AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬಿಟ್ಟರೆ ಯಾರಿಗೂ ಟಿಕೆಟ್ ಕೊಡಲ್ಲ, ನನಗೆ ವಿರೋಧ ಮಾಡಿದವರು ಯಾರೂ ಬದುಕಿಲ್ಲ: ಜಿಗಜಿಣಗಿ

ಕರ್ನಾಟಕ ರಾಜ್ಯದಲ್ಲಿ ದಲಿತ ವ್ಯಕ್ತಿಯಾಗಿ ಇತಿಹಾಸ ನಿರ್ಮಾಣ ಮಾಡಿದ್ದೇನೆ. ನನಗೆ 93 ವಯಸ್ಸಾದರೂ ಇತಿಹಾಸ ನಿರ್ಮಾಣ ಮಾಡಿಯೇ ಸಾಯುತ್ತೇನೆ. ನಾನು ಇತಿಹಾಸ ನಿರ್ಮಾಣ ಮಾಡಲಿ ಎಂದು ದೇವರು ನನ್ನ ಹಣೆ ಬರಹದಲ್ಲಿ ಬರೆದಿದ್ದಾನೆ ಎಂದು ಸಂಸದ ರಮೇಶ್​ ಜಿಗಜಿಣಗಿ ಹೇಳಿದರು.

ನನ್ನ ಬಿಟ್ಟರೆ ಯಾರಿಗೂ ಟಿಕೆಟ್ ಕೊಡಲ್ಲ, ನನಗೆ ವಿರೋಧ ಮಾಡಿದವರು ಯಾರೂ ಬದುಕಿಲ್ಲ: ಜಿಗಜಿಣಗಿ
ಸಂಸದ ರಮೇಶ ಜಿಗಜಿಣಗಿ
TV9 Web
| Edited By: |

Updated on: Mar 12, 2024 | 1:54 PM

Share

ವಿಜಯಪುರ, ಮಾರ್ಚ್​ 12: ನನ್ನ ಬಿಟ್ಟರೆ ಯಾರಿಗೂ ಟಿಕೆಟ್ ಕೊಡಲ್ಲ. ಪಕ್ಷದವರು ನನಗೆ ಸ್ಪಷ್ಟವಾಗಿ ಹೇಳಿದ್ದಾರೆ. ನೀ ಏನು ಚಿಂತೆ ಮಾಡಬೇಡ, ನೀನು ಸತ್ತರೂ ಜನ ನಿನ್ನು ಹೆಣಕ್ಕೆ ಮತ ಹಾಕಲಿ ಎಂದು ವರಿಷ್ಠರು ನನಗೆ ಹೇಳಿದ್ದಾರೆ. ನನ್ನ 70 ವರ್ಷಗಳ ರಾಜಕಾರಣದಲ್ಲಿ ನನಗೆ ಯಾರು ಅಡ್ಡ ಬಂದಿದ್ದಾರೆ ಅವರು ಯಾರೂ ಬದುಕಿಲ್ಲ. ನನ್ನ ವಿರೋಧ ಮಾಡಿದವರು ಯಾರು ರಾಜಕೀಯದಲ್ಲಿ ಉಳಿದಿಲ್ಲ. ದೇವರೇ ಅವರನ್ನು ಖಲಾಸ್ ಮಾಡುತ್ತಾನೆಂದು ಎಂದು ಸಂಸದ ರಮೇಶ ಜಿಗಜಿಣಗಿ (Ramesh Jigajinagi) ಹೇಳಿದರು.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ದಲಿತ ವ್ಯಕ್ತಿಯಾಗಿ ಇತಿಹಾಸ ನಿರ್ಮಾಣ ಮಾಡಿದ್ದೇನೆ. ನನಗೆ 93 ವಯಸ್ಸಾದರೂ ಇತಿಹಾಸ ನಿರ್ಮಾಣ ಮಾಡಿಯೇ ಸಾಯುತ್ತೇನೆ. ನಾನು ಇತಿಹಾಸ ನಿರ್ಮಾಣ ಮಾಡಲಿ ಎಂದು ದೇವರು ನನ್ನ ಹಣೆ ಬರಹದಲ್ಲಿ ಬರೆದಿದ್ದಾನೆ. ಅಲ್ಲಿಯವರಗು ನಾನು ಬದುಕುತ್ತೇನೆ. ನಾನು ಕ್ರಿಕೆಟ್ ಆಡಲು ಬ್ಯಾಟ್ ಹಿಡಿದುಕೊಂಡು ನಿಂತಿದ್ದೇನೆ. ಬಾಲ್ ಬರುವುದನ್ನೇ ಕಾಯುತ್ತಿದ್ದೇನೆ ಎಂದರು.

ನನ್ನ ಆರೋಗ್ಯದ ಕುರಿತು ಬಹಳ ಜನ ಅಪಪ್ರಚಾರ ಮಾಡಿದರು. ನಾನು ಆಸ್ಪತ್ರೆಯಲ್ಲಿದ್ದೇನೆ, ಮೃತಪಡುತ್ತೇನೆ ಎಂದು ಬಿಜೆಪಿ ಅಧ್ಯಕ್ಷರ ಮುಂದೆ ಹೇಳಿದ್ದಾರೆ. ನನ್ನ ಸಾವು ಇವರ ಕೈಯಲ್ಲಿ ಇಲ್ಲ. ಹಣೆ ಬರಹವನ್ನು ಯಾರೂ ಅಳಿಸಲು ಸಾಧ್ಯವಿಲ್ಲ. ನಾನು ಬೇಗ ಸಾಯಲಿ, ಏನಾದರೂ ಆಗಬೇಕೆಂದು ಕೆಲವರು ಹೇಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ

ಚಿಕ್ಕೋಡಿಯಲ್ಲಿ ಮೂರು ಬಾರಿ ಸಂಸದನಾಗಿ ಆಯ್ಕೆಯಾಗಿದ್ದೇನೆ. ವಿಜಯಪುರದಲ್ಲಿ ಮೂರು ಬಾರಿ ಗೆದ್ದಿದ್ದೇನೆ. ರಮೇಶ್ ಜಿಗಜಿಣಗಿ ಲಿಂಗಾಯತ ವಿರೋಧಿ ಎಂದು ಹೇಳುತ್ತಿದ್ದಾರೆ. ಅವರ ನಾಲಿಗೆಯನ್ನು ದೇವರು ಕತ್ತರಿಸಲಿ. ನಾನು ಲಿಂಗಾಯತ ವಿರೋಧಿಯಲ್ಲ. ನಾನು ಜಾತಿ ರಾಜಕಾರಣ ಮಾಡಿಲ್ಲ. ನಾನು ಲಿಂಗಾಯತ ವಿರೋಧಿಯಲ್ಲ, ನನಗೆ ಎಲ್ಲರೂ ಬೇಕು. ನನಗೆ ಕೆಟ್ಟದ್ದನ್ನು ಮಾಡಿದವರಿಗೂ ಒಳ್ಳೆಯದ್ದನ್ನೇ ಮಾಡಿದ್ದೇನೆ ಎಂದು ಹೇಳಿದರು.

ಕಂದಾಯ ಸಚಿವನಾಗಿದ್ದಾಗ, ಸಚಿವ ಸ್ಥಾನ ತ್ಯಾಗ ಮಾಡಿದ್ದೆ. ಯಾರಾದರೂ ತ್ಯಾಗ ಮಾಡುತ್ತಾರಾ ವಿಜಯಪುರದಲ್ಲಿ ಮೂರು ಬಾರಿ ಗೆದಿದ್ದೇನೆ. ಈ ಅವಧಿಯಲ್ಲಿ ಉತ್ತಮ ಕೆಲಸಗಳನ್ನ ಮಾಡಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ 7 ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ನನ್ನ ಆರೋಗ್ಯದ ಕುರಿತು ಜನರಲ್ಲಿ ಕೆಲ ಸಂಶಯಗಳಿವೆ. ನನ್ನ ಆರೋಗ್ಯದ ಬಗ್ಗೆ ಯಾರು ಏನಾದರೂ ಅಂದುಕೊಳ್ಳಲಿ. ನಾನು ಮಾತ್ರ ಹೈಕಮಾಂಡ್​ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಪ್ರಧಾನಿ ಮೊದಿ ಅವರಿಗೆ ದೇಶದ ಚಿಂತನೆ ಅಭಿವೃದ್ಧಿ ಬಿಟ್ಟು ಬೇರೆ ಕೆಲಸವಿಲ್ಲ. ರಾಮಮಂದಿರ ನಿರ್ಮಾಣ ಮಾಡಿದರು. ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗುವುದನ್ನು ಜಗತ್ತಿನ ಯಾವುದೇ ಶಕ್ತಿ ತಡೆಯಲು ಆಗಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?