ಪ್ರಜ್ವಲ್​ ರೇವಣ್ಣ ಸ್ಥಾನ ಅನರ್ಹ ಬೆನ್ನಲ್ಲೇ ಹಾಸನ ಜಿಲ್ಲಾ ರಾಜಕಾರಣದಲ್ಲಿ ಗರಿಗೆದರಿದ ರಾಜಕೀಯ

ಲೋಕಸಭಾ ಸದಸ್ಯತ್ವ ಅವಧಿ ಮುಗಿಯಲು ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಪ್ರಜ್ವಲ್ ರೇವಣ್ಣ ಅವರ ಹಾಸನ ಜೆಡಿಎಸ್​ ಎಂಪಿ ಸ್ಥಾನವನ್ನು ಕೋರ್ಟ್ ಅಸಿಂಧುಗೊಳಿಸಿದೆ. ಇದರಿಂದ ಜೆಡಿಎಸ್​ನಲ್ಲಿ ಕಂಪನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಹಾಸನ ಜಿಲ್ಲಾ ಜೆಡಿಎಸ್​ನಲ್ಲಿ ರಾಜಕೀಯ ಗರಿಗೆದರಿವೆ.

ಪ್ರಜ್ವಲ್​ ರೇವಣ್ಣ ಸ್ಥಾನ ಅನರ್ಹ ಬೆನ್ನಲ್ಲೇ ಹಾಸನ ಜಿಲ್ಲಾ ರಾಜಕಾರಣದಲ್ಲಿ ಗರಿಗೆದರಿದ ರಾಜಕೀಯ
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on: Sep 04, 2023 | 11:10 AM

ಹಾಸನ, (ಸೆಪ್ಟೆಂಬರ್ 04): ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಹಾಸನ (Hassan) ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಪ್ರಜ್ವಲ್ ರೇವಣ್ಣ(Prajwal Revanna) ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಅಸಿಂಧುಗೊಳಿಸಿದೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಸೇರಿದಂತೆ ಹಲವು ಕಾರಣಗಳಿಂದಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಇದರಿಂದ ಹಾಸನ ಜಿಲ್ಲಾ ಜೆಡಿಎಸ್​ನಲ್ಲಿ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು…ಪ್ರಜ್ವಲ್ ಅನರ್ಹ ಬೆನ್ನಲ್ಲೇ ದೇವೇಗೌಡರು ಹಾಸನದಿಂದ ಸ್ವರ್ಧೆ ವಿಚಾರ ಮುನ್ನಲೆಗೆ ಬಂದಿದೆ.

2024ರ ಲೋಕಸಭಾ ಚುನಾವಣೆಗೆ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡುವಂತೆ ಆಗ್ರಹಗಳು ಕೇಳಿರುತ್ತಿವೆ. ದೇವೇಗೌಡ ಅವರದ್ದು ಇದು ಕೊನೆ ಚುನಾವಣೆಯಾಗಿದೆ. ಅದ್ದರಿಂದ ಹಾಸನದಿಂದ ಗೆಲ್ಲಿಸಿ ದೇವೇಗೌಡರನ್ನು ಲೋಕಸಭೆಗೆ ಕಳಿಸಲು ಮುಖಂಡರು, ಕಾರ್ಯಕರ್ತರು ನಿರ್ಧಾರಿಸಿದ್ದಾರೆ. ಕಾರ್ಯಕರ್ತರು ಹಾಗೂ ಮುಖಂಡರು ಸೇರಿಕೊಂಡು ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ದೇವೇಗೌಡ ಅವರಿಗೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಫೋಟ: ನಾಯಕತ್ವ, ಉಸ್ತುವಾರಿ ಬದಲಾವಣೆಗೆ ಪಟ್ಟು

ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಅವರು ರಾಜ್ಯ ರಾಜಕೀಯಕ್ಕೆ ಬರುವ ಒಲವು ತೋರಿದ್ದಾರೆ. ಅದರ ಜೊತೆಗೆ ಸದ್ಯ ಅವರು ಅನರ್ಹ ಕೂಡ ಆಗಿದ್ದಾರೆ. ಪ್ರಜ್ವಲ್ ಅನರ್ಹ ವಿಚಾರವನ್ನೇ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತವೆ . ಇದರಿಂದ ಪ್ರಜ್ವಲ್ ಸ್ಪರ್ಧೆ ಮಾಡಿದರೆ ಹಾಸನದಲ್ಲಿ ಜೆಡಿಎಸ್​​ಗೆ ಹಿನ್ನಡೆ ಆಗುವ ಸಾಧ್ಯತೆಗಳಿವೆ. ಹೀಗಾಗಿ ಗೌಡರು ಹಾಸನದಿಂದ ಸ್ಪರ್ಧೆ ಮಾಡಿದರೆ ಒಳ್ಳೆಯದು ಎನ್ನುವುದು ಜಿಲ್ಲೆಯ ಮುಖಂಡರು ಕಾರ್ಯಕರ್ತ ಅಭಿಪ್ರಾಯವಾಗಿದೆ.

ಮತ್ತೆ ಗೊಂದಲಕ್ಕೀಡಾಗುತ್ತಾ ಹಾಸನ ಟಿಕೆಟ್

ವಿಧಾನಸಭಾ ಚುನಾವಣೆ ಹಾಸನ ಟಿಕೆಟ್​ ಯಾರಿಗೆ ನೀಡಬೇಕೆಂದು ಜೆಡಿಎಸ್​ನಲ್ಲಿ ದೊಡ್ಡ ಹೈಡ್ರಾಮವೇ ನಡೆದಿತ್ತು. ಒಂದು ಕಡೆ ಸ್ವರೂಪ ಅವರನ್ನು ನಿಲ್ಲಿಸಲು ಹೆಚ್​ಡಿ ಕುಮಾರಸ್ವಾಮಿ ಮುಂದಾಗಿದ್ದರೆ, ಮತ್ತೊಂದೆಡೆ ನಮ್ಮ ಕುಟುಂಬಕ್ಕೆ ಟಿಕೆಟ್​ ನೀಡಬೇಕೆಂದು ಹೆಚ್​ಡಿ ರೇವಣ್ಣ ಫ್ಯಾಮಿಲ್​ ಪಟ್ಟು ಹಿಡಿದಿತ್ತು. ಹೀಗಾಗಿ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಟಿಕೆಟ್​ ಗೌಡರ ಕುಟುಂಬದಲ್ಲೇ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಅಂತಿಮವಾಗಿ ದೇವೇಗೌಡ್ರು, ರೇವಣ್ಣ ಅವರ ಕುಟುಂಬವನ್ನು ಮನವೊಲಿಸಿ ಸ್ವರೂಪ್​ಗೆ ಮಣೆ ಹಾಕಿದ್ದರು. ಇದೀಗ ಲೋಕಸಭಾ ಚುನಾವಣೆ ಸಮೀಪಿಸತ್ತಿದ್ದು, ಹಾಸನ ಟಿಕೆಟ್​ ಬಗ್ಗೆ ಈಗಿಂದಲೇ ಚರ್ಚೆ ಶುರುವಾಗಿದೆ. ಒಂದು ವೇಳೆ ಪ್ರಜ್ವಲ್​ ರೇವಣ್ಣಗೆ ಸುಪ್ರಿಂಕೋರ್ಟ್​ನಲ್ಲಿ ಹಿನ್ನಡೆಯಾದರೆ, ದೇವೇಗೌಡೆರ ಅವರು ಹಾಸನದಿಂದ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಪ್ರಜ್ವಲ್​ ರೇವಣ್ಣ ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಹಾಸನ ಜಿಲ್ಲಾ ಜೆಡಿಎಸ್​ನಲ್ಲಿ ರಾಜಕೀಯ ಬಿರುಸುಗೊಂಡಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ