ಬೆಂಗಳೂರು: ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಪೆಗಾಸಸ್ ತಂತ್ರಾಂಶದ ಮೂಲಕ ಗೂಡಚರ್ಯೆ ನಡೆಸಿತ್ತು ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಪೆಗಾಸಿಸ್ ಗೂಡಚರ್ಯೆಯಲ್ಲಿ (Pegasus Spyware) ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂಥ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಡಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು ಎಂದು ಜೆಡಿಎಸ್ ವರಿಷ್ಠರೂ ಆಗಿರುವ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ನನ್ನ ಮೇಲೆ ಗೂಡಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ ಎಂದು ಅವರು ಹರಿಹಾಯ್ದಿದ್ದಾರೆ.
ಪೆಗಾಸಿಸ್ ಗೂಢಾಚರ್ಯೆಯಲ್ಲಿ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂಥ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು.1/3
— H D Kumaraswamy (@hd_kumaraswamy) July 20, 2021
ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಡಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕದು ಎಂಬುದಕ್ಕೆ ಖಚಿತತೆ ಇದೆಯೇ? ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು ಎಂದು ಮಾಜಿ ಸಿಎಂ, ಜೆಡಿಎಸ್ ವರಿಷ್ಠ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ.2/3
— H D Kumaraswamy (@hd_kumaraswamy) July 20, 2021
ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕದು ಎಂಬುದಕ್ಕೆ ಖಚಿತತೆ ಇದೆಯೇ? ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು.3/3
— H D Kumaraswamy (@hd_kumaraswamy) July 20, 2021
ಸಿದ್ದರಾಮಯ್ಯ, ಕುಮಾರಸ್ವಾಮಿ ಆಪ್ತ ಸಹಾಯಕರು ಮತ್ತು ದೇವೇಗೌಡರ ಗನ್ ಮ್ಯಾನ್ ಫೋನ್ ಕದ್ದಾಲಿಕೆ?
ಇಸ್ರೇಲ್ನ ಪೆಗಾಸಸ್ ತಂತ್ರಾಂಶದ ಮೂಲಕ ಗೂಡಚರ್ಯೆ (Pegasus Spyware) ನಡೆಸಿದ ಆರೋಪ ಇದೀಗ ಕರ್ನಾಟಕ ರಾಜಕಾರಣದ ಅಂಗಳಕ್ಕೂ ಬಂದುನಿಂತಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ, ನನ್ನ ಬಳಿ ಯಾವುದೇ ಮೊಬೈಲ್ ಇಲ್ಲ. ನನ್ನ ಆಪ್ತ ಸಹಾಯಕ ವೆಂಕಟೇಶ್ ಮೊಬೈಲ್ ಬಳಸುತ್ತೇನೆ. ಆತನ ಮೊಬೈಲ್ ಹ್ಯಾಕ್ ಮಾಡುತ್ತಿದ್ದಾರೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಪ್ತ ಸಹಾಯಕನ ಮತ್ತು ದೇವೇಗೌಡರ ಗನ್ ಮ್ಯಾನ್ ಮೊಬೈಲ್ ಹ್ಯಾಕ್ ಮಾಡಲಾಗುತ್ತಿದೆ. ಗೂಡಚರ್ಯೆ ಮೂಲಕ ಸರಕಾರ ಬೀಳಿಸುವ ತಂತ್ರ ಮಾಡಲಾಗಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆ ನಡೆಯಬೇಕು. ಈ ರೀತಿಯ ಕೊಳಕು ರಾಜಕೀಯ ಮಾಡಬಾರದು ಎಂದು ಆರೋಪಿಸಿದರು.
2018ರ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿತ್ತು. ಬಿಜೆಪಿ 104, ಕಾಂಗ್ರೆಸ್ 86, ಜೆಡಿಎಸ್ಗೆ 36 ಸ್ಥಾನ ಬಂದಿತ್ತು. ರಾಜ್ಯಪಾಲರು ಸರ್ಕಾರ ರಚಿಸಲು ಯಡಿಯೂರಪ್ಪಗೆ ಆಹ್ವಾನ ನೀಡಲಾಗಿತ್ತು. ಆದರೆ ಯಡಿಯೂರಪ್ಪ ಬಹುಮತ ಸಾಬೀತುಪಡಿಸಲಾಗಲಿಲ್ಲ. ಬಳಿಕ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ಗೆ ಬೆಂಬಲ ನೀಡಿದ್ದೆವು. ಇದಕ್ಕೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕೈಜೋಡಿಸಿತು. 2019ರ ಜುಲೈನಲ್ಲಿ 17 ಶಾಸಕರು ರಾಜೀನಾಮೆ ನೀಡಿದರು. ಯಾರೂ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿರಲಿಲ್ಲ. ಆ ಶಾಸಕರು ಕುಮಾರಸ್ವಾಮಿ ಸರ್ಕಾರ ಪತನಗೊಳಿಸಿ ಬಿಜೆಪಿ ಸೇರಿದರು. ಇದಕ್ಕೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದರು.
ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು. ಟೆಲಿಫೋನ್ ಟ್ಯಾಪಿಂಗ್ನಿಂದ ರಾಮಕೃಷ್ಣ ಹೆಗ್ಡೆ ಸರಕಾರ ಬಿದ್ದಿತ್ತು. ಅಂದಿನ ಕುಮಾರಸ್ವಾಮಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಟ್ಯಾಪಿಂಗ್ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಆಗ್ರಹಿಸಿದರು.
ಇದನ್ನೂ ಓದಿ:
Explainer: ಏನಿದು ಪೆಗಾಸಸ್ ಗೂಢಚರ್ಯೆ ತಂತ್ರಾಂಶ? ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
(Pegasus Spyware issue Former CM HD Kumaraswamy warns BJP may look personal life of common man )
Published On - 9:32 pm, Tue, 20 July 21