AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.11ರಂದು ಧಾರವಾಡ ಐಐಟಿ ಉದ್ಘಾಟನೆಗೆ ಪ್ರಧಾನಿ ಆಗಮನ, ಹಲವು ಕಾಮಗಾರಿಗಳಿಗೆ ನಮೋ ಚಾಲನೆ: ಪ್ರಲ್ಹಾದ್ ಜೋಶಿ

ಕೇಂದ್ರ ಸರ್ಕಾರ ನಿರ್ವಹಣಾ ಪ್ರಾಧಿಕಾರ ರಚನೆ ಮಾಡುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಮಹದಾಯಿ ನೀರು ಹಂಚಿಕೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ. ಹೀಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ಹೇಳುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಮಾ.11ರಂದು ಧಾರವಾಡ ಐಐಟಿ ಉದ್ಘಾಟನೆಗೆ ಪ್ರಧಾನಿ ಆಗಮನ, ಹಲವು ಕಾಮಗಾರಿಗಳಿಗೆ ನಮೋ ಚಾಲನೆ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Rakesh Nayak Manchi
|

Updated on: Feb 24, 2023 | 3:45 PM

Share

ಧಾರವಾಡ: ಧಾರವಾಡ ಐಐಟಿ (IIT Dharwad) ಉದ್ಘಾಟನೆ ಮಾ.11ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಇದೇ ವೇಳೆ ಹಲವು ಕಾಮಗಾರಿಗೆ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು. ಧಾರವಾಡದಲ್ಲಿ ಮಹದಾಯಿ ಯೋಜನೆ (Mahadayi Project) ವಿಚಾರವಾಗಿ ಮಾತನಾಡಿದ ಅವರು, ಮೋದಿ ಸರ್ಕಾರ ಮತ್ತೊಮ್ಮೆ ರಾಜ್ಯಕ್ಕೆ ಕೊಡುಗೆ ಕೊಟ್ಟಿದೆ. ಈ ಹಿಂದೆ ರಾಜ್ಯಕ್ಕೆ ಹನಿ ನೀರು ಕೊಡಲ್ಲವೆಂದು ಕಾಂಗ್ರೆಸ್ ಹೇಳಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3 ರಾಜ್ಯಗಳಿಗೂ ಹೆಚ್ಚು ನೀರು ಹೋಗಬಾರದು ಅಂತಾ ನಿರ್ವಹಣಾ ಪ್ರಾಧಿಕಾರ ರಚನೆ ಮಾಡುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಮಹದಾಯಿ ನೀರು ಹಂಚಿಕೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ. ಹೀಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ಹೇಳುತ್ತೇನೆ ಎಂದರು.

ಕಾಂಗ್ರೆಸ್​ ಪಕ್ಷ ಹೆಚ್ಚು ಕಾಲ ಆಡಳಿತದಲ್ಲಿದ್ದರೂ ಏನೂ ಕೆಲಸ ಮಾಡಿಲ್ಲ, ಅವರು ಸದಾ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಿದ್ದಾರೆ. ಇಂದು ಅಭಿವೃದ್ಧಿ ಕಾರ್ಯ ನೋಡಿ ಜನರು ಬಿಜೆಪಿಗೆ ಮತ ಹಾಕುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳದೇ ಕಾಂಗ್ರೆಸ್‌ನವರು ನಾಟಕ ಮಾಡುತ್ತಿದ್ದಾರೆ ಎಂದರು. ಮದ್ಯಪಾನ ವಯೋಮಿತಿಯನ್ನು ಕಡಿಮೆ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದ್ದೇನೆ. ಆದರೆ ಈ ಬಗ್ಗೆ ಪ್ರಸ್ತಾವನೆ ಇಲ್ಲ ಎಂದು ಹೇಳಿರುವುದಾಗಿ ತಿಳಿಸಿದರು.

ಯಡಿಯೂರಪ್ಪರನ್ನು ಸದಾಕಾಲ ಉಪಯೋಗ ಮಾಡಿಕೊಳ್ಳುತ್ತೇವೆ: ಜೋಶಿ

ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ ಬಗ್ಗೆ ಮಾತನಾಡಿದ ಜೋಶಿ, ಯಡಿಯೂರಪ್ಪ ನಮ್ಮ ನಾಯಕರು, ಜನಪ್ರಿಯ ನಾಯಕರು. ಪಕ್ಷಕ್ಕಾಗಿ ಕಾರ್ಯನಿರ್ವಹಿಸುತ್ತೇನೆ ಅಂತ ಅವರೇ ಹೇಳಿದ್ದಾರೆ. ಅವರನ್ನ ಸದಾ ಕಾಲ ಉಪಯೋಗ ಮಾಡಿಕೊಳ್ಳುತ್ತೇವೆ. ಅವರು ಎಷ್ಟು ದಿನ ಓಡಾಡುವ ಶಕ್ತಿ ಇದೆಯೋ ಓಡಾದಲಿ, ಅವರಿಗೆ ದೇವರು ಆ ಶಕ್ತಿ ಕೊಡಲಿ. ಅವರ ಜನಪ್ರಿಯತೆ ಶಕ್ತಿಯನ್ನ ನಾವು ಬಳಸಿಕೊಳ್ಳುತ್ತೇವೆ ಎಂದರು.

ಕಾಂಗ್ರೆಸ್ ಪಕ್ಷ ಇಷ್ಟು ವರ್ಷಗಳ ಕಾಲ ಕತ್ತೆ ಕಾಯ್ತಾ ಇತ್ತಾ?

ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುವ ಘೋಷಣೆ ಮಾಡಿದ ಬಗ್ಗೆ ಕಾಂಗ್ರೆಸ್​​ಗೆ ಟಾಂಗ್ ಕೊಟ್ಟ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷ ಇಷ್ಟು ವರ್ಷಗಳ ಕಾಲ ಕತ್ತೆ ಕಾಯ್ತಾ ಇತ್ತಾ? ನಾವು ಈಗಾಗಲೇ ಉಚಿತವಾಗಿ 5 ಕೆಜಿ ಅಕ್ಕಿ ಕೊಡುತ್ತಿದ್ದೇವೆ. ನಾವು 10 ಕೆಜಿ ಕೊಟ್ಟರೆ ಕಾಂಗ್ರೆಸ್​ನವರು 20 ಕೆಜಿ ಅಂತಾರೆ. ಕಾಂಗ್ರೆಸ್‌ನವರು ಹೇಳಿದ್ದನ್ನು ಯಾವುದಾದರೂ ಮಾಡಿದ್ದಾರಾ ಇದೇ ಕಾಂಗ್ರೆಸ್​ನವರು ಮೊದಲು ಗರೀಬಿ ಹಠಾವೋ ಅಂದರು. ಅದೆಲ್ಲ ಆಗಿದ್ದರೆ ಇವತ್ತೇಕೆ ಮತ್ತೆ ಅಕ್ಕಿ ಕೊಡುವ ಸ್ಥಿತಿ ಬರುತ್ತಿತ್ತು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Pralhad Joshi: ಹೆಚ್.​ಡಿ. ಕುಮಾರಸ್ವಾಮಿಯದ್ದು ಬಾಲಿಶ ಹೇಳಿಕೆ ಎಂದ ಪ್ರಲ್ಹಾದ್ ಜೋಶಿ

ಕಾಂಗ್ರೆಸ್ ಸುಳ್ಳು ಹೇಳಲು ಅತ್ಯಂತ ನಿಸ್ಸೀಮವಾಗಿರುವ ಪಕ್ಷ. ದೇಶದಲ್ಲಿ ಕಾಂಗ್ರೆಸ್​ನವರು 57-58 ವರ್ಷ ಆಡಳಿತ ಮಾಡಿದ್ದಾರೆ. ಈಗಲೂ ವಿದ್ಯುತ್ ಕೊಡುತ್ತೇವೆ ಅಂತಾ ಕಾಂಗ್ರೆಸ್​ ಹೇಳುತ್ತದೆ. ಈಗ ನಾವು 24 ಗಂಟೆಗಳ ಕಾಲ ವಿದ್ಯುತ್ ಕೊಡುತ್ತಿದ್ದೇವೆ. ಕಾಂಗ್ರೆಸ್​ನವರು ಈಗ ಉಚಿತ ವಿದ್ಯುತ್ ಕೊಡುತ್ತೇವೆ ಅಂತಾರೆ. ಇಷ್ಟು ದಿನ ಕಾಂಗ್ರೆಸ್‌ನವರು ಕತ್ತೆ ಕಾಯ್ತಾ ಇದ್ರಾ? 75 ವರ್ಷದಲ್ಲಿ 58 ವರ್ಷ ಅಧಿಕಾರದಲ್ಲಿದ್ದರಲ್ಲ, ನಿಮಗೆ ನಾಚಿಕೆ ಆಗುವುದಿಲ್ವಾ? ಸುಳ್ಳು ಹೇಳುವುದು ಕಾಂಗ್ರೆಸ್‌ನವರ ಡಿಎನ್‌ಎನಲ್ಲೇ ಇದೆ ಎಂದು ವಾಗ್ದಾಳಿ ನಡೆಸಿದರು.

ಸಂಸದರ ಆದರ್ಶಗ್ರಾಮ ಯೋಜನೆಯಡಿ ಸಾಕಷ್ಟು ಅಭಿವೃದ್ಧಿ

ಸಂಸದರ ಆದರ್ಶಗ್ರಾಮ ಯೋಜನೆಯಡಿ ಸಾಕಷ್ಟು ಅಭಿವೃದ್ಧಿ ಆಗಿವೆ ಎಂದು ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಕೈಯಿಂದ ದುಡ್ಡು ಹಾಕಿದರೂ ಅಡ್ಡಿಯಿಲ್ಲ, ಬೇಗ ಮುಗಿಸಿ ಅಂದಿದ್ದೆ. ಗುತ್ತಿಗೆದಾರ ಪ್ರಸಾದ್ ಅವರು ತಮ್ಮ ಕೈಯಿಂದ ಹಣ ಹಾಕಿ ನಿರ್ಮಿಸಿದ್ದಾರೆ. ಹೊಲಿಗೆ ತರಬೇತಿ ನೀಡಿ ಯಂತ್ರಗಳು ಸಹ ನಾವು ಕೊಟ್ಟಿದ್ದೇವೆ. ಹಾರೋಬೆಳವಡಿ, ಕಬ್ಬೆನೂರು ಗ್ರಾಮಗಳಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ಹಳ್ಳದ ಹೂಳು ಎತ್ತಿದ್ದೇವೆ, ವಿದ್ಯುತ್ ಕೇಬಲ್​ ಸಂಪರ್ಕ ಕಲ್ಪಿಸಿದ್ದೇವೆ ಎಂದರು.

ಇಲ್ಲಿ ಬಹಳ ಕೆಲಸ ಆಗಿವೆ. ಆದರೆ ಜನ ಮರೆತಿರುತ್ತಾರೆ. ಸಂಸದರ ಆದರ್ಶ ಗ್ರಾಮದ ಅಡಿ ಕಾರ್ಯಗಳು ಆಗಿವೆ. ಬಿಪಿಸಿಎಲ್ ಅದಕ್ಕಾಗಿ ಮುಂದೆ ಬಂದಿತ್ತು. ಹೊಲಿಗೆ ತರಬೇತಿ ನೀಡಿ ಯಂತ್ರಗಳನ್ನೂ ಕೊಟ್ಟಿದ್ದೇವೆ. ನೌಕರಿಗಳನ್ನೂ ಕೊಡಿಸುತ್ತಿದ್ದೇವೆ. ಈಗ ಎಲ್ಲ ಅಭಿವೃದ್ಧಿ ಆಗಿದೆ. ಇನ್ನು ಮುಂದೆ ಚೆನ್ನಾಗಿ ನಿರ್ವಹಣೆ ಆಗಬೇಕು. ಉಪ ಆರೋಗ್ಯ ಕೇಂದ್ರ ಮಾಡಿದ್ದೇವೆ. ಆದರೆ ಶೌಚಾಲಯ ಬಂದ್ ಇಟ್ಟಿದ್ದಾರೆ. ಈ ರೀತಿ ಆಗಬಾರದು. ಚೆನ್ನಾಗಿ ನಿರ್ವಹಣೆ ಆಗಬೇಕು. ಅಭಿವೃದ್ಧಿ ಅಂದರೆ ಕಟ್ಟಡ ಕಟ್ಟುವುದು, ಕಟ್ಟಿದ ಕಟ್ಟಡ ಸರಿಯಾಗಿ ನಿರ್ವಹಿಸುವುದಾಗಿದೆ. ಹೀಗಾಗಿ ಸ್ಥಳೀಯ ಜನ, ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ವಹಣೆ ಚೆನ್ನಾಗಿ ಮಾಡಬೇಕು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ