ಕಳಪೆ ಕಾಮಗಾರಿಯೇ ಬೆಂಗಳೂರಿನ ಈ ಪರಿಸ್ಥಿತಿಗೆ ಕಾರಣ: ಮಾಜಿ ಸಿಎಂ ಕುಮಾರಸ್ವಾಮಿ ಆರೋಪ
ಬೆಂಗಳೂರಿನಲ್ಲಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾದ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಸಿಟಿ ರೌಂಡ್ಸ್ ಹೊಡೆದಿದ್ದಾರೆ. ನಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಫ್ಲ್ಯಾಟ್ಗಳಿಗೆ ಮಳೆ ನೀರು ನುಗ್ಗಿ ಜನ ಲಾಡ್ಜ್ಗಳಲ್ಲಿ ಇರುವಂತಾಗಿದ್ದು, ಇದಕ್ಕೆ ಕಾರಣ ಕಳಪೆ ಕಾಮಗಾರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumaraswami) ಆರೋಪಿಸಿದ್ದಾರೆ. ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪಂತರಪಾಳ್ಯದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲೂ ನಿರಂತರ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಸಿಎಂ ಆಗಿದ್ದ ಜಿಲ್ಲೆಯಲ್ಲೇ ಈ ರೀತಿಯ ಸಮಸ್ಯೆ ಇದೆ. ಸರ್ಕಾರ ನಮ್ಮ ಕಷ್ಟಕ್ಕೆ ಸ್ಪಂದಿಸಿಲ್ಲವೆನ್ನುವ ಅಸಮಾಧಾನ ಜನರಿಗಿದೆ ಎಂದರು.
ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದೆ. ಈ ಹಿನ್ನೆಲೆ ಕುಮಾರಸ್ವಾಮಿ ಅವರು ಸಿಟಿ ರೌಂಡ್ಸ್ ಹೊಡೆದಿದ್ದಾರೆ. ಸಚಿವ ಮುನಿರತ್ನ ಕ್ಷೇತ್ರವಾಗಿರುವ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಕುಮಾರಸ್ವಾಮಿ ಪ್ರದಕ್ಷಿಣೆ ಹಾಕಿದ್ದಾರೆ. ಸಚಿವ ವಿ.ಸೋಮಣ್ಣ ಕ್ಷೇತ್ರದ ಗಂಗಾಗೊಂಡನಹಳ್ಳಿಯಲ್ಲೂ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸಚಿವರಿಗೆ ವಲಯವಾರು ಉಸ್ತುವಾರಿ ನೀಡಿದ್ದಾರೆ. ಆದರೆ, ಉಸ್ತುವಾರಿ ಸಚಿವರು ಮುಖ್ಯಮಂತ್ರಿಯವರ ಜೊತೆ ವಿದೇಶ ಪ್ರವಾಸದಲ್ಲಿದ್ದಾರೆ. ಸಿಎಂ ಇದ್ದಾಗಲೇ ಇಂಥ ಪರಿಸ್ಥಿತಿ ಇದೆ. ಸಿಎಂ ಇಲ್ಲದಿದ್ದರೆ ಸಚಿವರು ಏನ್ ಕೆಲಸ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ರಾಜರಾಜೇಶ್ವರಿನಗರದಲ್ಲಿ ಮುನಿರತ್ನ ಅವರು 3 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಡಾ.ಅಶ್ವತ್ಥ್ ನಾರಾಯಣ ಕ್ಷೇತ್ರಕ್ಕೆ ಎಷ್ಟು ಅನುದಾನ ಹೋಗಿದೆ? ಎಲ್ಲಾ ಕಡೆ ಕಳಪೆ ಕಾಮಗಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ದಾವೋಸ್ಗೆ ಹೋಗಿದ್ದಾರೆ. ಯಾವ ಮುಖ ಇಟ್ಟುಕೊಂಡು ಬಂಡವಾಳ ಹೂಡಿ ಅಂತ ಕೇಳುತ್ತಾರೆ? ಬೊಮ್ಮಾಯಿಯವರು ಕಣ್ಣೊರೆಸುವ ತಂತ್ರವನ್ನು ಮಾಡುತ್ತಿದ್ದಾರೆ. ಕಳಪೆ ಕಾಮಗಾರಿ ನಡೆಸಿರುವ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಅನುದಾನ ಬಿಡುಗಡೆ ಎಂಬ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಹಲವು ಬಾರಿ ದೆಹಲಿಗೆ ದಂಡೆತ್ತಿ ಹೋದ ಸಿಎಂ
ಆದಷ್ಟು ಬೇಗ ನಗರದ ಸಮಸ್ಯೆಗಳನ್ನು ಬಗೆಹರಿಸಬೇಕು. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಯಾವುದೇ ಕೆಲಸಗಳು ಆಗದೇ ಇದ್ದಲ್ಲಿ ಸಂಪೂರ್ಣ ಮಾಹಿತಿಯೊಂದಿಗೆ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಎಚ್ಚರಿಕೆ ನೀಡಿದರು. ಅಲ್ಲದೆ, ಮುಖ್ಯಮಂತ್ರಿ ಈಗಾಗಲೇ ಏಳುಬಾರಿ ದೆಹಲಿಗೆ ದಂಡೆತ್ತಿ ಹೋಗಿದ್ದಾರೆ. ಆದರೂ ಯಾವುದೇ ಕೆಲಸ ಆಗಿಲ್ಲ ಎಂದರು.
‘ರಿಪಬ್ಲಿಕ್ ಆಫ್ ಯಲಹಂಕ’ದ ಮಹಾದರ್ಶನ
ನಿನ್ನೆ ಬ್ಯಾಟರಾಯನಪುರ, ಹೆಬ್ಬಾಳ, ಯಲಹಂಕ ವಿಧಾನಸಭೆ ಕ್ಷೇತ್ರಗಳನ್ನು ವೀಕ್ಷಣೆ ಮಾಡಿದ್ದೆ. ಈ ವೇಳೆ ‘ರಿಪಬ್ಲಿಕ್ ಆಫ್ ಯಲಹಂಕ’ದ ಮಹಾದರ್ಶನವೇ ಆಯಿತು ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
ಮಳೆಯಿಂದ ತೀವ್ರ ಹಾನಿಗೆ ತುತ್ತಾಗಿರುವ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ನಾನು, ಶನಿವಾರದಂದು ಬ್ಯಾಟರಾಯನಪುರ, ಹೆಬ್ಬಾಳ, ಯಲಹಂಕ ವಿಧಾನಸಭೆ ಕ್ಷೇತ್ರಗಳನ್ನು ವೀಕ್ಷಣೆ ಮಾಡಿದ್ದೆ. ಆಗ ನನಗೆ ʼರಿಪಬ್ಲಿಕ್ ಆಫ್ ಯಲಹಂಕʼದ ಮಹಾದರ್ಶನವೇ ಆಯಿತು. 2/9#ರಿಪಬ್ಲಿಕ್_ಆಫ್_ಯಲಹಂಕ
— H D Kumaraswamy (@hd_kumaraswamy) May 22, 2022
ಕೆಂಪೇಗೌಡರು ಸರ್ವ ಜನಾಂಗದವರನ್ನು ಸಮಭಾವದಿಂದ ಕಂಡಿದ್ದರು. ನಾಡಪ್ರಭು ಕೆಂಪೇಗೌಡರು ಸರ್ವ ಜನಾಂಗದ ತೋಟ ನಿರ್ಮಿಸಿದ್ದರು. ಪ್ರಭುಗಳು ಕಟ್ಟಿದ ಬೆಂಗಳೂರಿನ ಯಲಹಂಕದಲ್ಲಿ ಅಭಿವೃದ್ಧಿ ವಿಚಾರದಲ್ಲಿ ನಿರ್ದಿಷ್ಟವಾಗಿ ಒಂದು ಸಮುದಾಯವನ್ನೇ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ, ಅವರು ವಾಸಿಸುವ ಬಡಾವಣೆಯನ್ನು ಕಡೆಗಣಿಸಿ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದರು.
ಸರ್ವ ಜನಾಂಗದ ಜನರನ್ನು ಸಮಭಾವದಿಂದ ಕಂಡು ಸರ್ವ ಜನಾಂಗದ ತೋಟ ನಿರ್ಮಿಸಿದ್ದರು ನಾಡಪ್ರಭು ಕೆಂಪೇಗೌಡರು.
ಪ್ರಭುಗಳು ಕಟ್ಟಿದ ಬೆಂಗಳೂರಿನ ಯಲಹಂಕದಲ್ಲಿ ಅಭಿವೃದ್ಧಿ ವಿಚಾರದಲ್ಲಿ ನಿರ್ದಿಷ್ಟವಾಗಿ ಒಂದು ಸಮುದಾಯವನ್ನೇ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ, ಅವರು ವಾಸಿಸುವ ಬಡಾವಣೆಯನ್ನು ಕಡೆಗಣಿಸಿ ಅವರನ್ನು ಟಾರ್ಗೆಟ್ ಮಾಡಲಾಗಿದೆ. 1/9 pic.twitter.com/8bzNngh4lF
— H D Kumaraswamy (@hd_kumaraswamy) May 22, 2022
ಯಲಹಂಕದ ಕೋಗಿಲು ಕ್ರಾಸ್ ಬಳಿಯ ಕೇಂದ್ರೀಯ ಅಪಾರ್ಟ್ʼಮೆಂಟ್ʼಗೆ ಭೇಟಿ ನೀಡಿ ಮಳೆಹಾನಿ ವೀಕ್ಷಣೆ ಮಾಡುವ ವೇಳೆ ನೈಜ ಸಂತ್ರಸ್ತರೇ ಅಹವಾಲು ಹೇಳಿಕೊಳ್ಳಲು ಮುಂದೆ ಬಾರದೇ ಇರುವುದು ನನ್ನನ್ನು ಚಕಿತಗೊಳಿಸಿತು ಎಂದು ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.
ಯಲಹಂಕದ ಕೋಗಿಲು ಕ್ರಾಸ್ ಬಳಿಯ ಕೇಂದ್ರೀಯ ಅಪಾರ್ಟ್ʼಮೆಂಟ್ʼಗೆ ಭೇಟಿ ನೀಡಿ ಮಳೆಹಾನಿ ವೀಕ್ಷಣೆ ಮಾಡುವ ವೇಳೆ ನೈಜ ಸಂತ್ರಸ್ತರೇ ಅಹವಾಲು ಹೇಳಿಕೊಳ್ಳಲು ಮುಂದೆ ಬಾರದೇ ಇರುವುದು ನನ್ನನ್ನು ಚಕಿತಗೊಳಿಸಿತು. 3/9#ರಿಪಬ್ಲಿಕ್_ಆಫ್_ಯಲಹಂಕ pic.twitter.com/IRHbsr0OB1
— H D Kumaraswamy (@hd_kumaraswamy) May 22, 2022
ಇದನ್ನೂ ಓದಿ: ಮದುವೆ ದಿಬ್ಬಣದ ಕ್ರೂಸರ್ ಅಪಘಾತದಲ್ಲಿ 9 ಜನ ಸಾವು ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ ಬೊಮ್ಮಾಯಿ
ಇದನ್ನೂ ಓದಿ: ನಳಿನ್ ಕುಮಾರ ಕಟೀಲ್ರನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರೆಂದರು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್
ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ
Published On - 2:35 pm, Sun, 22 May 22