ಬೆಂಗಳೂರು, ಅಕ್ಟೋಬರ್ 20: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ (HD Deve Gowda) ಅವರು ನೀಡಿರುವ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಕೇರಳ ಮುಖ್ಯಮಂತ್ರಿ ಒಪ್ಪಿದ್ದಾರೆಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
‘ಹೆಚ್ಡಿ ದೇವೇಗೌಡರ ಇತ್ತೀಚಿನ ಹೇಳಿಕೆಯಿಂದ ನನಗೆ ಸಂಪೂರ್ಣ ಆಶ್ಚರ್ಯವಾಗಿದೆ! ಜೆಡಿಎಸ್-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವ ಕಲ್ಪನೆಯನ್ನು ಸಹ ನಾನು ಮಾಡುವುದಿಲ್ಲ. ಅಂಥದ್ದೊಂದು ಭಾವನೆ ಯಾವುದೇ ರೀತಿಯ ಭ್ರಮೆಗಿಂತ ಕಡಿಮೆಯದ್ದಲ್ಲ. ದೇವೇಗೌಡರಂತಹ ಪಳಗಿದ ರಾಜಕಾರಣಿ ಈ ರೀತಿ ಆಧಾರರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಿಪಿಐ(ಎಂ) ಎಂದಿಗೂ ಸಂಘ ಪರಿವಾರದ ವಿರುದ್ಧದ ಹೋರಾಟದಲ್ಲಿ ಅಚಲ ಮತ್ತು ಮಣಿಯದ ಶಕ್ತಿಯಾಗಿದೆ. ನಮ್ಮ ನಿಲುವಿನಲ್ಲಿ ಅಸ್ಪಷ್ಟತೆಗೆ ಅವಕಾಶವಿಲ್ಲ’ ಎಂದು ಪಿಣರಾಯಿ ವಿಜಯನ್ ಎಕ್ಸ್ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.
I am absolutely astonished by H D Deve Gowda’s recent statement! The mere notion that I would even entertain the idea of supporting a JDS-BJP alliance is nothing short of a delusional fantasy. It is utterly disgraceful for a seasoned politician like Deve Gowda to make such…
— Pinarayi Vijayan (@pinarayivijayan) October 20, 2023
ಬಿಜೆಪಿ ಜತೆಗಿನ ಮೈತ್ರಿಗೆ ಜೆಡಿಎಸ್ನ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ಪಕ್ಷದ ರಾಜ್ಯಾಧ್ಯಕ್ಷ ತಾವು. ತಮ್ಮ ಸಮ್ಮತಿ ಇಲ್ಲದೆ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕ್ರಮ ಕೈಗೊಂಡಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡ, ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆಗೊಳಿಸಿದ್ದರು.
ಇದನ್ನೂ ಓದಿ: ಯಾವ ಸಭೆಯಲ್ಲೂ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರದ ಸಿಎಂ ಇಬ್ರಾಹಿಂ: ಶಾಸಕ ಎ ಮಂಜು ಬಿಚ್ಚಿಟ್ರು ಹೊಸ ರಹಸ್ಯ
ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ಮೈತ್ರಿ ವಿಚಾರವಾಗಿ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದರು. ಇದೇ ವೇಳೆ ಕೇರಳ ಮುಖ್ಯಮಂತ್ರಿಗಳ ಬಗ್ಗೆಯೂ ಪ್ರಸ್ತಾಪಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ