ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ: ಸಿಎಂ ಸಿದ್ಧರಾಮಯ್ಯ
ಇತ್ತೀಚೆಗೆ ರಾಜ್ಯದಲ್ಲಿ ನಡೆದ ಜೈನಮುನಿ ಕಾಮಕುಮಾರ ನಂದಿ ಮಹರಾಜರ, ಟಿ. ನರಸೀಪುರದ ವೇಣುಗೋಪಾಲ್, ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆ ಪ್ರಕರಣಗಳ ಬಗ್ಗೆ ಸಿಎಂ ಸಿದ್ಧರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ (Cm Siddaramaiah) ತಿಳಿಸಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ನಡೆದ ಕೆಲ ಹತ್ಯೆ ಪ್ರಕರಣಗಳ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ. ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಮಾತು ಕೇಳಿದ್ದರೆ 5 ವರ್ಷ ಸಿಎಂ ಆಗಿರುತ್ತಿದ್ದೆ; 2019ರ ರಹಸ್ಯ ಬಿಚ್ಚಿಟ್ಟ ಹೆಚ್ಡಿ ಕುಮಾರಸ್ವಾಮಿ
ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ. ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ ಎಂದಿದ್ದಾರೆ.
* ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ.
* ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ.
* ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ… pic.twitter.com/3O4k79dotu
— CM of Karnataka (@CMofKarnataka) July 13, 2023
ಇದನ್ನೂ ಓದಿ: ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.