ವಾಜಪೇಯಿಯವರೂ ಎತ್ತಿನಗಾಡಿಯಲ್ಲಿ ಸಂಸತ್​ಗೆ ಬಂದಿದ್ದರು, ಶೋಭಾ ಕರಂದ್ಲಾಜೆ ಈಗೆಲ್ಲಿದ್ದಾರೆ? ಸಿದ್ದರಾಮಯ್ಯ ಸವಾಲ್

ಯಾವುದು ಸತ್ಯ ಯಾವುದು ಸುಳ್ಳು ಎಂಬುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಲಿ ನೋಡೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ವಾಜಪೇಯಿಯವರೂ ಎತ್ತಿನಗಾಡಿಯಲ್ಲಿ ಸಂಸತ್​ಗೆ ಬಂದಿದ್ದರು, ಶೋಭಾ ಕರಂದ್ಲಾಜೆ ಈಗೆಲ್ಲಿದ್ದಾರೆ? ಸಿದ್ದರಾಮಯ್ಯ ಸವಾಲ್
ಸಿದ್ದರಾಮಯ್ಯ
Follow us
TV9 Web
| Updated By: guruganesh bhat

Updated on: Sep 13, 2021 | 3:22 PM

ಬೆಂಗಳೂರು: ಯುಪಿಎ ಸರ್ಕಾರವಿದ್ದಾಗ ಎತ್ತಿನ ಗಾಡಿ ಮೇಲೆ ಬರಬೇಕಿತ್ತು ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪಾರ್ಲಿಮೆಂಟ್ ಗೆ ಎತ್ತಿನಗಾಡಿ ಮೇಲೆ ಬಂದಿರಲಿಲ್ಲವೇ? ಬೆಲೆ ಏರಿಕೆ ವಿರೋಧಿಸಿ ಪಾರ್ಲಿಮೆಂಟಿಗೆ ವಾಜಪೇಯಿಯವರು ಎತ್ತಿನಗಾಡಿಯಲ್ಲಿ ಬಂದಿದ್ದರು. ಆದರೆ ನಾವು ಎತ್ತಿನಗಾಡಿಯಲ್ಲಿ ಬಂದರೆ ತಪ್ಪಾ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಎಲ್.ಪಿ.ಜಿ ಬೆಲೆ ಏರಿಕೆಯಾದಾಗ ಶೋಭಾ ಕರಂದ್ಲಾಜೆ ಅವರು ತಲೆ ಮೇಲೆ ಸಿಲೆಂಡರ್ ಹೊತ್ಕೊಂಡು ಪ್ರತಿಭಟನೆ ಮಾಡಿದ್ದರು‌. ಈಗ ಶೋಭಾ ಕರಂದ್ಲಾಜೆ ಅವರು ಏಲ್ಲಿ ಹೋಗಿದ್ದಾರೆ? ಎಂದು ಸಹ ಕುಟುಕಿದ್ದಾರೆ.

ನಾನು ನಮ್ಮ ರಾಜ್ಯದ ಬಗ್ಗೆ ಕಾಳಜಿಯಿಂದ ಮಾತನಾಡುತ್ತಿದ್ದೇನೆ. ಬೇರೆ ರಾಜ್ಯಗಳ ವಿಚಾರ ನಾನೇಕೆ ಮಾತಾಡಲಿ? ಪೆಟ್ರೋಲ್ ಡಿಸೇಲ್ ಮೇಲೆ ನಮ್ಮ ರಾಜ್ಯದಲ್ಲಿ ಹೆಚ್ಚು ತೆರಿಗೆ ವಸೂಲು ಮಾಡಲಾಗುತ್ತಿದೆ. ತಕ್ಷಣ ಅದನ್ನು ಕಡಿಮೆ ಮಾಡಲಿ ಎಂದು ಸಹ ಅವರು ಆಗ್ರಹಿಸಿದ್ದಾರೆ.

ಯುಪಿಎ ಸರ್ಕಾರದ ಸಂದರ್ಭದಲ್ಲಿ ಕಚ್ಚಾತೈಲದ ಬೆಲೆ 110 ಡಾಲರ್ ಮೇಲಿತ್ತು. ಆದರೂ ಕಡಿಮೆ ದರದಲ್ಲಿ ಪೆಟ್ರೋಲ್ ನೀಡಲಾಗುತ್ತಿತ್ತು. ಈಗ ಕಚ್ಚಾತೈಲದ ಬೆಲೆ 70 ಡಾಲರ್ ಇದೆ. ಆದರೆ ಪೆಟ್ರೋಲ್ 100 ರ ಗಡಿ ದಾಟಿದೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ 3.45 ರೂ ಮಾತ್ರ ಪ್ರತಿ ಲೀಟರ್ ಮೇಲೆ ತೆರಿಗೆ ವಿಧಿಸಲಾಗುತ್ತಿತ್ತು. ಈಗ 33 ರೂಗಳಷ್ಟು ಪ್ರತಿ ಲೀಟರ್ ಮೇಲೆ ತೆರಿಗೆ ವಿಧಿಸಲಾಗ್ತಿದೆ. ಯಾವುದು ಸತ್ಯ ಯಾವುದು ಸುಳ್ಳು ಎಂಬುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಲಿ ನೋಡೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: 

ಕಾಂಗ್ರೆಸ್​ನವರು ಯುಪಿಎ ಸರ್ಕಾರ ಇದ್ದಾಗ ಪ್ರತಿಭಟನೆ ಮಾಡಬೇಕಿತ್ತು; ಸದನದಲ್ಲೇ ತಕ್ಕ ಉತ್ತರ ನೀಡುವೆ – ಸಿಎಂ ಬೊಮ್ಮಾಯಿ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ- ಎತ್ತಿನ ಗಾಡಿಯಿಂದ ಕೆಳಗೆ ಬಿದ್ದ ಕಾಂಗ್ರೆಸ್​ ಶಾಸಕರು; ಸಿದ್ದರಾಮಯ್ಯ ಶಿವಕುಮಾರ್​ ಬಚಾವ್​

(Opposition Leader Siddaramaiah says Vajpayee also came to parliament on Bullock cart to protest against oil price hike)

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ