ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಮತ್ತೊಂದು ದಲಿತಾಸ್ತ್ರ ಪ್ರಯೋಗ, ಏನದು?

| Updated By: Rakesh Nayak Manchi

Updated on: Oct 19, 2023 | 7:08 AM

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ, ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಕೇಂದ್ರದಲ್ಲಿ ಎನ್​​ಡಿಎ ನೇತೃತ್ವದ ಸರ್ಕಾರ ರಚನೆಗೆ ಕೊಡುಗೆ ನೀಡುವ ಗುರಿಯನ್ನು ಇಟ್ಟುಕೊಂಡಿದೆ. ಈಗಾಗಲೇ ತಯಾರಿ ಆರಂಭಿಸಿದಿ ವಿಪಕ್ಷ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ದಲಿತ ಸಮುದಾಯಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಮುಂದಾಗಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಮತ್ತೊಂದು ದಲಿತಾಸ್ತ್ರ ಪ್ರಯೋಗ, ಏನದು?
ಕಾಂಗ್ರೆಸ್ ಸರ್ಕಾರದ ವಿರುದ್ಧ ಎಸ್​ಸಿ ಮತ್ತು ಎಸ್​ಟಿ ಮೋರ್ಛಾಗಳ ಮೂಲಕ ಪಾದಯಾತ್ರೆ ನಡೆಸಲು ವಿಪಕ್ಷ ಬಿಜೆಪಿ ಪ್ಲ್ಯಾನ್
Follow us on

ಬೆಂಗಳೂರು, ಅ.19: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ (BJP), ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಕೇಂದ್ರದಲ್ಲಿ ಎನ್​​ಡಿಎ (NDA) ನೇತೃತ್ವದ ಸರ್ಕಾರ ರಚನೆಗೆ ಕೊಡುಗೆ ನೀಡುವ ಗುರಿಯನ್ನು ಇಟ್ಟುಕೊಂಡಿದೆ. ಈಗಾಗಲೇ ತಯಾರಿ ಆರಂಭಿಸಿದಿ ವಿಪಕ್ಷ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ದಲಿತ ಸಮುದಾಯಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಮುಂದಾಗಿದೆ.

ತಾನು ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಹಣಕಾಸಿನ ಕೊರತೆ ಎದುರಾಗಿದೆ. ಹೀಗಾಗಿ ಎಸ್​​ಸಿಪಿ ಟಿಎಸ್​ಪಿ ಹಣವನ್ನು ಮಹಿಳೆಯರಿಗೆ ಉಚಿತವಾಗಿ ಸಾರಿಗೆ ಬಸ್​ಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡುವ ಶಕ್ತಿ ಯೋಜನೆಗೆ ಬಳಕೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಎಸ್​ಸಿಪಿ ಟಿಎಸ್​ಪಿ ಹಣವನ್ನು ಶಕ್ತಿ ಸೇರಿದಂತೆ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಿರುವ ಆರೋಪ ಮುಂದಿಟ್ಟುಕೊಂಡು ಎಸ್​ಸಿ ಮತ್ತು ಎಸ್​ಟಿ ಮೋರ್ಛಾಗಳ ಮೂಲಕ ಪಾದಯಾತ್ರೆ ಮಾಡಲು ಫ್ಲ್ಯಾನ್ ಹಾಕಿಕೊಂಡಿದೆ.

ಇದನ್ನೂ ಓದಿ: ಹೆಚ್ಚಾಯ್ತು ಬಿಜೆಪಿ, ಕಾಂಗ್ರೆಸ್ ವಾಕ್ಸಮರ: ಆರೋಪಗಳಿಗೆ ಟಕ್ಕರ್ ಕೊಡಲು ಆಪ್ತರಿಗೆ ಸಿದ್ದರಾಮಯ್ಯ ಕೊಟ್ಟ ಸೂಚನೆಯೇನು?

ಒಂದು ತಿಂಗಳ ಹಿಂದೆಯೇ ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾಜಿ ಸಚಿವ ಗೋವಿಂದ ಎಂ ಕಾರಜೋಳ ಅವರು ಪ್ರಸ್ತಾಪ ಮಾಡಿದ್ದು, ಬಳಿಕ ಸುಮ್ಮನಾಗಿದ್ದರು. ದಾವಣಗೆರೆ ಜಿಲ್ಲೆಯ ಹರಿಹರದಿಂದ ಪಾದಯಾತ್ರೆ ನಡೆಸಲು ಕಾರಜೋಳ ಅವರು ಒಲವು ಹೊಂದಿದ್ದರು.

ಆದರೆ, ಮೋರ್ಛಾ ಅಧ್ಯಕ್ಷರು ಮೈಸೂರಿನಿಂದ ಪಾದಯಾತ್ರೆಯನ್ನು ಆರಂಭಿಸಲು ಒಲವು ಹೊಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತವರು ಜಿಲ್ಲೆಗಳಲ್ಲಿ ಪಾದಯಾತ್ರೆ ಸಾಗುತ್ತದೆ ಎಂಬ ಕಾರಣಕ್ಕಾಗಿ ಮೈಸೂರಿನಿಂದ ಆರಂಭಕ್ಕೆ ಒಲವು ಹೊಂದಿದ್ದಾರೆ.

ಬೆಂಗಳೂರಿಗೆ ಪಕ್ಷದ ದಲಿತ ಸಮುದಾಯದ ನಾಯಕರನ್ನು ಒಳಗೊಂಡು ಪಾದಯಾತ್ರೆ ಬಗ್ಗೆ ನಡೆದಿರುವ ಪ್ಲ್ಯಾನ್ ನಡೆದಿದೆ. ಆದರೆ ಎಲ್ಲಿಂದ ಮತ್ತು ಯಾವಾಗ ಆರಂಭಿಸಬೇಕು ಎಂಬ ವಿಚಾರದಲ್ಲಿ ಬಿಜೆಪಿ ನಾಯಕರು ಇದುವರೆಗೆ ಯಾವುದೇ ತೀರ್ಮಾನ ಮಾಡಿಲ್ಲ. ಒಟ್ಟಾರೆಯಾಗಿ ಎಸ್​ಸಿಪಿ ಟಿಎಸ್​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ತಿರುಗಿಸಿದ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಬ್ಯಾಂಕ್ ಅನ್ನು ತಮ್ಮತ್ತ ತಿರುಗಿಸಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದೆ. ಆ ಮೂಲಕ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಇಟ್ಟುಕೊಂಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 am, Thu, 19 October 23