ಫಲ ಕೊಡದ ದೆಹಲಿ ಭೇಟಿ: ಅಕ್ಕಿ ಕೊಡಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿರಾಕರಣೆ, ಮುನಿಯಪ್ಪ ಅಸಮಾಧಾನ

ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಸಲು ನಿರಾಕರಿಸಿದೆ ಎಂದು ತಿಳಿದುಬಂದಿದೆ. ಸ್ವತಃ ರಾಜ್ಯ ಆಹಾರ ಸಚಿವ ಕೆಎಚ್​ ಮುನಿಯಪ್ಪ ದೆಹಲಿಗೆ ಹೋಗಿ ಮನವಿ ಮಾಡಿದರೂ ಫಲ ನೀಡಿಲ್ಲ.

ಫಲ ಕೊಡದ ದೆಹಲಿ ಭೇಟಿ: ಅಕ್ಕಿ ಕೊಡಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿರಾಕರಣೆ, ಮುನಿಯಪ್ಪ ಅಸಮಾಧಾನ
ಪಿಯೂಷ್​​ ಗೋಯಲ್- ಕೆಎಚ್​ ಮುನಿಯಪ್ಪ ಭೇಟಿ
Follow us
ರಮೇಶ್ ಬಿ. ಜವಳಗೇರಾ
|

Updated on: Jun 23, 2023 | 2:40 PM

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕನಸಿನ ಯೋಜನೆ ಅನ್ನಭಾಗ್ಯ (Anna Bhagya) ಜಾರಿಗಾಗಿ ಅಕ್ಕಿ ಹೊಂದಿಸಲು ಸರ್ಕಾರ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಕೆಎಚ್​ ಮುನಿಯಪ್ಪ(HK Muniyappa) ಇಂದು (ಜೂನ್ 23) ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್(Piyush Goyal) ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದ್ರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ. ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದ್ರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿಸದರು.

ಇದನ್ನೂ ಓದಿ: Karnataka Breaking News Live: ಕಾಂಗ್ರೆಸ್ ಗ್ಯಾರಂಟಿ ಕೊಡುವಾಗಲೇ ಎಚ್ಚರಿಕೆ ನೀಡಿದ್ದೆವು ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ ಎಂದು ಹೇಳಿದರು.

ಇನ್ನು ಈ ಬಗ್ಗೆ ರಾಜ್ಯಕ್ಕೆ ಪೂರೈಸಲು ಪಿಯೂಷ್​​ ಗೋಯಲ್​ ನಿರಾಕರಣೆ ವಿಚಾರದ ಇತ್ತ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರದ ಧೋರಣೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತಿದೆ. ಮುಂದೆ ಏನು ಮಾಡಬೇಕೆಂದು ಸಿಎಂ, ಆಹಾರ ಸಚಿವರು ನಿರ್ಧರಿಸುತ್ತಾರೆ. ಇನ್ನು ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು ಧರಣಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಪ್ರತಿಭಟನೆ ಮಾಡಿದ್ರೆ ಒಳ್ಳೆಯದು ಎಂದು ಟಾಂಗ್ ನೀಡಿದರು.

ರಾಷ್ಟಪತಿ ಭೇಟಿ, ಕೇಂದ್ರ ಸಚಿವರ ಭೇಟಿ ಸೇರಿದಂತೆ ವಿವಿಧ ಕಾರಣಕ್ಕೆ ದೆಹಲಿಗೆ ಹಾರಿದ್ದ ಸಿಎಂ ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನ ಭೇಟಿಯಾಗಿ ಅಕ್ಕಿ ಸಂಬಂಧ ಚರ್ಚಿಸಿದ್ದರು. ಅಮಿತ್‌ ಶಾ ಕೂಡಾ ಸಂಬಂಧ ಪಟ್ಟವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದ್ದರಂತೆ, ಆದ್ರೆ, ಇದೀಗ ಸ್ವತಃ ಕೇಂದ್ರ ಆಹಾರ ಸಚಿವ ಪಿಯೂಷ್​​ ಗೋಯಲ್, ಕರ್ನಾಟಕಕ್ಕೆ ಅಕ್ಕಿ ಕೊಡಲು​ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಎಚ್​ ಮುನಿಯಪ್ಪ ದೆಹಲಿಯಾತ್ರೆ ಫಲ ನೀಡಿಲ್ಲ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಕಿಕ್ಕಿಸಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್