ಚುನಾವಣಾ ಪೂರ್ವದಲ್ಲಿ ಡಿಕೆ ಶಿವಕುಮಾರ್ ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು; ರವಿ ಗಣಿಗ

ಕಾಂಗ್ರೆಸ್​​ ಪಕ್ಷದ ಒಕ್ಕಲಿಗರ ನಾಯಕತ್ವ ಮುಗಿಸಲು ಹೊರಟಿದ್ದಾರೆ. 100 ಜನ ರಮೇಶ್ ಜಾರಕಿಹೊಳಿ ಬಂದರೂ ಡಿಕೆ ಶಿವಕುಮಾರ್​ ಅವರನ್ನು ಟಚ್ ಮಾಡಲು ಆಗಲ್ಲ. 7 ಜನ್ಮ ಎತ್ತಿದರೂ ಡಿ.ಕೆ.ಶಿವಕುಮಾರ್​ರನ್ನು ಮತ್ತೆ ಜೈಲಿಗೆ ಕಳಿಸಲು ಆಗಲ್ಲ ಎಂದು ಕಾಂಗ್ರೆಸ್​ ಶಾಸಕ ರವಿ ಗಣಿಗ ಹೇಳಿದರು.

ಚುನಾವಣಾ ಪೂರ್ವದಲ್ಲಿ ಡಿಕೆ ಶಿವಕುಮಾರ್ ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು; ರವಿ ಗಣಿಗ
ಶಾಸಕ ರವಿ ಗಣಿಗ
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 30, 2023 | 4:00 PM

ಮಂಡ್ಯ ಅ.30: ರಾಜಕೀಯವಾಗಿ ಡಿ.ಕೆ.ಶಿವಕುಮಾರ್ (DK Shivamkumar) ಮುಗಿಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ರಮೇಶ್​ ಜಾರಕಿಹೊಳಿ (Ramesh Jarkiholi) ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು. ಕಾಲು ಹಿಡಿಯಲು ಬಂದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ.ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾನೆ ಎಂದು ಬಿಜೆಪಿ ಶಾಸಕ ಮೇಶ್ ಜಾರಕಿಹೊಳಿ ವಿರುದ್ಧ ಶಾಸಕ ರವಿ ಗಣಿಗ (Ravi Ganig) ಏಕವಚನದಲ್ಲಿ ವಾಗ್ದಾಳಿ ಮಾಡಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್​​ ಪಕ್ಷದ ಒಕ್ಕಲಿಗರ ನಾಯಕತ್ವ ಮುಗಿಸಲು ಹೊರಟಿದ್ದಾರೆ. 100 ಜನ ರಮೇಶ್ ಜಾರಕಿಹೊಳಿ ಬಂದರೂ ಡಿಕೆ ಶಿವಕುಮಾರ್​ ಅವರನ್ನು ಟಚ್ ಮಾಡಲು ಆಗಲ್ಲ. 7 ಜನ್ಮ ಎತ್ತಿದರೂ ಡಿ.ಕೆ.ಶಿವಕುಮಾರ್​ರನ್ನು ಮತ್ತೆ ಜೈಲಿಗೆ ಕಳಿಸಲು ಆಗಲ್ಲ ಎಂದರು.

ಡಿಕೆ ಶಿವಕುಮಾರ್​ ಸಿಡಿ ಮಾಸ್ಟರ್​ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಬೆಡ್ ಮೇಲೆ ನಾವು ಮಲಗಲು ಹೋಗಿದ್ವಾ?. ಸಿಡಿ ಮಾಡಿದವನು ಯಾರೋ, ತೋರಿಸಿರೋನು ಯಾರೋ. ಹೀಗೆ ಮಾತನಾಡಿ ಮಾತನಾಡಿಯೇ ಅವರು ಮಾಜಿ ಆಗಿರುವುದು, ನಾವು ಅಧಿಕಾರಕ್ಕೆ ಬಂದಿರುವುದು. ಇದನ್ನೆಲ್ಲ ಬಿಟ್ಟು ರಾಜ್ಯದಲ್ಲಿ ಬರ ಇದೆ, ಜನರ ಬಳಿಗೆ ಹೋಗಬೇಕು. ಅದನ್ನು ಬಿಟ್ಟು ಡಿಸಿಎಂ ಅವರನ್ನು ಜೈಲಿಗೆ ಕಳುಹಿಸುತ್ತೇನೆ, ಅವರನ್ನ ಮಾಜಿ ಮಾಡುತ್ತೇನೆ ಅನ್ನುವುದನ್ನು ಬಿಡಬೇಕು. ಹುಚ್ಚರಂತೆ ಮಾತನಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಬರ್ತಿಯೋ ಸಿಡಿ ಬಿಡ್ಲೋ ಎಂದು ಮಂತ್ರಿಗೆ ಡಿಕೆ ಶಿವಕುಮಾರ್ ಹೆದರಿಸುತ್ತಿದ್ದಾರೆ, ರಮೇಶ್​ ಜಾರಕಿಹೊಳಿ ಗಂಭೀರ ಆರೋಪ

ನಮ್ಮ ಶಾಸಕರಲ್ಲಿ ಯಾವುದೇ ಅಸಮಾದಾನವಿಲ್ಲ. 137 ಜನ ಶಾಸಕರು ಎಲ್ಲರ ಜೊತೆ ಇದ್ದೇವೆ. ನಾವೆಲ್ಲ ಸಂತೋಷವಾಗಿದ್ದೇವೆ. ವಿರೋಧ ಪಕ್ಷದವರಿಗೆ ಅಧಿಕಾರವಿಲ್ಲ, ಇದನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಪ್ರತಿದಿನ ಒಂದೊಂದು ಏನೇನೊ ಹೇಳುತ್ತಿದ್ದಾರೆ ಎಂದರು.

ಡಿಕೆ ಶಿವಕುಮಾರ್ ಮಾಜಿ ಆಗಲಿದ್ದಾರೆ ಎಂದ ರಮೇಶ್ ಜಾರಕಿಹೊಳಿ

ಡಿ.ಕೆ.ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ಹೆಸರು ಕೆಡಿಸುತ್ತಿದೆ. ಡಿಕೆ ಆ್ಯಂಡ್ ಕಂಪನಿ ಆಪರೇಷನ್ ಕಮಲ ಮಾಡುತ್ತಿದ್ದಾರೆ ಅಂತಿದ್ದಾರೆ. ಆಪರೇಷನ್ ಕಮಲದ ಬಗ್ಗೆ ನಾವು ಚಕಾರ ಎತ್ತಿಲ್ಲ. ರಾಜ್ಯದಲ್ಲಿ ಆಪರೇಷನ್ ಕಮಲ ಆಗಲು ಸಾಧ್ಯವಿಲ್ಲ. ನಂಬರ್ ಹೆಚ್ಚು ಬೇಕು, ಮಹಾರಾಷ್ಟ್ರ ಮಾದರಿಯಲ್ಲಿದರೆ ಸರ್ಕಾರ ಬದಲಾಗುವುದು. ಒಂದು ರಾತ್ರಿಯಲ್ಲಿ ಎಲ್ಲವೂ ಬದಲಾಗುವುದು. ಅತೀ ಶೀಘ್ರದಲ್ಲಿ ಡಿಕೆ ಶಿವಕುಮಾರ್ ಮಾಜಿ ಮಂತ್ರಿ ಆಗಲಿದ್ದಾರೆ. ರಾಜಕೀಯ ವ್ಯವಸ್ಥೆಯಿಂದ ಗೊತ್ತಾಗುತ್ತಿದೆ. ಹೈಕೋರ್ಟ್ ಹಿನ್ನಡೆಯಿಂದ ಅವರು ಮಾಜಿ ಅಗಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು