Lok Sabha Election: ಬಿಜೆಪಿಯನ್ನ ಮಣಿಸಲು ಒಗ್ಗೂಡಿದ ವಿರೋಧ ಪಕ್ಷಗಳು ; ಜು. 18 ರಂದು ಬೆಂಗಳೂರಿನಲ್ಲಿ ಸಭೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ವಿರೋಧ ಪಕ್ಷಗಳು ಒಂದಾಗಿವೆ. ಶತಾಯಗತಾಯ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ನಾನಾ ತಂತ್ರಗಳನ್ನು ಹೆಣೆಯಲು ಆರಂಭಿಸಿವೆ. ಈ ಸಂಬಂಧ ಜುಲೈ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳು ಸಭೆ ನಡೆಸಲಿವೆ.

Lok Sabha Election: ಬಿಜೆಪಿಯನ್ನ ಮಣಿಸಲು ಒಗ್ಗೂಡಿದ ವಿರೋಧ ಪಕ್ಷಗಳು ; ಜು. 18 ರಂದು ಬೆಂಗಳೂರಿನಲ್ಲಿ ಸಭೆ
ವಿರೋಧ ಪಕ್ಷಗಳ ನಾಯಕರು
Edited By: ವಿವೇಕ ಬಿರಾದಾರ

Updated on: Jul 16, 2023 | 8:32 AM

ಬೆಂಗಳೂರು: ಲೊಕಸಭೆ ಚುನಾವಣೆಗೆ (Lok Sabha Election) 8 ರಿಂದ 9 ತಿಂಗಳು ಬಾಕಿ ಉಳಿದಿದೆ. ಈ ಬಾರಿ ಬಿಜೆಪಿಯನ್ನು (BJP) ಮಣಿಸಲು ವಿರೋಧ ಪಕ್ಷಗಳು (Opposition parties) ಒಂದಾಗಿವೆ. ಶತಾಯಗತಾಯ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ನಾನಾ ತಂತ್ರಗಳನ್ನು ಹೆಣೆಯಲು ಆರಂಭಿಸಿವೆ. ಈ ಸಂಬಂಧ ಜುಲೈ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳು ಸಭೆ ನಡೆಸಲಿವೆ. ಇದು ವಿರೋಧಪಕ್ಷಗಳ ಎರಡನೇ ಸಭೆಯಾಗಿದೆ. ಪ್ರತಿಪಕ್ಷಗಳ ಮೈತ್ರಿಕೂಟದ ಮೊದಲ‌ ಸಭೆಯು ಜೂನ್ ಅಂತ್ಯದಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆದಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 16 ಪಕ್ಷಗಳ ನಾಯಕರು ಭಾಗಿಯಾಗಿದ್ದರು.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ, ಆಮ್ ಆದ್ಮಿ ಪಕ್ಷ, ಆರ್‌ಜೆಡಿ ಮತ್ತು ಜೆಡಿಯು ಸೇರಿದಂತೆ ಒಟ್ಟು 15 ವಿರೋಧ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು. ಮೈತ್ರಿ ಕುರಿತು ಒಪ್ಪಂದಕ್ಕೆ ಬರಲು ಸಭೆ ವಿಫಲವಾದ ಕಾರಣ, ವಿರೋಧ ಪಕ್ಷಗಳು ಮತ್ತೊಮ್ಮೆ ಸಭೆ ನಡೆಸಲು ನಿರ್ಧರಿಸಿವೆ.

ಆರಂಭದಲ್ಲಿ ಜುಲೈ 12 ಅಥವಾ 14 ರಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಅಂತಿಮವಾಗಿ ಜುಲೈ 18 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಚರ್ಚೆಯ ನೇತೃತ್ವದ ಜವಾಬ್ದಾರಿಯನ್ನು ಕಾಂಗ್ರೆಸ್‌ಗೆ ವಹಿಸಲಾಗಿದೆ. ಮೂರು ದಿನಗಳ ಹಿಂದೆ ಆಮ್ ಆದ್ಮಿ ಪಕ್ಷ ಸೇರಿದಂತೆ ಒಟ್ಟು 24 ವಿರೋಧ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿತ್ತು.

ಇದನ್ನೂ ಓದಿ: Lok Sabha Election: ಬಿಜೆಪಿ, ಜೆಡಿಎಸ್​ ಹೊಂದಾಣಿಕೆ ಮಾತು; ಅಚ್ಚರಿ ಹೇಳಿಕೆ ನೀಡಿದ ಸಿಪಿ ಯೋಗೇಶ್ವರ

ಮಹಾರಾಷ್ಟ್ರದಲ್ಕಿ ಎನ್ ಸಿಪಿ ಒಡೆದು ಇಬ್ಬಾಗವಾಗಿರುವ ಬಗ್ಗೆ ಸಮಾಲೋಚನೆ ನಡೆಸಲಿವೆ. ಬಿಜೆಪಿಯನ್ನು ಎದುರಿಸಲು ಕನಿಷ್ಠ 400 ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹಾಕುವ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಬಿಜೆಪಿ ವಿರುದ್ಧದ ಮಹಾಮೈತ್ರಿಗೆ ಸಂಚಾಲಕರ ನೇಮಕವೂ ಕೂಡ ನಡೆಯಲಿದೆ.

ಈ ಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್‌ನ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಕಳೆದ ಬಾರಿಯಂತೆ ಅವರೊಂದಿಗೆ ಬರಲಿದ್ದಾರೆ.
ಮೂಲಗಳ ಪ್ರಕಾರ ಮಮತಾ ಬ್ಯಾನರ್ಜಿ ಜುಲೈ 17 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ವಿಪಕ್ಷ ನಾಯಕರಿಗೆ ಕಾಂಗ್ರೆಸ್ ವಿಶೇಷ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಇನ್ನು ದೆಹಲಿ ಸೇವೆಗಳ ಕುರಿತು ಕೇಂದ್ರದ ಸುಗ್ರೀವಾಜ್ಞೆಯನ್ನು ವಿರೋಧಿಸಲು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಾರ್ವಜನಿಕವಾಗಿ ಬೆಂಬಲ ನೀಡುವುದಾಗಿ ಭರವಸೆ ನೀಡುವವರೆಗೆ ಇಂತಹ ಸಭೆಗಳಿಂದ ದೂರವಿರುವುದಾಗಿ ಎಎಪಿ ಘೋಷಿಸಿದ್ದರಿಂದ ಬೆಂಗಳೂರು ಸಭೆಯಲ್ಲಿ ಪಾಲ್ಗೊಳ್ಳುವುದೇ ಅಥವಾ ಇಲ್ಲವೇ ಎಂಬುದು ಅಸ್ಪಷ್ಟವಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:03 am, Sun, 16 July 23

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us