ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ: ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ

ನಂದಿನಿ ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ: ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ
ಮಾಜಿ ಶಾಸಕ ಸಿ.ಟಿ.ರವಿ
Edited By:

Updated on: Jul 31, 2023 | 9:36 PM

ಚಿಕ್ಕಮಗಳೂರು, ಜುಲೈ 31: ನಂದಿನಿ ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ (CT Ravi) ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಅಧಿಕಾರ ಕೊಟ್ಟಿದ್ದು ನೀವು ಹೇಳಿದ ಗ್ಯಾರಂಟಿ ನಂಬಿ. ಬೆಲೆ ಏರಿಕೆ ಬರೆ ಎಳೆಯುತ್ತಾರೆ ಅಂತಾ ಯಾರೂ ಊಹಿಸಿರಲಿಲ್ಲ ಎಂದಿದ್ದಾರೆ.

ನಂದಿನಿ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಯ್ತು

ಅಮುಲ್ ಮತ್ತು ನಂದಿನಿ ತಾಂತ್ರಿಕ ಸಹಕಾರ ಬಗ್ಗೆ ರೈತರಿಗೆ ಸಹಾಯ ಮಾಡುವ ಸದುದ್ದೇಶದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ. ಚುನಾವಣೆ ವೇಳೆ ಅಮಿತ್ ಶಾ ಹೇಳಿಕೆ ಬಗ್ಗೆ ಅಪಪ್ರಚಾರ ಮಾಡಿದರು. ಕಳೆದ 50 ವರ್ಷದಿಂದ ಟಿಟಿಡಿಗೆ ನಂದಿನಿ ತುಪ್ಪ ಪೂರೈಕೆ ಆಗುತ್ತಿದೆ. ನಂದಿನಿ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ, 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಟ್ಟ ಕಾಂಗ್ರೆಸ್: ಬಿಜೆಪಿ ಆಕ್ರೋಶ

ತಿರುಪತಿ ಪ್ರಸಾದಕ್ಕೆ ನಂದಿನಿ ತುಪ್ಪ ಸೇರುತ್ತೆ ಅನ್ನೋದೆ ಹೆಮ್ಮೆ ಸಂಗತಿ. ಸಹಕಾರ ಸಚಿವರು, KMF ಅಧ್ಯಕ್ಷರು ಪ್ರತಿಷ್ಠೆ ಬಿಟ್ಟು ಟಿಟಿಡಿ‌ ಜೊತೆ ಮಾತನಾಡುವಂತೆ ಸಲಹೆ ನೀಡುತ್ತೇನೆ. 50 ವರ್ಷದ ವ್ಯವಹಾರಿಕ ಸಂಬಂಧವನ್ನು ಮುಂದುವರಿಸಬೇಕು. ಸಲಹೆ ಸ್ವೀಕಾರ ಮಾಡದಿದರೆ ಹಾಲು ಉತ್ಪಾದಕರಿಗೆ ನಷ್ಟವಾಗುತ್ತದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ನಿಲ್ಲದ ಭಿನ್ನಮತ; ಪತ್ರ ಬರೆದ ಶಾಸಕರು ಕ್ಷಮೆ ಕೇಳಿದ್ದಾರೆಂಬ ಪರಮೇಶ್ವರ ಹೇಳಿಕೆಗೆ ರಾಯರೆಡ್ಡಿ ಆಕ್ಷೇಪ

ಹೈಕಮಾಂಡ್​​ ಭೇಟಿಗೆ ದೆಹಲಿಗೆ ತೆರಳದ ಮಾಜಿ ಶಾಸಕ ಸಿ.ಟಿ.ರವಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್​​ನಲ್ಲಿರುವ ಮಾಜಿ ಶಾಸಕ ಸಿ.ಟಿ.ರವಿ ಇಂದು ದೆಹಲಿಗೆ ತೆರಳುವುದಾಗಿ ಹೇಳಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಹೈಕಮಾಂಡ್​​ ಭೇಟಿಗೆ ತೆರಳದೇ ಬೆಂಗಳೂರಿನಿಂದ ಚಿಕ್ಕಮಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ. ಬುಧವಾರ ದೆಹಲಿಗೆ ತೆರಳಿ ವರಿಷ್ಠರ ‌ಜೊತೆ ಚರ್ಚೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Loading...
Unable to load recommendations.
Follow Us