ಮೈಸೂರು, ಅಕ್ಟೋಬರ್ 08: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮೈಸೂರು (Mysore) ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇಂದು (ಅ.08) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ, ಶಾಸಕ ಹರೀಶ್ ಗೌಡ (Harish Gowda) ಅವರ ನಿವಾಸಕ್ಕೆ ಭೇಟಿ ನೀಡಿದರು. ಶಾಸಕ ಹರೀಶ್ ಗೌಡ ಜೊತೆ ಮೈಸೂರು ರಾಜಕಾರಣದ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸತೀಶ್ ಜಾರಕಿಹೊಳಿ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರ ಗೆಲ್ಲಬಹುದಿತ್ತು, ಯಾಕೆ ಸಾಧ್ಯವಾಗಲಿಲ್ಲ ಎಂದು ಹರೀಶ್ ಗೌಡ ಅವರಿಗೆ ಪ್ರಶ್ನಿಸಿದರು.
ಇದಕ್ಕೆ, ಕಾಂಗ್ರೆಸ್ ಶಾಸಕ ಹರೀಶ್ ಗೌಡ “ನಮ್ಮ ಪಕ್ಷದ ಅಭ್ಯರ್ಥಿ ಸರಿ ಇಲ್ಲದಿದ್ದಕ್ಕೆ ಮೈಸೂರು ಲೋಕಸಭಾ ಕ್ಷೇತ್ರ ಗೆಲ್ಲಲಿಲ್ಲ” ಎಂದು ಹೇಳಿದ್ದಾರೆ. ಕಳೆದ ಲೋಕಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಸ್ಪರ್ಧೆ ಮಾಡಿದ್ದರು.
ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ
ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ಮೈಸೂರು ಕೂಡ ಒಂದಾಗಿತ್ತು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸ್ಪರ್ಧಿಸಿ ಗೆಲವು ಸಾಧಿಸಿದ್ದಾರೆ. ಇವರಿಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ನಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸ್ಪರ್ಧೆ ಮಾಡಿದ್ದರು.
ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರ ವೋಟುಗಳು ನಿರ್ಣಾಯಕವಾಗಿವೆ. ಚುನಾವಣೆಯ ಸಂದರ್ಭದಲ್ಲಿ ಎಂ. ಲಕ್ಷ್ಮಣ್ ನಾನೂ ಒಕ್ಕಲಿಗ ಎಂದು ಬಿಂಬಿಸಿಕೊಂಡು ವೋಟು ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಿದ್ದರೂ ಸಹ ಅದು ಸಾಧ್ಯವಾಗಲಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಅವರಿಗೆ ಸೋಲಾಯಿತು.
ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಮೈಸೂರೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಗೆ, ಅಭ್ಯರ್ಥಿ ಎಂ ಲಕ್ಷ್ಮಣ ಕಾರಣ ಎಂಬ ಶಾಸಕ ಹರೀಶ್ಗೌಡ ಹೇಳಿಕೆ ಸದ್ಯ ಸಂಚಲನ ಸೃಷ್ಟಿ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:22 pm, Tue, 8 October 24