AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ: ಸದಾನಂದಗೌಡ

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅಸಮಾಧಾನಗೊಂಡಿದ್ದು, ತಮ್ಮ ಮುಂದಿನ ನಡೆ ಬಗ್ಗೆ ನಾಳೆ ತಿಳಿಸುತ್ತೇನೆ ಎಂದಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ: ಸದಾನಂದಗೌಡ
ಡಿವಿ ಸದಾನಂದಗೌಡ
TV9 Web
| Edited By: |

Updated on:Mar 18, 2024 | 12:44 PM

Share

ಬೆಂಗಳೂರು, ಮಾರ್ಚ್​ 18: ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ (DV Sadananda Gowda) ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ (BJP) ಟಿಕೆಟ್ ತಪ್ಪಿದೆ. ಪಕ್ಷದ ಈ ನಿರ್ಧಾರದಿಂದ ಡಿವಿ ಸದಾನಂದಗೌಡ ಅವರು ಬೇಸರಗೊಂಡಿದ್ದಾರೆ. ಅಲ್ಲದೆ ಪರೋಕ್ಷವಾಗಿ ಬಿಎಸ್​ ಯಡಿಯೂರಪ್ಪ (BS Yediyurappa) ಅವರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮುಖಂಡರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸುತ್ತಿದ್ದು, ಟಿಕೆಟ್​ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ. ಬೇರೆ ಬೇರೆ ಸಂಗತಿಗಳು ನಡೀತಿವೆ ಎಂದರು.

ನಿನ್ನೆ (ಮಾ.17) ರಂದು ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು, ಸಾಂತ್ವನ ಮಾಡಿರುವುದು ನಿಜ. ಮುಂದಿನ ನಿರ್ಧಾರ ನನ್ನ ಕುಟುಂಬಸ್ಥರ ಜತೆ ಚರ್ಚಿಸಬೇಕು. ದೆಹಲಿಯಲ್ಲಿ, ರಾಜ್ಯದಲ್ಲಿ ಒಂದಷ್ಟು ವಿದ್ಯಮಾನ ನಡೆದಿವೆ. ನಿಮಗೆ ಟಿಕೆಟ್ ಅಂದರು, ಕೊನೆ ಕ್ಷಣದಲ್ಲಿ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರವನ್ನ ಹೇಳಿಕೊಳ್ಳಬೇಕಿದೆ. ಇವತ್ತು ನನ್ನ ಜನ್ಮದಿನ, ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆದು ನಂತರ ನಿಶ್ಚಯ ಮಾಡುತ್ತೇನೆ. ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ನನ್ನ ನಿರ್ಣಯ ಬಗ್ಗೆ ನಾಳೆ ಸುದ್ದಿಗೋಷ್ಠಿ ಕರೆದು ತಿಳಿಸುತ್ತೇನೆ ಎಂದು ಹೇಳಿದರು.

ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ ತಿಳಿದು ತಿಳಿದು ಹೀಗೆ ಮಾಡಿರುವುದು ಬೇಜಾರು ತಂದಿದೆ. ಬಿ.ವೈ.ರಾಘವೇಂದ್ರ ವಿರುದ್ಧ ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕೆ.ಎಸ್.ಈಶ್ವರಪ್ಪ ನಿರ್ಧರಿಸಿರುವ ಕುರಿತು ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಭೇಟಿಯಾಗಿ ಮಾತನಾಡಿದ್ದೇನೆ. ಪಕ್ಷದಲ್ಲಿ ಯಾರಿಗೆಲ್ಲಾ ಮನಸ್ಸಿಗೆ ನೋವಾಗಿದೆಯೋ, ಒಟ್ಟಿಗೆ ಹೋಗಿ ವರಿಷ್ಠರ ಭೇಟಿಯಾಗಿ ತೀರ್ಮಾನಿಸೋಣ ಅಂದಿದ್ದೆ. ಆದರೆ ಈಶ್ವರಪ್ಪ ತಮ್ಮದೇ ಆದ ನಿರ್ಣಯ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದರು.

ಇದನ್ನೂ ಓದಿ: ಡಿವಿಎಸ್​ಗೆ ಟಿಕೆಟ್ ಮಿಸ್: ಜೆಪಿ ನಡ್ಡಾ ಕರೆ ಮಾಡಿ ಹೇಳಿದ್ದೇನು? ಎಳೆ-ಎಳೆಯಾಗಿ ಬಿಚ್ಚಿಟ್ಟ ಸದಾನಂದಗೌಡ

ಹುಟ್ಟ ಹಬ್ಬದ ನಿಮಿತ್ಯ ಸದಾನಂದಗೌಡ ಅವರ ನಿವಾಸಕ್ಕೆ ಸೋಮವಾರ ನೂರಾರು ಬೆಂಬಲಿಗರು ಆಗಮಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಅವರಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕೂಡ ಒಬ್ಬರು. ಅಭಿನಂದನೆ ಸ್ವೀಕರಿಸಿದ ಗೌಡರು ಮುಂದಿನ ಕ್ರಮದ ಬಗ್ಗೆ ಮಂಗಳವಾರ ನಿರ್ಧರಿಸುವುದಾಗಿ ತಿಳಿಸಿದರು.

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್​ ಅನ್ನು ಎಂಎಲ್​ಸಿ ಕೋಟಾ ಶ್ರೀನಿವಾಸ್​ ಪೂಜಾರಿ ಅವರಿಗೆ ನೀಡಲಾಗಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅಸಮಾಧಾನಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:37 pm, Mon, 18 March 24

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ