ರಾಕೇಶ್ ಸಾವಿಗೆ ನೀವು ಕಾರಣ ಎಂದರೆ ನಿಮ್ಮ ಮನಸ್ಸಿಗೆ ಹೇಗಾಗಬಹುದು: ಸಿಎಂಗೆ ಹೆಚ್​​ಡಿಕೆ ಪ್ರಶ್ನೆ, ಸಿದ್ದರಾಮಯ್ಯ ತಿರುಗೇಟು

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಪ್ರಕರಣ ರಾಜಕೀಯ ಕೆಸೆರೆಚಾಟಕ್ಕೆ ಕಾರಣವಾಗಿದೆ. ಇನ್ನು ಪ್ರಕರಣದ ಆರೋಪಿ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಕಳುಹಿಸಿದ್ದೇ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ರಾಕೇಶ್ ಸಾವಿಗೆ ನೀವು ಕಾರಣ ಎಂದರೆ ನಿಮ್ಮ ಮನಸ್ಸಿಗೆ ಹೇಗಾಗಬಹುದು: ಸಿಎಂಗೆ ಹೆಚ್​​ಡಿಕೆ ಪ್ರಶ್ನೆ, ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ, ಹೆಚ್​ಡಿ ಕುಮಾರಸ್ವಾಮಿ
Follow us
Sunil MH
| Updated By: ವಿವೇಕ ಬಿರಾದಾರ

Updated on: May 25, 2024 | 1:19 PM

ಬೆಂಗಳೂರು, ಮೇ 25: ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರನ್ನು ವಿದೇಶಕ್ಕೆ ಕಳುಹಿಸಿದ್ದೇ ಅವರ ತಾತ, ಈಗ ಪತ್ರ ಬರೆದು ಏನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಡಿದ್ದರು. ಇದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumarswamy) ಪ್ರತಿಕ್ರಿಯಿಸಿ “ಇವರ ಮಗ ವಿದೇಶಕ್ಕೆ ಹೋದಾಗ ದುರ್ಘಟನೆ ನಡೆಯಿತು ಅಲ್ವಾ? ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ (Rakesh)​ ಯಾವ ಕಾರ್ಯಕ್ರಮಕ್ಕೆ ವಿದೇಶಕ್ಕೆ ಹೋಗಿದ್ದರು. ಆಗ ವಿದೇಶಕ್ಕೆ ಹೋಗುವಾಗ ಅನುಮತಿ ಪಡೆದಿದ್ದರಾ? ಇವರ ಮಗನ ಜೊತೆ ಯಾಱರು ಹೋಗಿದ್ದರು, ಎಷ್ಟು ಜನ ಇದ್ದರು. ಅಲ್ಲಿ ನಡೆದ ಘಟನೆ ಬಗ್ಗೆ ಯಾಕೆ ತನಿಖೆ ಮಾಡಲಿಲ್ಲ. ಬೆಳೆದ ಮಕ್ಕಳು ಪ್ರತಿ ವಿಚಾರವನ್ನ ತಂದೆ ತಾಯಿಗೆ ಕೇಳಿ ಮಾಡ್ತಾರಾ? ಎಂದು ಪ್ರಶ್ನೆ ಮಾಡಿದರು.

“ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಅವರನ್ನು Tomorrow Land ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ.. ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ.” ಹೆಚ್​​ಡಿ ಕುಮಾರಸ್ವಾಮಿ ಟ್ವೀಟ್​​

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಇವರಿಗೆ ಸತ್ಯಾಂಶ, ವಾಸ್ತವಾಂಶ ಹೊರತರಬೇಕೆಂದು ಅನ್ನಿಸುತ್ತಿಲ್ಲ. ಸಿಎಂ ಸೇರಿ ಯಾರಿಗೂ ಸತ್ಯ ಹೊರತರಬೇಕು ಅಂತ ಅನಿಸುತ್ತಿಲ್ಲ. ದೇವರಾಜೇಗೌಡರನ್ನೇ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡುತ್ತಾರೆ. ಹಾಗಾಗಿ ನಾನು ಸಿಎಂ ಸಿದ್ದರಾಮಯ್ಯಗೆ ಒಂದು ಪ್ರಶ್ನೆ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಜ್ವಲ್​​ನನ್ನು ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು ಎಂದಿದ್ದ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ತಿರುಗೇಟು

ಪೆನ್​ಡ್ರೈವ್ ಪ್ರಕರಣದಲ್ಲಿ ನಮ್ಮ ಕುಟುಂಬವನ್ನ ಸಂಪೂರ್ಣವಾಗಿ ಮುಗಿಸುವ ಹುನ್ನಾರ ನಡೆದಿದೆ. ಅದನ್ನ ಹೊರತುಪಡಿಸಿ ಬೇರೆ ಏನು ಮಾಡುತ್ತಿದ್ದೀರಾ? ಪೆನ್​ಡ್ರೈವ್​​ ಅನ್ನು ಮಾರುಕಟ್ಟೆಗೆ ಬಿಟ್ಟವರನ್ನು ಬಂಧಿಸಿದ್ದಾರಾ? ವಿಚಾರಣೆ ನಡೆಯುವಾಗ ಯಾರದ್ದೇ ತಪ್ಪು ಇದ್ದರು ಅವರಿಗೆ ಶಿಕ್ಷೆಯಾಗಬೇಕು ಎಂದು ನಾನು ಗೃಹ ಸಚಿವರ ಬಳಿ, ಮುಖ್ಯಮಂತ್ರಿಗಳಿಗೆ ಮೊದಲ ದಿನದಿಂದ ಕೇಳುತ್ತಿದ್ದೇನೆ ಎಂದು ಹೇಳಿದರು.

ರಾಜತಾಂತ್ರಿಕ ಪಾಸ್​ಪೋರ್ಟ್ ಬಗ್ಗೆ ಹೇಳುತ್ತೀರಲ್ಲ, ಅದರ ಕಾನೂನು ಗೊತ್ತಾ ನಿಮಗೆ? ಮಾಜಿ ಪ್ರಧಾನಿ ಹೆಚ್​ಡಿ ದೇವೆಗೌಡರ ಮೂಲಕ ಪತ್ರ ಬರೆದು ಕರೆಸುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಮುಖ್ಯಮಂತ್ರಿಗಳು ದೇವೆಗೌಡರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಜೊತೆ ಕೆಲಸ ಮಾಡಿದ್ದೀರಿ, ಅವರು ಯಾವ ಮಟ್ಟದಲ್ಲಿ ರಾಜಕಾರಣ ಮಾಡಿದ್ದಾರೆ ಅಂತ ಅನುಭವ ನಿಮಗೆ ಗೊತ್ತಿಲ್ಲವಾ? ನಿಮಗೆ ಮಾನ ಮಾರ್ಯಾದೆ ಇದೆಯಾ? ನಿಮ್ಮ ಸಿಡಿ ಶಿವಕುಮಾರ್ ಅವರು ಶಿವರಾಮೇಗೌಡ ಜೊತೆ ಯಾಕೆ ದೂರವಾಣಿಯಲ್ಲಿ ಮಾತನಾಡಿದರು. ಅವರು Broker ಕೆಲಸ, ತಲೆ ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ಗೃಹ ಸಚಿವರು ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು.

ಪ್ರಜ್ವಲ್​ ರೇಪ್ ಮಾಡಿ ಓಡಿ ಹೋಗಿರುವುದು: ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ. ಆ ವಿಚಾರ ಯಾವುದಕ್ಕೋ ಲಿಂಕ್ ಮಾಡುವುದು ಮೂರ್ಖತನ. ಹೆಚ್​ಡಿ ಕುಮಾರಸ್ವಾಮಿ ಅಣ್ಣನ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಇದಕ್ಕೂ 2016ರಲ್ಲಿ ಮೃತಪಟ್ಟ ರಾಕೇಶ್‌ ವಿಚಾರಕ್ಕೂ ಏನು ಸಂಬಂಧ? ರಾಜಕಾರಣಕ್ಕಾಗಿ ಈ ವಿಚಾರ ಪ್ರಸಾಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ
ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ
ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ಜೈಪುರ ಸಾಹಿತ್ಯ ಉತ್ಸವ; ಕಲ್ ಪೆನ್ ಜೊತೆ ಟಿವಿ9 ಸಿಇಒ ಬರುಣ್ ದಾಸ್ ಸಂವಾದ
ಜೈಪುರ ಸಾಹಿತ್ಯ ಉತ್ಸವ; ಕಲ್ ಪೆನ್ ಜೊತೆ ಟಿವಿ9 ಸಿಇಒ ಬರುಣ್ ದಾಸ್ ಸಂವಾದ
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!