ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ನಾಳೆ ಸುದ್ದಿಗೋಷ್ಠಿ ಕರೆದ ಇಂಧನ ಇಲಾಖೆ ಸಚಿವ ಕೆಜೆ ಜಾರ್ಜ್‌

ನಾಳೆ ಬೆಂಗಳೂರಿನ ಬೆಸ್ಕಾಂ ಮುಖ್ಯ ಕಚೇರಿಯಲ್ಲಿ ಬೆಳಗ್ಗೆ 11.45ಕ್ಕೆ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್‌ (KJ George) ಸುದ್ದಿಗೋಷ್ಠಿ ಕರೆದಿದ್ದಾರೆ.

ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ನಾಳೆ ಸುದ್ದಿಗೋಷ್ಠಿ ಕರೆದ ಇಂಧನ ಇಲಾಖೆ ಸಚಿವ ಕೆಜೆ ಜಾರ್ಜ್‌
ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್‌
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 06, 2023 | 10:43 PM

ಬೆಂಗಳೂರು: ಚುನಾವಣೆ ಪೂರ್ವ ಘೋಷಣೆ ಮಾಡಿದ್ದ 5 ಗ್ಯಾರೆಂಟಿಗಳನ್ನು ಕಾಂಗ್ರೆಸ್ ಅಧಿಕಾರಿಕ್ಕೆ ಬಂದ ಮೇಲೆ ಜಾರಿ ಮಾಡಿದೆ. ಆದರೆ ಇದಕ್ಕೆ ಷರತ್ತುಗಳನ್ನು ವಿಧಿಸಿದ್ದು ಜನರ ಆಕ್ರೋಷಕ್ಕೆ ಕಾರಣವಾಗಿದೆ. ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಜಾರಿ ವಿಚಾರವಾಗಿ ಜನರಲ್ಲಿ ಸಾಕಷ್ಟು ಗೊಂದಲ ಮೂಡಿದೆ. ಈ ಹಿನ್ನೆಲೆ ನಾಳೆ ಬೆಂಗಳೂರಿನ ಬೆಸ್ಕಾಂ ಮುಖ್ಯ ಕಚೇರಿಯಲ್ಲಿ ಬೆಳಗ್ಗೆ 11.45ಕ್ಕೆ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್‌ (KJ George) ಸುದ್ದಿಗೋಷ್ಠಿ ಕರೆದಿದ್ದಾರೆ. ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲಿದ್ದಾರೆ.

ಒಂದು ಆರ್​ಆರ್ ಸಂಖ್ಯೆಗೆ ಮಾತ್ರ ಉಚಿತ ವಿದ್ಯುತ್

ಒಂದು ಆರ್​ಆರ್ ಸಂಖ್ಯೆಗೆ ಮಾತ್ರ ಉಚಿತ ವಿದ್ಯುತ್​ ಎಂದು ಹೇಳುವ ಮೂಲಕ ಸಚಿವ ಕೆಜೆ ಜಾರ್ಜ್ ಅವರು ಸರ್ಕಾರದ ನಿಲುವನ್ನು ಪುನರುಚ್ಚರಿಸಿದ್ದರು. ನಿನ್ನೆ ಬೆಂಗಳೂರಿನಲ್ಲಿ ನಡೆದ ಬೆಸ್ಕಾಂ ಅಧಿಕಾರಿಗಳೊಂದಿಗಿನ ಸಭೆಯ ನಂತರ ಮಾತನಾಡಿದ ಅವರು, ಬಾಡಿಗೆದಾರರು ಮತ್ತು ಮಾಲೀಕರು ಅಂತ ನಾವು ವ್ಯತ್ಯಾಸ ಮಾಡುತ್ತಿಲ್ಲ. ಸ್ಥಾವರ ಎಂಬುದರ ಅರ್ಥ ಒಂದು ಆರ್​ಆರ್ ನಂಬರ್. ಯಾರು ಎಷ್ಟೇ ಆರ್​ಆರ್ ನಂಬರ್ ಹೊಂದಿರಲಿ, ಆದರೆ ಒಂದು ಆರ್​ಆರ್ ನಂಬರ್​​ಗೆ ಮಾತ್ರ ಯೋಜನೆ ಅಡಿಯಲ್ಲಿ ಬರುತ್ತದೆ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: Gruha Jyothi Scheme: ಬಾಡಿಗೆದಾರರಿಗೂ ಸಿಗುತ್ತಾ ಉಚಿತ ವಿದ್ಯುತ್​​, ದಾಖಲೆಗಳು ಅಗತ್ಯ – ಕೆಜೆ ಜಾರ್ಜ್ ಸ್ಪಷ್ಟನೆ

ಅರ್ಜಿ ಸಲ್ಲಿಸಲ್ಲು ಬೇಕಾದ ದಾಖಲೆಗಳೇನು?

ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಬಂಧಿಸಿದ ದಾಖಲೆ ಇರಬೇಕು. ಎಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದಾರೆಂಬ ದಾಖಲೆಬೇಕು. ವಿದ್ಯುತ್​ ಬಿಲ್, ಮನೆ ಬಾಡಿಗೆ ಕರಾರುಪತ್ರ ಇರಬೇಕು. ಮನೆ ಮಾಲೀಕ ಕಡ್ಡಾಯವಾಗಿ ಆಸ್ತಿ ತೆರಿಗೆ ಪಾವತಿಸಿರಬೇಕು. ಎಷ್ಟು ಬಾಡಿಗೆ ಮನೆಗಳಿವೆ ಎಂದು ಮಾಲೀಕ ಘೋಷಿಸಿರುವ ದಾಖಲೆಗಳಿರಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವೀಕರಿಸುತ್ತೇವೆ: ಸೇವಾ ಸಿಂಧು ಆ್ಯಪ್ ನಿರ್ದೇಶಕ ಸ್ಪಷ್ಟನೆ

ಬಾಡಿಗೆದಾರರಿಗೆ ಉಚಿತ ವಿದ್ಯುತ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಬಾಡಿಗೆದಾರರು ಕಳ್ಳಾಟ ಮಾಡಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.