ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಪೆನ್ ಡ್ರೈವ್ ಮೂಲ ವ್ಯಕ್ತಿ ಕಾರ್ತಿಕ್. ಕಾರ್ತಿಕ್ ಹಾಸನದ ಕಾಂಗ್ರೆಸ್ ಅಭ್ಯರ್ಥಿ ಇಟ್ಟುಕೊಂಡು ಡಿಕೆ ಸುರೇಶ್‌ ಬಳಿಗೆ ಮೊದಲು ಹೋಗಿದ್ದನು. ನಂತರ ವಿಡಿಯೋಗಳನ್ನು ಸಿಡಿ ಶಿವಕುಮಾರ್ ಕಾಪಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:May 22, 2024 | 11:29 AM

ಮೈಸೂರು, ಮೇ 22: ನಾನು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪರವಾಗಿ ಇಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ. ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್ (DK Shivakumar) ಪೆನ್​ಡ್ರೈವ್ ವಿತರಣೆ ಹಿಂದೆ ಇದ್ದಾರೆ. ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನವಾಗಿದೆ. ಪೊಲೀಸರ ರಕ್ಷಣೆಯಲ್ಲಿ ಎಂಟು ಜನ ಸೇರಿದಂತೆ ಕಾರ್ತಿಕ್ ಸಹ ಇದ್ದಾನೆ? ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್ ಬಂಧನ ತೋರಿಸಿಲ್ಲ? ನ್ಯಾಯಾಲಯಕ್ಕೆ ಹಾಜರು ಪಡಿಸಿಲ್ಲ ಹೇಳಿ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumarswamy) ಪ್ರಶ್ನಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧಿಗಳಿಗೆ ತೊಂದರೆ ಕೊಡುವುದು. ದ್ವೇಷದ ರಾಜಕಾರಣ ಮಾಡುವುದಷ್ಟೆ ಸರಕಾರದ ಕೆಲಸ ಆಗಿದೆ. ಸರ್ಕಾರದ ಪ್ರಾಯೋಜಕತ್ವದಲ್ಲಿ ಮೇ 30 ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆಗೆ ಕರೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿದ್ದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸುತ್ತಿದ್ದೆ ಎಂದು ವಾಗ್ದಾಳಿ ಮಾಡಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರೇ, ಬಹಳಷ್ಟು ಭಯೋತ್ಪಾದಕರು ಅವರ ಸುತ್ತಮುತ್ತ ಇದ್ದಾರೆ. ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಅಂತಾ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡಲಿ? ವಿಡಿಯೋ ಮಾಡಿರುವುದು ಒಂದು ಭಾಗ. ವಿಡಿಯೋವನ್ನು ಚುನಾವಣೆಗಾಗಿ ವಿತರಿಸಿದ್ದು ಅಪರಾಧ ಅಲ್ವಾ? ವಿಡಿಯೋ ಮಾಡಿದ್ದಕ್ಕಿಂತ ಅದನ್ನು ಹಂಚಿದ್ದು ಹೆಚ್ಚು ಅಪರಾಧ ಅಲ್ವಾ? ಎಂದು ಪ್ರಶ್ನಿಸಿದರು.

ಮಹಾನುಭಾವರು 1980 ರಲ್ಲೇ ಸಿಡಿ ಫ್ಯಾಕ್ಟರಿ ಓಪನ್ ಮಾಡಿದ್ದರು. ಅಧಿಕಾರ ಯಾರ ಅಪ್ಪನ ಮನೆ ಆಸ್ತಿಯೂ ಅಲ್ಲ. ರಾಜಕೀಯದಲ್ಲಿ ಏಳು ಬೀಳು ಅದು ಭಗವಂತನ ಇಚ್ಚೆ. ಇದರಲ್ಲಿ ಅಸೂಯೆ ಯಾಕೆ?ಪ್ರಧಾನಿ ಸ್ಥಾನವನ್ನೇ ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮ್ಮದು. ಎಲ್ಲ ಅಧಿಕಾರವನ್ನು ನಾವು ನೋಡಿಯಾಗಿದೆ. ನಮಗೆ ಅಧಿಕಾರ ಬೇಡ ಅಂದರೂ ಬಂದಿದೆ. ನಾವು ಅಧಿಕಾರ ಹುಡುಕಿಕೊಂಡು ಹೋಗಿಲ್ಲ. ನಿಮಗೆ ಇದು ಗೊತ್ತಿರಲಿ ಎಂದರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಹೆಚ್ ಡಿ ದೇವೇಗೌಡರ ನಿಲುವು ಅಭಿನಂದಿಸಿದ ಸದಾನಂದಗೌಡ

ಪೆನ್ ಡ್ರೈವ್ ಮೂಲ ವ್ಯಕ್ತಿ ಕಾರ್ತಿಕ್. ಕಾರ್ತಿಕ್ ಹಾಸನದ ಕಾಂಗ್ರೆಸ್ ಅಭ್ಯರ್ಥಿ ಇಟ್ಟುಕೊಂಡು ಡಿಕೆ ಸುರೇಶ್‌ ಬಳಿಗೆ ಮೊದಲು ಹೋಗಿದ್ದನು. ನಂತರ ವಿಡಿಯೋಗಳನ್ನು ಸಿಡಿ ಶಿವಕುಮಾರ್ ಕಾಪಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ನನ್ನ ಬಳಿ ಇರುವ ಪೆನ್​ಡ್ರೈವ್ ನಿಮ್ಮ ಸರ್ಕಾರದ ವರ್ಗಾವಣೆಯ ಭ್ರಷ್ಟಾಚಾರದ್ದು. ಅದನ್ನು ನಾನು ಈಗ ಬಿಟ್ಟರೆ ಅದು ನನ್ನದೇ ಸೃಷ್ಟಿ ಅಂತ ನೀವು ಹೇಳುತ್ತೀರಿ. ಎಸ್​ಐಟಿಗೆ ಇದುವರೆಗೂ ಕೊಟ್ಟ ಯಾವ ಪ್ರಕರಣ ತಾರ್ಕಿಕ ಅಂತ್ಯ ಕಂಡಿದೆ ಹೇಳಿ? ನನ್ನ ಅವಧಿಯಲ್ಲಿ ಯಾವ ಪ್ರಕರಣವನ್ನು ಎಸ್​ಐಟಿಗೆ ಕೊಟ್ಟಿರಲಿಲ್ಲ. ನಾನು ಪ್ರಜ್ವಲ್ ಪರ ಇಲ್ಲ, ಆರೋಪ ಸಾಬೀತಾದ್ರೆ ಶಿಕ್ಷೆ ಕೊಡಿ ಎಂದರು.

ಮೈತ್ರಿಗೂ ಪೆನ್​ಡ್ರೈಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರಲಿಲ್ಲ ಇನ್ನೂ ಈಗ ಇರುತ್ತಾನಾ?. ಸತ್ಯ. ಪ್ರಜ್ವಲ್ ಹೆಚ್.ಡಿ. ರೇವಣ್ಣನ ಸಂಪರ್ಕದಲ್ಲೂ ಇಲ್ಲ. ಪೆನ್​ಡ್ರೈವ್ ಪ್ರಕರಣದಿಂದ ದೇವೇಗೌಡರ ಕುಟುಂಬಕ್ಕೆ ಸ್ವಲ್ಪ ಡ್ಯಾಮೆಜ್ ಆಗಿರುವುದು. ನಾನು ಈಗ ಏನಾದರೂ ವಿದೇಶಕ್ಕೆ ಹೋದರೆ ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ. ಯಾವ ಕರ್ಮ ಗ್ರಹಚಾರ ನಮಗೆ. ಪ್ರಜ್ವಲ್ ವಿದೇಶಕ್ಕೆ ಹೋಗುವುದು ಅವತ್ತೆ ಗೊತ್ತಾಗಿದ್ದರೆ ನಾನು ಅವತ್ತೆ ಅವನನ್ನು ತಡೆಯುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು ಅದಕ್ಕೆ ಭಾರತಕ್ಕೆ ಬರುತ್ತಿಲ್ಲ. ಪ್ರಜ್ವಲ್, ವಕೀಲರ ಸಲಹೆ ಬೇಡ ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಸ್ಸು ಬಾ. ತಪ್ಪು ಮಾಡಿಲ್ಲ ಅನ್ನುವುದಾರೆ ಎದುರಿಸು. ತಪ್ಪು ಮಾಡಿದ್ದರೆ ಈ ನಾಡಿನ ಕಾನೂನು ಪ್ರಕಾರ ಶಿಕ್ಷೆ ಅನುಭವಿಸು ಎಂದು ಪ್ರಜ್ವಲ್​ ರೇವಣ್ಣಗೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Wed, 22 May 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ