ಸಿದ್ದರಾಮಯ್ಯ ಪಾಕಿಸ್ತಾನ, ಅಫ್ಘಾನಿಸ್ಥಾನ, ಬಾಂಗ್ಲಾದೇಶಕ್ಕೆ ಹೋಗಿ ಸ್ಪರ್ಧಿಸಲಿ: ಆರ್ ಅಶೋಕ್
ವಿಪಕ್ಷನಾಯಕ ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಸಿದ್ದರಾಮಯ್ಯ ಪಾಕಿಸ್ತಾನ, ಅಫ್ಘಾನಿಸ್ಥಾನ, ಬಾಂಗ್ಲಾದೇಶಕ್ಕೆ ಹೋಗಿ ಸ್ಪರ್ಧಿಸಲಿ. ಬಹುಶಃ ಆ ದೇಶಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೆಲ್ಲಬಹುದು ಎಂದು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಬಳ್ಳಾರಿ: ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಸಿದ್ದರಾಮಯ್ಯ ಪಾಕಿಸ್ತಾನ (Pakistan), ಅಫ್ಘಾನಿಸ್ಥಾನ (Afghanistan), ಬಾಂಗ್ಲಾದೇಶಕ್ಕೆ (Bangladesh) ಹೋಗಿ ಸ್ಪರ್ಧಿಸಲಿ. ಬಹುಶಃ ಆ ದೇಶಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೆಲ್ಲಬಹುದು ಎಂದು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ (R Ashok) ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಈಗಾಗಲೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಬಾದಾಮಿ ಕ್ಷೇತ್ರ ಬಿಟ್ಟು ಓಡಿ ಬಂದಿದ್ದಾರೆ. ಕೋಲಾರದಲ್ಲೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಗೆಲುವು ಕಷ್ಟವಿದೆ. ಹೀಗಾಗಿ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಕಡೆ ಮುಖ ಮಾಡುತ್ತಿದ್ದಾರೆ ಎಂದು ಹೇಳಿದರು.
ಬಳ್ಳಾರಿಯಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶ ನೋಡಿಕೊಂಡರೆ ಒಳ್ಳೆಯದು. ಸಿದ್ದರಾಮಯ್ಯಗೆ ಅವರ ಪಕ್ಷದವರೇ ವಿಲನ್ ಆಗಿದ್ದಾರೆ. ಸಿದ್ದರಾಮಯ್ಯರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಸೋಲಿಸುತ್ತಾರೆ. 224 ಕ್ಷೆತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡೋಕೆ ಚಾನ್ಸೇ ಇಲ್ಲ ಮಾಡಿದ್ರು ಅವರು ಗೆಲ್ಲೋದಿಲ್ಲ. ಯಾಕಂದ್ರೆ ಎಲ್ಲಿಗೆ ಹೋದರು ಅವರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.
ಇದನ್ನೂ ಓದಿ: ಸಿದ್ದರಾಮಯ್ಯಗೆ ಮತ್ತೆ ಕ್ಷೇತ್ರ ಗೊಂದಲ; ಕೋಲಾರದಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಲಹೆ?
ವಸತಿ ಸಚಿವ ವಿ ಸೋಮಣ್ಣ ಕಾಂಗ್ರೆಸ್ ಪಕ್ಷ ಸೇರುವ ವಿಚಾರವಾಗಿ ಮಾತನಾಡಿದ ಅವರು ಸೋಮಣ್ಣನವರ ಸಿಟ್ಟು ಶಮನವಾಗಿದೆ. ಯಾವುದೇ ಸಂದರ್ಭದಲ್ಲೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಕೂಡ್ಲಿಗಿ ಶಾಸಕ ಗೊಪಾಲ ಕೃಷ್ಣ ಕೂಡ ಪಕ್ಷ ಬಿಡಲ್ಲ ಎಂದು ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ ಮೂಲಕ ಜನ ಜಾಗೃತಿ ಮಾಡುತ್ತಿದ್ದೇವೆ. 224 ಕ್ಷೇತ್ರಗಳನ್ನು ತಲುಪಿರೋದು ಬಿಜೆಪಿ ಮಾತ್ರ. ಬಿಜೆಪಿಯಲ್ಲಿ ಬಹಳಷ್ಟು ಜನ ರಾಜ್ಯ ಹಾಗೂ ಕೇಂದ್ರ ನಾಯಕರಿದ್ದಾರೆ. ಆದರೆ ಕಾಂಗ್ರೆಸ್ಗೆ ಕೇವಲ ಇಬ್ಬರು ಮಾತ್ರ. ಕಾಂಗ್ರೆಸ್ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಿಟ್ಟರೆ ಮೂರನೇ ನಾಯಕನಿಲ್ಲ. ಅವರು 224 ಕ್ಷೇತ್ರಕ್ಕೆ ಹೋಗಿಲ್ಲ, ಟಿಕೆಟ್ ಹಂಚಿಕೆಯಲ್ಲಿ ಬ್ಯೂಸಿ ಇದ್ದಾರೆ. ಕಾಂಗ್ರೆಸ್ನವರು ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಮತ್ತೊಮ್ಮೆ ಅಧಿಕಾರದ ರುಚಿ ನೋಡಬೇಕೆಂದು ಕನಸು ಕಾಣುತ್ತಿದ್ದಾರೆ. 50 ವರ್ಷದ ಇವರ ಆಳ್ವಿಕೆ ನೋಡಿ ಜನರು ಬದಲಾವಣೆ ಬಯಸಿದ್ದಾರೆ ಎಂದರು.
ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಿದ್ರೆ ಸೋಲು ಗ್ಯಾರಂಟಿ
ಶಿವಮೊಗ್ಗ: ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೆ ಸೋಲು ಗ್ಯಾರಂಟಿ. ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲ್ಲ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೇ ಕಾಂಗ್ರೆಸ್ಸಿಗರೇ ಸೋಲಿಸುತ್ತಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಲಘುವಾಗಿ ಮಾತನಾಡಲು ಹೋಗಲ್ಲ
ಬೆಂಗಳೂರು: ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಲಘುವಾಗಿ ಮಾತನಾಡಲು ಹೋಗಲ್ಲ. ಸಿದ್ದರಾಮಯ್ಯ ವಿಶ್ವಾಸದ ಕೊರತೆ ಬಗ್ಗೆ ಜನರೇ ಮಾತನಾಡುದ್ದಾರೆ. ಸಿದ್ದರಾಮಯ್ಯ ಸಿಎಂ ಆದವರು. 6-7 ತಿಂಗಳಿಂದ ಈ ರೀತಿ ಜನ ಚರ್ಚೆ ಮಾಡುವುದು ಬೇಕಿರಲಿಲ್ಲ. ನಿಜಕ್ಕೂ ಈ ರೀತಿ ತೀರ್ಮಾನ ಬಾಲಿಶಃ ವಿಷಯವಾಗಿಯೋ, ಸಿದ್ದರಾಮಯ್ಯ ಶಕ್ತಿ ಕುಗ್ಗಿದೆಯೋ ಅಂತ ಜನರು ಮಾತಾಡುತ್ತಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಜನರ ಒಲವಿದೆ ಎಂದು ತಿಳಿಸಿದರು.
ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:44 pm, Sat, 18 March 23