ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ: ಸಿಎಂ ಸಿದ್ಧರಾಮಯ್ಯ

|

Updated on: Jul 13, 2023 | 8:24 PM

ಇತ್ತೀಚೆಗೆ ರಾಜ್ಯದಲ್ಲಿ ನಡೆದ ಜೈನಮುನಿ ಕಾಮಕುಮಾರ ನಂದಿ ಮಹರಾಜರ, ಟಿ. ನರಸೀಪುರದ ವೇಣುಗೋಪಾಲ್, ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆ ಪ್ರಕರಣಗಳ ಬಗ್ಗೆ ಸಿಎಂ ಸಿದ್ಧರಾಮಯ್ಯ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ: ಸಿಎಂ ಸಿದ್ಧರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us on

ಬೆಂಗಳೂರು: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ (Cm Siddaramaiah) ತಿಳಿಸಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ನಡೆದ ಕೆಲ ಹತ್ಯೆ ಪ್ರಕರಣಗಳ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ. ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮಾತು ಕೇಳಿದ್ದರೆ 5 ವರ್ಷ ಸಿಎಂ ಆಗಿರುತ್ತಿದ್ದೆ; 2019ರ ರಹಸ್ಯ ಬಿಚ್ಚಿಟ್ಟ ಹೆಚ್​​ಡಿ ಕುಮಾರಸ್ವಾಮಿ

ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ. ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ ಎಂದಿದ್ದಾರೆ.

ಇದನ್ನೂ ಓದಿ: ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸೂಚನೆ

ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.