ಫೆಬ್ರವರಿ 27ರಂದು ಕರ್ನಾಟಕಕ್ಕೆ ಪ್ರಧಾನಿ ನಮೋ ಭೇಟಿ; ಮೋದಿ ಕಾರ್ಯಕ್ರಮದ ಪಟ್ಟಿ ಹೀಗಿದೆ

|

Updated on: Feb 25, 2023 | 9:41 PM

ಶಿವಮೊಗ್ಗದಲ್ಲಿ ಕೊನೆಗೂ ವಿಮಾನ ಹಾರಾಟಕ್ಕೆ ದಿನಾಂಕ ಫಿಕ್ಸ್ ಆಗಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆ ಮಾಡಲಿದ್ದಾರೆ. ವಿಶೇಷವೆಂದರೆ ವಿಮಾನ ನಿಲ್ದಾಣಕ್ಕೆ ಶ್ರಮಿಸಿದ ಅಂದೇ ಯಡಿಯೂರಪ್ಪ ಅವರ ಜನ್ಮದಿನ.

ಫೆಬ್ರವರಿ 27ರಂದು ಕರ್ನಾಟಕಕ್ಕೆ ಪ್ರಧಾನಿ ನಮೋ ಭೇಟಿ; ಮೋದಿ ಕಾರ್ಯಕ್ರಮದ ಪಟ್ಟಿ ಹೀಗಿದೆ
ಪ್ರಧಾನಿ ನರೇಂದ್ರ ಮೋದಿ
Image Credit source: Sergei Bobylev/Sputnik/Kremlin Pool Photo/AP/picture alliance
Follow us on

ಬೆಂಗಳೂರು: ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ವಿಮಾನ ನಿಲ್ದಾಣ (Shivamogga Airport) ಉದ್ಘಾಟನೆಗೆ ಸಿದ್ದವಾಗಿದ್ದು, ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರ ಜನ್ಮದಿನದಂದೇ (ಫೆಬ್ರವರಿ 27) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಲಿದ್ದಾರೆ. ಹೌದು, ಫೆ.27ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಮೋದಿ, ಶಿವಮೊಗ್ಗ, ಬೆಳಗಾವಿಗೆ ತೆರಳಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಂದು ಮೋದಿ ಅವರ ಕಾರ್ಯಕ್ರಮಗಳ ವಿವರಗಳು ಹೀಗಿವೆ.

ಫೆಬ್ರವರಿ 27ರಂದು ಬೆಳಗ್ಗೆ 11.35ಕ್ಕೆ ಶಿವಮೊಗ್ಗ ಏರ್‌ಪೋರ್ಟ್‌ಗೆ ಮೋದಿ ಅವರು ಆಗಮಿಸಲಿದ್ದಾರೆ. ಬೆಳಗ್ಗೆ 11.45ರಿಂದ 11.55ರವರೆಗೆ ಟರ್ಮಿನಲ್ ಬಿಲ್ಡಿಂಗ್ ವೀಕ್ಷಣೆ ಮಾಡಿ ಮಧ್ಯಾಹ್ನ 12ರಿಂದ 1.15ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮೋದಿ ಅವರು ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ: ರಿಲ್ಯಾಕ್ಸ್ ಮೂಡಿಗೆ ಜಾರಿದ ರಾಜಹುಲಿ ಯಡಿಯೂರಪ್ಪ, ಕುಟುಂಬದೊಂದಿಗೆ ಫ್ರೀಡಂ ಪಾರ್ಕ್, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ

ಮಧ್ಯಾಹ್ನ 1.30ಕ್ಕೆ ಶಿವಮೊಗ್ಗದಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ತೆರಳಲಿರುವ ಮೋದಿ, ಮಧ್ಯಾಹ್ನ 2.20ಕ್ಕೆ ಬೆಳಗಾವಿ ಏರ್‌ಪೋರ್ಟ್‌ಗೆ ತಲುಪಲಿದ್ದಾರೆ. ಮಧ್ಯಾಹ್ನ 2.25ಕ್ಕೆ ಏರ್‌ಪೋರ್ಟ್‌ನಿಂದ ಕಾರ್ಯಕ್ರಮದ ಸ್ಥಳಕ್ಕೆ ಹೆಲಿಕಾಪ್ಟರ್‌ ಮೂಲಕ ತೆರಳಲಿದ್ದಾರೆ. ಮಧ್ಯಾಹ್ನ 2.50ರಿಂದ 3.15ರವರೆಗೆ ಭರ್ಜರಿ ರೋಡ್ ಶೋ ನಡೆಸಿ ಸಮಾವೇಶ ಸ್ಥಳಕ್ಕೆ ತೆರಳಿದ್ದಾರೆ.

ಗಮನಿಸಬೇಕಾದ ಮತ್ತೊಂದು ಸಂತೋಷದ ಸುದ್ದಿ ಎಂದರೆ ಅಂದೇ ರೈತರ ಖಾತೆಗೆ ಹಣ ಜಮಾ ಆಗಲಿದೆ. ಮಧ್ಯಾಹ್ನ 3.15ರಿಂದ 4.30ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ, ಪಿಎಂ ಕಿಸಾನ್ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಬಳಿಕ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಸಂಜೆ 4.40ಕ್ಕೆ ಕಾರ್ಯಕ್ರಮದ ಸ್ಥಳದಿಂದ ಹೆಲಿಕಾಪ್ಟರ್‌ ಮೂಲಕ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಂಜೆ 5.10ಕ್ಕೆ ಅಲ್ಲಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ಪ್ರಯಾಣ ಕೈಗೊಳ್ಳಲಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Sat, 25 February 23