದಲ್ಲಿ ಕಳವಳ ಸೃಷ್ಠಿ ಮಾಡಿತು. ಇದಾದ ಬೆನ್ನಲ್ಲೇ ಎಸ್​.ಟಿ ಸೋಮಶೇಖರ್​ ಮನವೊಲಿಕೆಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಾಗಿದ್ದಾರೆ. ಇದೀಗ ಎಸ್​.ಟಿ.ಸೋಮಶೇಖರ್ ಹೈಕಮಾಂಡ್​ ನಾಯಕರನ್ನು ಭೇಟಿಯಾಗಲು ಆಗಸ್ಟ್ 25 ರಂದು ದೆಹಲಿಗೆ ತೆರಳಲಿದ್ದಾರೆ.

ಎಸ್​​.ಟಿ ಸೋಮಶೇಖರ್,​ ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಲಿದ್ದಾರೆ. ಎಸ್​​.ಟಿ ಸೋಮಶೇಖರ್​ ಆ.25ರಂದು ಬಿ.ಎಲ್.ಸಂತೋಷ್ ಭೇಟಿಯಾಗಲಿದ್ದಾರೆ. ಸೆಪ್ಟೆಂಬರ್​ 2ರಂದು ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ. ಇನ್ನು ಸೋಮವಾರ (ಆ.21) ರಂದು ಎಸ್ .ಟಿ. ಸೋಮಶೇಖರ್ ಅವರ ಪ್ರಮುಖ ಬೆಂಬಲಿಗರು ಹಾಗೂ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಉಪಮುಖ್ಯಮಂತ್ರಿ ಮತ್ತು ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈ ಮೂಲಕ ಫರ್‌ವಾಪಸಿಗೆ ಮೊದಲ ಹಂತಕ್ಕೆ ಚಾಲನೆ ದೊರಕಿತು.

ಇದನ್ನೂ ಓದಿ: ಆಪರೇಷನ್ ಹಸ್ತಕ್ಕೆ ಮತ್ತೊಬ್ಬ ಕಾಂಗ್ರೆಸ್​ ಶಾಸಕನ ವಿರೋಧ: ರಾಜಕೀಯ ನಿವೃತ್ತಿಗೆ ಮುಂದಾದ ತನ್ವೀರ್ ಸೇಠ್

ಎಸ್​.ಟಿ ಸೋಮಶೇಖರ್​ ಕ್ಷೇತ್ರಕ್ಕೆ ಭರ್ಜರಿ ಅನುದಾನ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಅವರ ಯಶವಂತಪುರ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರ 7.63 ಕೋಟಿ ರೂ. ಬಿಡುಗಡೆ ಮಾಡಿದೆ. ಅನುದಾನ ಮಂಜೂರು ಮಾಡಿರುವುದು ಭಾರಿ ಚರ್ಚೆಗೆ ಹಾಗೂ ಕುತೂಹಲ ಮೂಡಿಸಿದೆ. ಅಲ್ಲದೇ ಅನುದಾನ ನಿಡುವ ಮೂಲಕ ಅವರನ್ನು ಕಾಂಗ್ರೆಸ್​ಗೆ ಸೆಳೆಯುವ ತಂತ್ರವೇ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Tue, 22 August 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ