ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್​​ಗೆ ಅರ್ಜಿ

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ನೆರವಾಗಿದ್ದ ಐದು ಗ್ಯಾರಂಟಿ ಯೋಜನೆಗಳು. ಇದರ ಕಾರ್ಡ್ ಸಿದ್ಧಪಡಿಸಿ ಚುನಾವಣಾ ಪೂರ್ವದಲ್ಲಿ ಮತದಾರರಿಗೆ ಹಂಚಲಾಗಿತ್ತು. ಇದೀಗ ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಲಾಗಿದೆ.

ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್​​ಗೆ ಅರ್ಜಿ
ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಕೆ
Follow us
Ramesha M
| Updated By: Rakesh Nayak Manchi

Updated on: Jul 21, 2023 | 3:13 PM

ಬೆಂಗಳೂರು, ಜುಲೈ 21: ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು (Congress Guarantee Card) ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ (Karnataka High Court) ಮೆಟ್ಟಿಲೇರಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ಐದು ಗ್ಯಾರಂಟಿ ಯೋಜನೆಗಳು ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದ ಆರೋಪ, ಮಾಜಿ ಶಾಸಕ ವಾಸುಗೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ತೂಗುಗತ್ತಿ

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ