ಚುನಾವಣೆ ಬಿಸಿಯಲ್ಲಿ ಉತ್ತರ ಪ್ರದೇಶ: ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ, ಮೋದಿ ಪ್ರವಾಸ

ಚುನಾವಣೆ ಘೋಷಣೆಗೂ ಮುನ್ನವೇ ಸಾರ್ವಜನಿಕ ಸಭೆಗಳನ್ನು ನಡೆಸಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತಂತ್ರ ಹೂಡಿದ್ದಾರೆ

ಚುನಾವಣೆ ಬಿಸಿಯಲ್ಲಿ ಉತ್ತರ ಪ್ರದೇಶ: ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ, ಮೋದಿ ಪ್ರವಾಸ
ನರೇಂದ್ರ ಮೋದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 25, 2021 | 9:56 AM

ಲಖನೌ: ಉತ್ತರ ಪ್ರದೇಶ ವಿಧಾನಸಭೆಗೆ 2022ರ ಆರಂಭದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಘೋಷಣೆಗೂ ಮುನ್ನವೇ ಸಾರ್ವಜನಿಕ ಸಭೆಗಳನ್ನು ನಡೆಸಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತಂತ್ರ ಹೂಡಿದ್ದಾರೆ. ಹೀಗಾಗಿ ಪ್ರಧಾನಿ ಹಲವು ಬಾರಿ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇಂದು (ಅ.26) ಮತ್ತೆ ಪ್ರಧಾನಿ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿ ಹಾಗೂ ಸಿದ್ದಾರ್ಥ ನಗರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.

ಪ್ರವಾಸದ ವೇಳೆ ಉತ್ತರ ಪ್ರದೇಶಕ್ಕೆ ಮೋದಿ ಡಬಲ್ ಗಿಫ್ಟ್ ನೀಡಲಿದ್ದಾರೆ. ಸಿದ್ಧಾರ್ಥ ನಗರದಲ್ಲಿ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಮತ್ತು ₹ 5,000 ಕೋಟಿ ಮೊತ್ತದ 30 ಯೋಜನೆಗಳನ್ನು ಉದ್ಘಾಟಿಸುವರು. ವಾರಾಣಸಿಯಲ್ಲಿ ₹ 64,000 ಕೋಟಿ ಮೌಲ್ಯದ ರಾಷ್ಟ್ರೀಯ ವೈದ್ಯಕೀಯ ಯೋಜನೆಯನ್ನು ಅನಾವರಣಗೊಳಿಸಲಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಹಲವೆಡೆ ಸಾರ್ವಜನಿಕ ಸಭೆಗಳನ್ನು ಆಯೋಜಿಸಿದೆ. ಕಳೆದ ವಾರ ವಾರಾಣಸಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಱಲಿ ನಡೆಸಿದ ಹಿನ್ನಲೆಯಲ್ಲಿ ಮೋದಿ ಸಭೆಗಳು ಮಹತ್ವ ಪಡೆದುಕೊಂಡಿವೆ. ಎರಡು ದಿನಗಳ ಹಿಂದಷ್ಟೇ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಇತರ ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ಮೋದಿ, ಉತ್ತರ ಪ್ರದೇಶದ ಕುಶಿನಗರಕ್ಕೆ ಭೇಟಿ ನೀಡಿದ್ದರು. ಅದಕ್ಕೂ ಮೊದಲು ಅವರು ಅಲಿಗಢಕ್ಕೆ ಭೇಟಿ ನೀಡಿದ್ದರು. ಮೋದಿ ಮುಂದಿನ ತಿಂಗಳು ಲಖನೌ ನಗರದಲ್ಲಿ ಉತ್ತರ ಪ್ರದೇಶದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಲಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ಅಧಿಕಾರಿಗಳು ಹೇಳುವ ಪ್ರಕಾರ, ವಾರಾಣಸಿಯಿಂದ ಪ್ರಧಾನಮಂತ್ರಿ ‘ಆತ್ಮನಿರ್ಭರ್ ಸ್ವಸ್ತ ಭಾರತ್ ಯೋಜನೆ’ ಅನಾವರಣಗೊಳಿಸಲಿದ್ದಾರೆ. ಈ ವರ್ಷದ ಬಜೆಟ್​ನಲ್ಲಿ ₹ 64,180 ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರವು ಈ ಯೋಜನೆಗಾಗಿ ತೆಗೆದಿರಿಸಿದೆ. ಆದರೆ ವಾರಾಣಸಿ ಭೇಟಿಯ ವೇಳೆಯೇ ಯೋಜನೆ ಆರಂಭಿಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದೇನಾದರೂ ನಡೆದರೇ, ಸ್ವಚ್ಛ ಭಾರತ ಮತ್ತು ಪಿಎಂ ಉಜ್ವಲ ಯೋಜನೆ ನಂತರ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದಿಂದ ಆರಂಭಿಸುವ ಮೂರನೇ ದೊಡ್ಡ ಯೋಜನೆ ಇದಾಗಲಿದೆ. ಈ ಯೋಜನೆಯಡಿಯಲ್ಲಿ ಆರೋಗ್ಯ ವ್ಯವಸ್ಥೆ ಮತ್ತು ಸಂಸ್ಥೆಗಳ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಲಾಗುತ್ತದೆ. 17,788 ಗ್ರಾಮೀಣ ಆರೋಗ್ಯ ಮತ್ತು ವೆಲ್​ನೆಸ್​ ಸೆಂಟರ್​ಗಳನ್ನು 10 ರಾಜ್ಯಗಳಲ್ಲಿ ಸ್ಥಾಪಿಸಲಾಗುತ್ತದೆ. ನಗರ ಪ್ರದೇಶಗಳಲ್ಲಿ 11,024 ಆರೋಗ್ಯ ಮತ್ತು ವೆಲ್​ನೆಸ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. 3,382 ಸಾರ್ವಜನಿಕ ಆರೋಗ್ಯ ಘಟಕಗಳು 11 ರಾಜ್ಯಗಳಲ್ಲಿ ಅಸ್ತಿತ್ವಕ್ಕೆ ಬರಲಿವೆ. 602 ಜಿಲ್ಲೆಗಳು ಮತ್ತು 12 ಕೇಂದ್ರೀಯ ಸಂಸ್ಥೆಗಳಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ಬ್ಲಾಕ್‌ಗಳನ್ನು ಸ್ಥಾಪಿಸಲಾಗುತ್ತೆ. ಎಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸಂಪರ್ಕಿಸಲು ಸಮಗ್ರ ಆರೋಗ್ಯ ಮಾಹಿತಿ ಪೋರ್ಟಲ್ ಅನ್ನು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಲಾಗುತ್ತದೆ.

ವಾರಣಾಸಿಯಲ್ಲಿ ಪಿಎಂ ಅವರಿಂದ ಅನಾವರಣಗೊಳಿಸಬಹುದಾದ ಇತರ ಯೋಜನೆಗಳಲ್ಲಿ ವಾರಣಾಸಿಯ ರಿಂಗ್ ರೋಡ್ ಯೋಜನೆಯ ಎರಡನೇ ಹಂತ, ಸೇತುವೆಗಳು ಮತ್ತು ಇತರ ಅಭಿವೃದ್ಧಿ ಯೋಜನೆಗಳು ಸೇರಿವೆ. ಸಿದ್ಧಾರ್ಥನಗರದಿಂದ ಪ್ರಧಾನಮಂತ್ರಿ ಅನಾವರಣಗೊಳಿಸಲಿರುವ ಒಂಬತ್ತು ವೈದ್ಯಕೀಯ ಕಾಲೇಜುಗಳಿಗೆ ರಾಜ್ಯದ ವಿವಿಧ ಐಕಾನ್‌ಗಳ ಹೆಸರನ್ನು ಇಡಲಾಗಿದೆ.

ಇದನ್ನೂ ಓದಿ: Narendra Modi: ಭಾರತದ 7 ಕೊವಿಡ್ ಲಸಿಕೆ ಉತ್ಪಾದಕರ ಜೊತೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇದನ್ನೂ ಓದಿ: ‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಹುದೊಡ್ಡ ದಾಖಲೆಗಳನ್ನೇ ನಿರ್ಮಿಸಿದೆ’-ಟ್ವೀಟ್​ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್