Pay CM Poster: ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

| Updated By: Rakesh Nayak Manchi

Updated on: Sep 24, 2022 | 1:55 PM

ಕಾಂಗ್ರೆಸ್​ನ ಪೇ ಸಿಎಂ ಪೋಸ್ಟರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Pay CM Poster: ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಚಿತ್ರದುರ್ಗ: ಕಾಂಗ್ರೆಸ್​ನ ಪೇ ಸಿಎಂ ಪೋಸ್ಟರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಹೇಳಿಕೆ ನೀಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ನಾಯಕರ ನೈತಿಕ ಅಧಪತನವನ್ನ ತೋರಿಸುತ್ತಿದೆ ಎಂದರು.

ಪಿಎಫ್​ಐ, ಎಸ್​ಡಿಪಿಐ ಕಚೇರಿ ಹಾಗೂ ಸಂಘಟನೆಗಳ ಮುಖಂಡರ ಮನೆ ಮೇಲೆ ಎನ್​ಐಎ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಈಗಾಗಲೇ ಎನ್​ಐಎ, ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಂಡಿದೆ ಎಂದರು. ಇನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು “ಕಾಂಗ್ರೆಸ್​ನವರು ಲಿಂಗಾಯತ ಮುಖ್ಯಮಂತ್ರಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ” ಎಂಬ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ನಾನು ಅದರ ಭಾಗ ಅಲ್ಲ, ನಾನು ಪ್ರತಿಕ್ರಿಯಿಸುವುದಿಲ್ಲ. ಜನರ ನಾಡಿ ಮಿಡಿತ ನಮಗೂ ಗೊತ್ತಿದೆ. 35 ವರ್ಷ ನಾವೂ ರಾಜಕಾರಣ ಮಾಡಿದ್ದೇವೆ ಎಂದರು.

ದೆಹಲಿಯಿಂದ ಬಳಿಕ ಸಂಪುಟ ವಿಸ್ತರಣೆ ನಿರ್ಧಾರ

ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ದೆಹಲಿಗೆ ಹೋಗಿ ಬಂದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ದೆಹಲಿಗೆ ಹೋದಾಗ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇನೆ. ಅಲ್ಲಿ ಏನು ತಿರ್ಮಾನ ಮಾಡಲಾಗುತ್ತದೆ ಎಂಬೂದರ ಮೇಲೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ