AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯವಾಗಿ ರಾಹುಲ್ ಗಾಂಧಿ​ ಮುಗಿಸಲು ಷಡ್ಯಂತ್ರ ನಡೀತಿದೆ ಎಂದ ಡಿಸಿಎಂ ಡಿಕೆ ಶಿವಕುಮಾರ್

ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಪ್ರಸನ್ನ ಗಾಂವ್ಕರ್​
| Edited By: |

Updated on: Jul 10, 2023 | 5:51 PM

Share

ಬೆಂಗಳೂರು: ರಾಹುಲ್​ ಬಗ್ಗೆ ಬಂದ ಕೋರ್ಟ್​​ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ರಾಜಕೀಯವಾಗಿ ರಾಹುಲ್​ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar)​ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಪ್ರೆಸ್ ಮೀಟ್​ನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ

ರಾಹುಲ್​ ಗಾಂಧಿ ಬೆಂಬಲಿಸಿ ಬುಧವಾರ ಫ್ರೀಡಂಪಾರ್ಕ್​ನಲ್ಲಿ ಮೌನ ಪ್ರತಿಭಟನೆ ಮಾಡಲಿದ್ದೇವೆ. ಸಿಎಂ ಸೇರಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ ಎಂದರು. ಎಲ್ಲ ವಿರೋಧ ಪಕ್ಷದವರು ರಾಹುಲ್‌ ಪರ ನಿಲ್ಲುತ್ತಿದ್ದೇವೆ ಎನ್ನುವ ಸಂದೇಶ ಕಳಿಸಬೇಕಿದೆ. ರಾಹುಲ್ ಕರ್ನಾಟಕದಲ್ಲಿ ಮಾಡಿದ್ದ ಭಾಷಣಕ್ಕೆ ಕೋರ್ಟ್ ತೀರ್ಪಿನ ಬಗ್ಗೆ ಮಾತಾಡುವುದಿಲ್ಲ.

ಇದನ್ನೂ ಓದಿ: ವಿಧಾನಸಭೆಯಲ್ಲಿ ‘ಗ್ಯಾರಂಟಿ’ ಜಟಾಪಟಿ; ಕೆಜೆ ಜಾರ್ಜ್ ಮಾತಿಗೆ ಕೆರಳಿದ ಯತ್ನಾಳ್​ರಿಂದ ಏಕವಚನದಲ್ಲೇ ಪ್ರಹಾರ

ಭಾರತ್ ಜೋಡೋ ಯಾತ್ರೆಯಲ್ಲಿ ಅವರು ನಡೆದ ಶಕ್ತಿಯಿಂದಾಗಿ ಕರ್ನಾಟಕಕ್ಕೂ ಶಕ್ತಿ ಬಂತು. ರಾಹುಲ್ ನಡೆದ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಅವರು ಎಲ್ಲೆಲ್ಲಿ ಹೆಜ್ಜೆ ಹಾಕಿದ್ದರೋ ಅಲ್ಲೆಲ್ಲಾ ಗೆದ್ದು ಶಕ್ತಿ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ: ಫುಟ್‌ಪಾತ್​ ಮೇಲೆ ಕಸ ಹಾಕಿದರೇ ಠಾಣಾ ವ್ಯಾಪ್ತಿಯಲ್ಲಿ ಕ್ರಮ, ಟ್ಯಾಕ್ಸ್ ಕದಿಯುತ್ತಿರುವವರಿಗೆ ಕಡಿವಾಣ: ಡಿಕೆ ಶಿವಕುಮಾರ್​

ಜೈನ ಮುನಿ ಹತ್ಯೆ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವರಿಗೆ ಜವಾಬ್ದಾರಿ ಕೊಟ್ಟಿದ್ದೇವೆ ಅವರು ಉತ್ತರ ಕೊಡುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ