AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ರಾಜೀವ್ ಗಾಂಧಿ ವಿವಿ ಸ್ಥಳಾಂತರಕ್ಕೆ ವಿರೋಧ; ಕುಮಾರಸ್ವಾಮಿ ಹೋರಾಟವನ್ನು ಸ್ವಾಗತಿಸಿದ ಡಿಕೆ ಶಿವಕುಮಾರ್

ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಕನಕಪುರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ರಾಮನಗರದ ಜನರು ಮತ್ತು ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿವಿ ಸ್ಥಳಾಂತರ ಮಾಡದಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ.

ರಾಮನಗರ ರಾಜೀವ್ ಗಾಂಧಿ ವಿವಿ ಸ್ಥಳಾಂತರಕ್ಕೆ ವಿರೋಧ; ಕುಮಾರಸ್ವಾಮಿ ಹೋರಾಟವನ್ನು ಸ್ವಾಗತಿಸಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಮತ್ತು ಹೆಚ್​ಡಿ ಕುಮಾರಸ್ವಾಮಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: Rakesh Nayak Manchi|

Updated on:Aug 28, 2023 | 4:40 PM

Share

ರಾಮನಗರ, ಆಗಸ್ಟ್ 28: ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ (Ramanagara) ಕನಕಪುರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ರಾಮನಗರದ ಜನರು ಮತ್ತು ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ (H.D.Kumaraswamy) ಅವರು ವಿವಿ ಸ್ಥಳಾಂತರ ಮಾಡದಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ.

ಕನಕಪುರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹೆಚ್​ಡಿ ಕುಮಾರಸ್ವಾಮಿ ಅವರ ಅವಧಿಯಲ್ಲೇ ಇದಕ್ಕೆ ಹಣ ಬಿಡುಗಡೆ ಆಗಿತ್ತು. ಟೆಂಡರ್ ಸಹ ಆಗಿ ನಿಂತಿತ್ತು. ಈಗ ರಾಜಕೀಯವಾಗಿ ಎತ್ತಿಕಟ್ಟುತ್ತಿದ್ದಾರೆ. ತೊಂದರೆಯಿಲ್ಲ. ಅವರ ಹೋರಾಟವನ್ನು ನಾನು ಸ್ವಾಗತ ಮಾಡುತ್ತೇನೆ ಎಂದರು.

ರಾಮನಗರದ ಬಹುನಿರೀಕ್ಷಿತ ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪನೆಗೆ ಆರಂಭದಿಂದಲೂ ಸಂಕಷ್ಟ ಎದುರಾಗುತ್ತಲೇ ಇದೆ. ಹಲವು ಬಾರಿ ಶಂಕುಸ್ಥಾಪನೆ ಆಗಿದ್ದರೂ ಅದರ ನಿರ್ಮಾಣ ಕಾರ್ಯ ನಡೆದಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ವಿವಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿತ್ತು. ಬಳಿಕ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿಪೂಜೆ ನೆರವೇರಿಸಿದ್ದರು. ಇದೀಗ ಕಾಮಗಾರಿ ಆರಂಭವಾಗುವ ಹಂತದಲ್ಲೇ ವಿವಿ ಸ್ಥಳಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ನೈಸ್​ ಅಕ್ರಮ ಮಾಡಿದವರ ಪಟ್ಟಿ ಇದೆ ಎಂದ ಹೆಚ್​​ ಡಿ ದೇವೇಗೌಡ; ನಮ್ಮ ಬಳಿ ಇರುವ ಪಟ್ಟಿ ತೆಗೆಯಲಾ: ಡಿಕೆ ಶಿವಕುಮಾರ್​​ ಸವಾಲ್​

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ವಿವಿಧ ಸಂಘಟನೆಗಳು ಸ್ಥಳಾಂತರ ನಿರ್ಧಾರವನ್ನು ಖಂಡಿಸಿವೆ.

ಶತಾಯ ಗತಾಯ ಕನಕಪುರಕ್ಕೆ ಒಂದು ಮೆಡಿಕಲ್‌ ಕಾಲೇಜು ತೆಗೆದುಕೊಂಡು ಹೋಗಬೇಕು ಎಂದು ಪಟ್ಟುಹಿಡಿದಿರುವ ಡಿಕೆ ಶಿವಕುಮಾರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಆಡಳಿತ ಕಚೇರಿಯನ್ನ ರಾಮನಗರದಲ್ಲಿ ನಿರ್ಮಿಸಿ, ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರಾಮನಗರ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಬೇಕಿದ್ದ ಮೆಡಿಕಲ್ ಕಾಲೇಜು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನ ವಿರೋಧಿಸಿ ಪಕ್ಷಾತೀತ ಹೋರಾಟಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮೆಡಿಕಲ್ ಕಾಲೇಜು ಶಿಫ್ಟ್ ಆಗಬಾರದು, ಅವರದ್ದೇ ಸರ್ಕಾರ ಇರುವಾಗ ಕನಕಪುರಕ್ಕೆ ಹೊಸ ಕಾಲೇಜು ಮಂಜೂರು ಮಾಡಿಸಿಕೊಳ್ಳಿ ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Mon, 28 August 23

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More