ಬೆಂಗಳೂರು, ಜುಲೈ 21: ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು (Congress Guarantee Card) ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ (Karnataka High Court) ಮೆಟ್ಟಿಲೇರಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ಐದು ಗ್ಯಾರಂಟಿ ಯೋಜನೆಗಳು ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್ಗಳನ್ನು ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.
ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದ ಆರೋಪ, ಮಾಜಿ ಶಾಸಕ ವಾಸುಗೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ತೂಗುಗತ್ತಿ
ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ