ಆಪರೇಷನ್ ಹಸ್ತ ಯಶಸ್ವಿಯಾಗದು, ಕಾಂಗ್ರೆಸ್ ಸರ್ಕಾರ ಪತ್ರಿಕಾ, ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿದೆ; ಬೊಮ್ಮಾಯಿ ಕಿಡಿ

ಕಾಂಗ್ರೆಸ್​​ನ ಆಪರೇಷನ್ ಹಸ್ತದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿದೆ. ಸರ್ಕಾರವು ಪತ್ರಿಕಾ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ. ಸರ್ವಾಧಿಕಾರದ ಆಡಳಿತ ನಡೆಸುತ್ತಿದೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.

ಆಪರೇಷನ್ ಹಸ್ತ ಯಶಸ್ವಿಯಾಗದು, ಕಾಂಗ್ರೆಸ್ ಸರ್ಕಾರ ಪತ್ರಿಕಾ, ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿದೆ; ಬೊಮ್ಮಾಯಿ ಕಿಡಿ
ಬಸವರಾಜ ಬೊಮ್ಮಾಯಿ
Follow us
Ganapathi Sharma
|

Updated on: Aug 25, 2023 | 9:02 PM

ಬೆಂಗಳೂರು, ಆಗಸ್ಟ್ 25: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಕಾಂಗ್ರೆಸ್ ‘ಆಪರೇಷನ್ ಹಸ್ತ (Operation Hasta)’ಕ್ಕೆ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ (Basavaraj Bommai) ಶುಕ್ರವಾರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನಗಳು ಬರಲಿವೆ ಎಂದು ಸಂಬಂಧ ಸಮೀಕ್ಷೆಗಳು ದೃಢಪಡಿಸಿವೆ. ಇದರಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ನೇರ ಪರಿಣಾಮ ಬೀರಲಿದೆ. ಹೀಗಾಗಿ ಕಾಂಗ್ರೆಸ್​ನವರು ಬೇರೆ ಪಕ್ಷಗಳಿಂದ ನಾಯಕರನ್ನು ಸೆಳೆದು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಷಡ್ಯಂತ್ರ ನಡೆಸುತ್ತಿದ್ದಾರೆ. ಅದು ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್​​ನ ಆಪರೇಷನ್ ಹಸ್ತದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿದೆ. ಭ್ರಷ್ಟಾಚಾರ ಮತ್ತು ಇತರ ಅಕ್ರಮಗಳ ಬಗ್ಗೆ ವರದಿ ಮಾಡುವ ಪತ್ರಕರ್ತರಿಗೆ ಕಾಂಗ್ರೆಸ್ ಸರ್ಕಾರ ನೋಟಿಸ್ ಜಾರಿ ಮಾಡುತ್ತಿದೆ. ಪತ್ರಿಕಾ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ. ಸರ್ವಾಧಿಕಾರದ ಆಡಳಿತ ನಡೆಸುತ್ತಿದೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ವಿರೋಧ ಪಕ್ಷಗಳ ಪ್ರಮುಖ ನಾಯಕರನ್ನು ಸ್ವಾಗತಿಸಲು ಪ್ರಾರಂಭಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 2ನೇ ಸ್ಥಾನ ಪಡೆದಿದ್ದ ಜೆಡಿಎಸ್‌ನ ಹಿರಿಯ ಮುಖಂಡ ಆಯನೂರು ಮಂಜುನಾಥ್ ಮತ್ತು ಎಸ್‌ಪಿ ನಾಗರಾಜೇಗೌಡ ಅವರು ಬೆಂಗಳೂರಿನಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಡಿಸಿಎಂ ಹಾಗೂ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: Chandrayaan 3 Success: ಚಂದ್ರಯಾನ 3 ರ ಯಶಸ್ಸಿನ ಶ್ರೇಯಸ್ಸಿಗೆ ಶುರುವಾಗಿದೆ ಪೈಪೋಟಿ?

ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಸೂಕ್ತವಾದ ಸೋಶಿಯಲ್ ಇಂಜಿನಿಯರಿಂಗ್ ಇಲ್ಲದೆ ಪಕ್ಷವು ನಷ್ಟವನ್ನು ಅನುಭವಿಸಿತು. ಲೋಕಸಭೆ ಚುನಾವಣೆಯಲ್ಲಿ ತಪ್ಪುಗಳನ್ನು ಸರಿಪಡಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

ಡಿಕೆ ಶಿವಕುಮಾರ್ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದ್ದಾರೆ. ಪ್ರಮುಖವಾಗಿ ಬಿಜೆಪಿ ಮತ್ತು ಜೆಡಿಎಸ್‌ನಿಂದ ಸುಮಾರು 15 ಪ್ರಮುಖ ನಾಯಕರನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ವಿಧಾನಸಭೆ ಚುನಾವಣೆಯ ಗೆಲುವಿನ ಬೆನ್ನಲ್ಲೇ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಬಯಸಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ