ದೇವೇಗೌಡರಂತಹ ರಾಜಕಾರಣಿ ಆಧಾರರಹಿತ ಸುಳ್ಳು ಹೇಳುತ್ತಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್ ಕಿಡಿ

ಹೆಚ್​ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ದೇವೇಗೌಡರಂತಹ ರಾಜಕಾರಣಿ ಆಧಾರರಹಿತ ಸುಳ್ಳು ಹೇಳುತ್ತಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್ ಕಿಡಿ
ಪಿಣರಾಯಿ ವಿಜಯನ್ & ಹೆಚ್​ಡಿ ದೇವೇಗೌಡ
Follow us
TV9 Web
| Updated By: Ganapathi Sharma

Updated on: Oct 20, 2023 | 6:28 PM

ಬೆಂಗಳೂರು, ಅಕ್ಟೋಬರ್ 20: ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ವಿಚಾರವಾಗಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಅವರು ನೀಡಿರುವ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಕೇರಳ ಮುಖ್ಯಮಂತ್ರಿ ಒಪ್ಪಿದ್ದಾರೆಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

‘ಹೆಚ್​ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಿಪಿಐ(ಎಂ) ಎಂದಿಗೂ ಸಂಘ ಪರಿವಾರದ ವಿರುದ್ಧದ ಹೋರಾಟದಲ್ಲಿ ಅಚಲ ಮತ್ತು ಮಣಿಯದ ಶಕ್ತಿಯಾಗಿದೆ. ನಮ್ಮ ನಿಲುವಿನಲ್ಲಿ ಅಸ್ಪಷ್ಟತೆಗೆ ಅವಕಾಶವಿಲ್ಲ’ ಎಂದು ಪಿಣರಾಯಿ ವಿಜಯನ್ ಎಕ್ಸ್​ ಪೋಸ್ಟ್​​​ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ಜತೆಗಿನ ಮೈತ್ರಿಗೆ ಜೆಡಿಎಸ್​​ನ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ಪಕ್ಷದ ರಾಜ್ಯಾಧ್ಯಕ್ಷ ತಾವು. ತಮ್ಮ ಸಮ್ಮತಿ ಇಲ್ಲದೆ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕ್ರಮ ಕೈಗೊಂಡಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ, ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆಗೊಳಿಸಿದ್ದರು.

ಇದನ್ನೂ ಓದಿ: ಯಾವ ಸಭೆಯಲ್ಲೂ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರದ ಸಿಎಂ ಇಬ್ರಾಹಿಂ: ಶಾಸಕ ಎ ಮಂಜು ಬಿಚ್ಚಿಟ್ರು ಹೊಸ ರಹಸ್ಯ

ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ಮೈತ್ರಿ ವಿಚಾರವಾಗಿ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದರು. ಇದೇ ವೇಳೆ ಕೇರಳ ಮುಖ್ಯಮಂತ್ರಿಗಳ ಬಗ್ಗೆಯೂ ಪ್ರಸ್ತಾಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್