ಭಾಗ್ಯಗಳ ಹೆಸರಿನಲ್ಲಿ ರಾಜಕಾರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಡಾ ಅಶ್ವತ್ಥ್ ನಾರಾಯಣ ಕೆಂಡಾಮಂಡಲ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 06, 2023 | 4:14 PM

ರಾಜ್ಯ ಕಾಂಗ್ರೆಸ್​ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ಮಾಡಿದ್ದಾರೆ.

ಭಾಗ್ಯಗಳ ಹೆಸರಿನಲ್ಲಿ ರಾಜಕಾರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಡಾ ಅಶ್ವತ್ಥ್ ನಾರಾಯಣ ಕೆಂಡಾಮಂಡಲ
Follow us on

ಬೆಂಗಳೂರು, ಆಗಸ್ಟ್​ 06: ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ (Ashwath Narayan) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಅರ್ಹತೆ, ಯೋಗ್ಯತೆ ಇಲ್ಲ. ಭ್ರಷ್ಟಾಚಾರ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್​​ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.

ಜನರ ಮೇಲೆ ಪ್ರೀತಿ ಇಟ್ಟುಕೊಂಡು ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದಲ್ಲ. ಅಧಿಕಾರ, ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್​ನವರು ಗ್ಯಾರಂಟಿ ಕೊಟ್ಟಿದ್ದಾರೆ. ಕಾಂಗ್ರೆಸ್​ ಸರ್ಕಾರ ಬಂದ ಎರಡೇ ತಿಂಗಳಲ್ಲಿ ಜನ ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದರು.

ಇದನ್ನೂ ಓದಿ: ಕುಮಾರಸ್ವಾಮಿ ದಾಖಲೆ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು: ಪ್ರಲ್ಹಾದ್ ಜೋಶಿ

ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ

ರಾಜ್ಯ ಕಾಂಗ್ರೆಸ್​ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ. ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವವರ ಬಗ್ಗೆ ಯಾಕೆ ಮಾತನಾಡಬೇಕು. ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇಂಥವರಿಂದ ಒಂದೇ ಒಂದು ಒಳ್ಳೆಯ ಕೆಲಸವನ್ನು ಬಯಸಲು ಸಾಧ್ಯವಿಲ್ಲ. ಇವರು ನಿರ್ನಾಮ ಆಗುವ ಹಾಗೇ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಮಾರ್ಗದರ್ಶಿಯಾಗಿರಲಿ. ಗುಣಮಟ್ಟದ ಶಿಕ್ಷಣ ಹಾಗೂ ಆಡಳಿತದಲ್ಲಿ ತಮ್ಮ ತಾಕತ್ ತೋರಿಸಬೇಕು. ಮೋಸದ ಭಾಗ್ಯದಿಂದ ಅಧಿಕಾರ ಪಡೆದುಕೊಂಡಿದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ: ಅಸಮಾಧಾನ ಶಮನಕ್ಕೆ ಮುಂದಾದ ಸಿಎಂ, ಡಿಸಿಎಂ: ಸೋಮವಾರ ಆರು ಜಿಲ್ಲೆಗಳ ಸಚಿವರು, ಶಾಸಕರ ಜೊತೆ ಸಭೆ

ಕಾಂಗ್ರೆಸ್ಸಿಗರು ಆಶ್ವಾಸನೆ ಮೂಲಕವೇ ದೇಶವನ್ನು ಮುನ್ನಡೆಸಿದ್ದಾರೆ: ಅಧ್ಯಕ್ಷ ಕಟೀಲು

ಕರ್ನಾಟಕ ಮಾಡಲ್​ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ವಾಗ್ದಾಳಿ ಮಾಡಿದ್ದಾರೆ. ಕಾಂಗ್ರೆಸ್ಸಿಗರು ಆಶ್ವಾಸನೆ ಮೂಲಕವೇ ದೇಶವನ್ನು ಮುನ್ನಡೆಸಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ವಿಕಾಸದ ಯಾತ್ರೆ ನಡೆಯುತ್ತಿದೆ. ಆದರೆ ಕಾಂಗ್ರೆಸ್​ನ ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಶ್ರೀಲಂಕಾ, ಪಾಕಿಸ್ತಾನದಲ್ಲಿ ಏನಾಗಿದೆ ಎಂದು ನಾವು ನೋಡಿದ್ದೇವೆ. ಈ ದೇಶವನ್ನು ಸಿದ್ದರಾಮಯ್ಯ ಯಾವ ಕಡೆ ಕೊಂಡೊಯ್ಯುತ್ತಾರೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:14 pm, Sun, 6 August 23