AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಾಲಾಯಕ್ ಸರ್ಕಾರ, ಸಿದ್ದರಾಮಯ್ಯರ ಇಳಿಸುವ ಗ್ಯಾಂಗ್ ಕಾಂಗ್ರೆಸ್​​ನಲ್ಲೇ ಇದೆ: ಅಶೋಕ್ ವಾಗ್ದಾಳಿ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಚುನಾವಣಾ ಸಿದ್ದತಾ ಕಾರ್ಯಗಾರದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್ ಅಶೋಕ್, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜತೆಗೆ, ಮಂಡ್ಯ ರಾಜಕಾರಣ ಹಾಗೂ ಮೈತ್ರಿ ಸಂಬಂಧವಾಗಿ ಮಾತನಾಡಿದರು. ಅಶೋಕ್ ಮಾತಿನ ವಿವರಗಳಿಗಾಗಿ ಮುಂದೆ ಓದಿ.

ಇದು ನಾಲಾಯಕ್ ಸರ್ಕಾರ, ಸಿದ್ದರಾಮಯ್ಯರ ಇಳಿಸುವ ಗ್ಯಾಂಗ್ ಕಾಂಗ್ರೆಸ್​​ನಲ್ಲೇ ಇದೆ: ಅಶೋಕ್ ವಾಗ್ದಾಳಿ
ಅಶೋಕ್
Ganapathi Sharma
|

Updated on: Mar 23, 2024 | 12:38 PM

Share

ಬೆಂಗಳೂರು, ಮಾರ್ಚ್​ 23: ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (Siddaramaiah) ಹುದ್ದೆಯಿಂದ ಕೆಳಗೆ ಇಳಿಸಲು ಸಂಚು ಹೂಡುವ ಗ್ಯಾಂಗ್ ಕಾಂಗ್ರೆಸ್ ಪಕ್ಷದಲ್ಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ (BJP) ಚುನಾವಣಾ ಸಿದ್ದತಾ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ಕಾಂಗ್ರೆಸ್ ಪಕ್ಷದ ಸ್ಥಿತಿಯ ಬಗ್ಗೆ ಈಗಾಗಲೇ ಹೇಳಿದ್ದಾರೆ. ರಾಜ್ಯದಲ್ಲಿ ಸೂಪರ್ ಸಿಎಂ, ಶಾಡೋ ಸಿಎಂ ಬಹಳಷ್ಟು ಮಂದಿ ಇದ್ದಾರೆ. ಬಿಕೆ ಹರಿಪ್ರಸಾದ್ ಕೂಡ ಮಸಾಲತ್ತು ಮಾಡುತ್ತಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸ್ ನಿಜ ಹೇಳಿದ್ದಾರೆ ಎಂದು ಹೇಳಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸ್ಥಿರ ಸರ್ಕಾರವನ್ನು ಜನ ಬಯಸಿದ್ದಾರೆ. ಅತಂತ್ರ ಕಿಚಡಿ ಸರ್ಕಾರ ಜನರಿಗೆ ಬೇಕಾಗಿಲ್ಲ. ಕರ್ನಾಟಕದಲ್ಲೂ ಕೆಲವು ಬಾರಿ ಕಿಚಡಿ ಸರ್ಕಾರ ಆಗಿತ್ತು. ಆವಾಗಲೆಲ್ಲ ಪಚಡಿ ಆಗಿಹೋಗಿತ್ತು. ಜನರಿಗೆ ಈಗ ಅದು ಬೇಕಾಗಿಲ್ಲ. ಜನ ಸುಭದ್ರ ಸರ್ಕಾರವನ್ನು ಬಯಸುತ್ತಿದ್ದಾರೆ ಎಂದು ಅಶೋಕ್ ಹೇಳಿದರು.

ಐದು ವರ್ಷ ಸುಭದ್ರ ಸರ್ಕಾರ ನೀಡುವ ಸಾಮರ್ಥ್ಯ ಇರುವುದು ರೇಂದ್ರ ಮೋದಿ ಅವರಿಗೆ ಮಾತ್ರ. ಇದನ್ನು ಕರ್ನಾಟಕದ ಜನ ಅರ್ಥ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ರಾಜ್ಯದ ಜನ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಆಯ್ಕೆ ಮಾಡುತ್ತಾರೆ ಎಂದು ಅಶೋಕ್ ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್​ನವರದ್ದು ನಾಲಾಯಕ್ ಸರ್ಕಾರ

ರಾಜ್ಯದಲ್ಲಿರುವುದು ಕಾಂಗ್ರೆಸ್ ಪಕ್ಷದ ನಾಲಾಯಕ್ ಸರ್ಕಾರ. ಇದು ಜನರಿಗೆ ದ್ರೋಹ ಮಾಡಿದಂಥ ಸರ್ಕಾರ. ಮೇಕೆದಾಟು ವಿಚಾರದಲ್ಲಿ ದ್ವಂದ್ವ ನೀಲು ಪ್ರದರ್ಶಿಸಿದ ಸರ್ಕಾರ ಇಲ್ಲಿದೆ. ಈ ಸರ್ಕಾರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿಲ್ಲ. ಜನ ಕುಡಿಯುವ ನೀರಿಗೆ ಒದ್ದಾಡುತ್ತಿದ್ದರೂ ಸ್ಪಂದಿಸದ ಸರ್ಕಾರ ಇಲ್ಲಿದೆ. ಈ ಭ್ರಷ್ಟ ಸರ್ಕಾರಕ್ಕೆ ಜನ ಬೆಂಬಲ ನೀಡಲ್ಲ. ಬದಲಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ನೀಡುತ್ತಾರೆ ಎಂದು ಅಶೋಕ್ ಹೇಳಿದರು.

ಬಿಜೆಪಿ, ಜೆಡಿಎಸ್ ಹಾಲು ಜೇನಿನಂತೆ ಕೆಲಸ ಮಾಡಲಿವೆ: ಅಶೋಕ್

ಮಂಡ್ಯ ರಾಜಕಾರಣಕ್ಕೆ ಸಂಬಂಧಿಸಿ ಸಂಸದೆ ಸುಮಲತಾ ಅಧಿಕೃತ ಟಿಕೆಟ್ ಘೋಷಣೆ ಬಳಿಕ ನಿರ್ಧಾರ ಎಂಬ ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಅಶೋಕ್, ಅವರು ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದಾರೆ. ಅಲ್ಲಿಯೇ ಅವರ ವಿಚಾರ ತೀರ್ಮಾನ ಆಗಲಿದೆ. ಚೆಂಡು ಕೇಂದ್ರದ ಅಂಗಳದಲ್ಲಿದೆ. ಇಂದು ರಾತ್ರಿ ಅಥವಾ ನಾಳೆ ಟಿಕೆಟ್ ಘೋಷಣೆ ಆಗಲಿದೆ. ಬಿಜೆಪಿ ಜೆಡಿಎಸ್ ಹಾಲು ಜೇನಿನಂತೆ ಒಟ್ಟಾಗಿ ಕೆಲಸ ಮಾಡಲಿವೆ ಎಂದು ಹೇಳಿದರು.

ಇದನ್ನೂ ಓದಿ: ಕುಟುಂಬ ರಾಜಕಾರಣದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೀಗೆ

ನಮಗೆ ಮೋದಿ ನಾಯಕತ್ವ, ಎನ್​ಡಿಎ ಮೈತ್ರಿಕೂಟವಿದೆ. ಆದರೆ, ‘ಇಂಡಿಯಾ’ ಮೈತ್ರಿಕೂಟದಲ್ಲಿ ಯಾರೂ ಇಲ್ಲ ಎಂದು ಅಶೋಕ್ ಟೀಕಿಸಿದರು.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು