ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ: ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವೆ; ಶೋಭಾ ಕರಂದ್ಲಾಜೆ

ಭಾರತವನ್ನು ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ. ಯಾವುದೇ ಸರ್ಕಾರಕ್ಕೆ ಅಧಿಕಾರ ಶಾಶ್ವತವಲ್ಲ. ದೇಶದಲ್ಲಿ ಗೊಂದಲ ನಿರ್ಮಾಣ ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಪ್ರಕರಣವನ್ನು ಎನ್​ಐಎ ತನಿಖೆ ಮಾಡಿದರೆ ಸತ್ಯಾಸತ್ಯತೆ ಹೊರಬರಲಿದೆ. ಇದರ ಹಿಂದಿರುವ ಶಕ್ತಿಯನ್ನು ಪೊಲೀಸರು ಪತ್ತೆ ಮಾಡಬೇಕು ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ: ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವೆ; ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Follow us
| Updated By: ವಿವೇಕ ಬಿರಾದಾರ

Updated on: Feb 28, 2024 | 12:06 PM

ಉಡುಪಿ, ಫೆಬ್ರವರಿ 28: ಪಾಕಿಸ್ತಾನ ಜಿಂದಾಬಾದ್ (Pro Pakistan Slogan) ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು?. ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ (Syed Naseer Hussain) ​ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರ ಸಂಪರ್ಕ ಯಾರ ಜೊತೆ ಇದೆ? ಅಲ್ಲಿ ಬಂದಿರುವ ಯುವಕರ ಸಂಪರ್ಕ ಯಾರ ಜೊತೆ ಇದೆ? ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನಾನು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರ ಬರೆಯುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ಬಹಳ ದೊಡ್ಡ ಷಡ್ಯಂತ್ರದ ಗುಮಾನಿ ಇದೆ ಎಂದರು.

ಭಾರತವನ್ನು ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ. ಯಾವುದೇ ಸರ್ಕಾರಕ್ಕೆ ಅಧಿಕಾರ ಶಾಶ್ವತವಲ್ಲ. ದೇಶದಲ್ಲಿ ಗೊಂದಲ ನಿರ್ಮಾಣ ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಪ್ರಕರಣವನ್ನು ಎನ್​ಐಎ ತನಿಖೆ ಮಾಡಿದರೆ ಸತ್ಯಾಸತ್ಯತೆ ಹೊರಬರಲಿದೆ. ಇದರ ಹಿಂದಿರುವ ಶಕ್ತಿಯನ್ನು ಪೊಲೀಸರು ಪತ್ತೆ ಮಾಡಬೇಕು. ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆರೋಪಿಯನ್ನ ಬಂಧಿಸುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​ ಅಡ್ಡ ಮತದಾನ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದವರ ಮೇಲೆ ಜನ ಕ್ರಮ ಕೈಗೊಳ್ಳುತ್ತಾರೆ. ಚುನಾವಣಾ ಆಯೋಗ, ಪಕ್ಷ ಕ್ರಮ ಕೈಗೊಳ್ಳುತ್ತದೆ. ಬಿಜೆಪಿಗೆ ಬಂದು ಮಂತ್ರಿಯಾಗಿ ಒಳ್ಳೆಯ ಖಾತೆಯನ್ನು ಅವರಿಗೆ ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದಿದೆ ಎಂದು ಮತ್ತೆ ಆ ಕಡೆ ತಿರುಗುವ ಮಾನಸಿಕತೆಗೆ ಧಿಕ್ಕಾರ. ಅಧಿಕಾರ ಇಲ್ಲದಿದ್ದಾಗ ಬರುವುದು ಅಧಿಕಾರ ಹೋದಾಗ ವಾಪಾಸ್ ಹೋಗುವುದು. ಇದು ಪಕ್ಷ ನಿಷ್ಠೆ, ಸಮಾಜದ ಮೇಲೆ ಭಕ್ತಿ ಇಲ್ಲ ಎಂಬುದಕ್ಕೆ ಸಾಕ್ಷಿ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ವಿಡಿಯೋದಲ್ಲಿ ಕೆಲವರು ನಾಸಿರ್ ಸಾಬ್ ಅಂತಾರೆ, ಕೆಲವರು ಪಾಕಿಸ್ತಾನ ಅಂತಾರೆ, ತನಿಖೆ ನಡೆಯುತ್ತಿದೆ: ಜಿ ಪರಮೇಶ್ವರ್​

ಬಿಜೆಪಿ ಸೇರಿದಾಗ ಯಶವಂತಪುರದಲ್ಲಿ ನಾನೇ ನಿಂತು ಚುನಾವಣೆ ಮಾಡಿದ್ದೆ. ಸೋಮಶೇಖರ್ ಅವರ ಮೇಲೆ ಬಿಜೆಪಿ ಕಾರ್ಯಕರ್ತರ ವಿರೋಧವಿದ್ದರೂ ಅವರ ಮನವೊಲಿಸಿದ್ದೇವು. ಎಸ್​ಟಿ ಸೋಮಶೇಖರ್ ಅವರು ನಡೆದುಕೊಂಡ ರೀತಿ ನಿಜಕ್ಕೂ ದುಃಖ ತಂದಿದೆ. ರಾಜಕೀಯದಲ್ಲಿ ಯಾವ ರೀತಿಯ ವ್ಯಭಿಚಾರ ಆಗಬಹುದು ಎಂಬುದಕ್ಕೆ ಇದು ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ತಯಾರಿಗಳು ಚೆನ್ನಾಗಿ ನಡೆಯುತ್ತಿವೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ರಾಷ್ಟ್ರೀಯ ಹೆದ್ದಾರಿ, ಅಂಚೆ ಇಲಾಖೆ, ರೈಲ್ವೆ ಇಲಾಖೆಯಲ್ಲಿ ಉತ್ತಮ ಕಾರ್ಯಕ್ರಮ ನೀಡಿದ್ದೇವೆ. ಶೇಕಡ 80 ರಿಂದ 90 ರಷ್ಟು ಜನಕ್ಕೆ ಕೇಂದ್ರ ಸರಕಾರದ ಯೋಜನೆಗಳು ತಲುಪಿವೆ. ಆದರೆ ಪ್ರಚಾರದಲ್ಲಿ ಹಿಂದೆ ಬಿದ್ದಿದ್ದೇನೆ. ಎಲ್ಲಾ ಕಡೆಗೂ ಮೋದಿ ಅಭ್ಯರ್ಥಿ ಎಂದು ರಾಷ್ಟ್ರೀಯ ಅಧಿವೇಶನದಲ್ಲಿ ಪ್ರಧಾನಿ ಹೇಳಿದ್ದಾರೆ. ಯಾರು ಅಭ್ಯರ್ಥಿ ಅನ್ನೋದು ಮುಖ್ಯವಲ್ಲ. ಭಿನ್ನಮತ ಶಮನವಾಗುತ್ತೆ. ಯಾಕೆಂದರೆ ಇದೆಲ್ಲವೂ ಪೂರ್ವ ನಿಯೋಜಿತ ಭಿನ್ನಮತ. ಹಣ ಇದ್ದವರು ಹಣ ಕೊಟ್ಟು ಏನು ಬೇಕಾದರೂ ಮಾಡಬಹುದು ಎಂದು ಭಾವಿಸಿದ್ದಾರೆ. ಹಣದ ದರ್ಪದಿಂದ ಚುನಾವಣೆ ಮಾಡಲು ಆಗಲ್ಲ. ಹಣ ಇದ್ದವರೇ ಈ ದೇಶದಲ್ಲಿ ಪ್ರಧಾನಿ ಆಗಬೇಕಿತ್ತು. ಆದರೆ ಒಬ್ಬ ಚಾಹ ಮಾರುವವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ತಿಳಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ