ಪರ್ಸಂಟೇಜ್ ವಾರ್: 60% ಕಮೀಷನ್‌ಗೆ ದಾಖಲೆ ಕೇಳಿದ್ದ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಮತ್ತೆ 60% ಕಮಿಷನ್ ಆರೋಪ ಮಾಡಿದ್ದಾರೆ. ಈ ಸಂಬಂಧ ದಾಖಲೆ ನೀಡವಂತೆ ಸಿಎಂ ಕೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ತಮ್ಮ ಆರೋಪಕ್ಕೆ ಆಧಾರವಿದೆ ಎಂದು ಹೇಳಿದ್ದಾರೆ ಮತ್ತು ತುಮಕೂರಿನ ಕಾಂಗ್ರೆಸ್ ಮುಖಂಡರ ಆರೋಪವನ್ನು ಉಲ್ಲೇಖಿಸಿದ್ದಾರೆ.

ಪರ್ಸಂಟೇಜ್ ವಾರ್: 60% ಕಮೀಷನ್‌ಗೆ ದಾಖಲೆ ಕೇಳಿದ್ದ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು
ಪರ್ಸಂಟೇಜ್ ವಾರ್: 60% ಕಮೀಷನ್‌ಗೆ ದಾಖಲೆ ಕೇಳಿದ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು
Edited By:

Updated on: Jan 06, 2025 | 4:52 PM

ಬೆಂಗಳೂರು, ಜನವರಿ 06: ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್​ ಪಕ್ಷದ ಮುಖಂಡರೇ ಮಾಡಿದ ಆರೋಪ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ಮಾಡಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಅವರು, 60% ಕಮಿಷನ್​​ ವಿಚಾರವಾಗಿ ದಾಖಲೆ ಕೊಡಿ ಎಂದಿದ್ದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ರಾಜ್ಯ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪಿಸಿದ್ದರು. ಕಮೀಶನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ?

ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮೀಶನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ. 60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!! ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸುಮಲತಾ ಬಳಸುತ್ತಿದ್ದ ಕಾರು ನಿರಾಕರಿಸಿದರೇ ಕುಮಾರಸ್ವಾಮಿ? ಚಲುವರಾಯಸ್ವಾಮಿ ಹೊಸ ಆರೋಪ

ಇನ್ನು 60 ಪರ್ಸೆಂಟ್ ಆರೋಪವನ್ನೇ ದಾಳ ಮಾಡಿಕೊಂಡಿರುವ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಮಾಜಿ ಸಚಿವ ಅಶ್ವತ್ಥ್ ನಾರಾಯಣ್, ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಸರ್ಕಾರದ ವಿರುದ್ಧ ಪರ್ಸಂಟೇಜ್ ಬಾಣ ಹೂಡಿದ್ದಾರೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:51 pm, Mon, 6 January 25

Loading...
Unable to load recommendations.
Follow Us