ಹಾಸನ: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ (Prajwal Revanna) ಅನರ್ಹವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಪ್ರತಿ ನೋಡದೆ ಮಾತನಾಡಲು ಆಗುವುದಿಲ್ಲ. ಮಾಜಿ ಪ್ರಧಾನಿಯಾಗಿ ಆದೇಶ ನೋಡದೆ ಮಾತನಾಡೋದು ಸರಿಯಲ್ಲ. ಸ್ವಾಭಾವಿಕವಾಗಿ ಸುಪ್ರೀಂಕೋರ್ಟ್ನ ಮೊರೆ ಹೋಗಬೇಕಾಗುತ್ತದೆ. ಈ ಬಗ್ಗೆ ಚರ್ಚೆ ಮಾಡುವುದಕ್ಕೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಹೋಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ಹೇಳಿದರು.
ಪ್ರಜ್ವಲ್ ರೇವಣ್ಣ ಕಾನೂನು ಹೋರಾಟ ಮುಂದುವರಿಸಲಿದ್ದಾರೆ. ಇದೇನು ತಲೆಕೆಡಿಸಿಕೊಳ್ಳಬೇಕಾದ ವಿಷಯವಲ್ಲ. ಹೈಕೋರ್ಟ್ ತೀರ್ಪನ್ನು ನಾವೆಲ್ಲರೂ ಗೌರವಿಸಬೇಕು. ‘ಸುಪ್ರೀಂ’ನಲ್ಲಿ ಪ್ರಜ್ವಲ್ ರೇವಣ್ಣ ಪರ ತೀರ್ಪು ಬರುವ ವಿಶ್ವಾಸವಿದೆ. ಪ್ರಜ್ವಲ್ ರೇವಣ್ಣ ಸಂಸದರಾಗಿಯೇ ಉಳಿದುಕೊಳ್ಳುತ್ತಾರೆ. ಸುಪ್ರೀಂಕೋರ್ಟ್‌ನಲ್ಲಿ ಸ್ಟೇ ತೆಗೆದುಕೊಳ್ಳಬೇಕು. ಮುಂದಿನ ಕಾನೂನು ಹೋರಾಟ ಏನಿದೆ ಎಂದು ತಿಳಿದು ಪ್ರಕ್ರಿಯೆ ಮಾಡುತ್ತೇವೆ ಎಂದು ಎಂಎಲ್ಸಿ ಪ್ರಜ್ವಲ್ ರೇವಣ್ಣ ಹೇಳಿದರು.
ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದೇನು ತಲೆಕೆಡಿಸಿಕೊಳ್ಳಬೇಕಾದ ವಿಷಯವಲ್ಲ. ಅವರೇನಾದರು ಅಕ್ರಮ, ಭ್ರಷ್ಟಾಚಾರ ಮಾಡಿದ್ದಾರಾ ? ಏನು ಇಲ್ಲಾ. ಏನೋ ಅಫಿಡೆವಿಟ್‌ನಲ್ಲಿ ಒಂದು ಸಣ್ಣ ಪ್ರಾಬ್ಲಂ ಇರೋದನ್ನು ಸಲ್ಲಿಸಿದ್ದಾರೆ. ಅಂತಹ ಸಾವಿರಾರು ಅರ್ಜಿಗಳು ಬರುತ್ತವೆ ಎಂದರು.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅನರ್ಹ; ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದ ಜೆಡಿಎಸ್ ಶಾಸಕ ಎ ಮಂಜು
ತೀರ್ಪು ಬಂದ ನಂತರ ಎ.ಮಂಜು ಜೊತೆ ಚರ್ಚೆ ಮಾಡಿದ್ದಾರಾ ಎಂಬ ವಿಚಾರವಾಗಿ ಮಾತನಾಡಿದ ಅವರು ತೀರ್ಪಿನ ಪೂರ್ತಿ ಕಾಫಿ ಮಧ್ಯಾಹ್ನ ಅಪ್‌ಲೋಡ್ ಆಗುತ್ತೆ. ಈ ವಿಷಯವಾಗಿ ಯಾರ ಜೊತೆಗೂ ಮಾತನಾಡಿಲ್ಲ. ಅವರಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಭಾವಿಸುತ್ತೇನೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಅವರದ್ದು ಕೇಸ್ ಏನಿದೆ, ಕಾನೂನು ಏನು ಹೇಳುತ್ತೆ ಅಂತ ನೋಡುತ್ತೇವೆ. ತೀರ್ಪಿನ ಪೂರ್ತಿ ಕಾಫಿ ನೋಡಿ ಹೇಳುತ್ತೇವೆ. ಆರ್ಡರ್ ಕಾಫಿ ಬರಲಿ, ಅದೇನಿದೆ ಗೊತ್ತಿಲ್ಲ ನನಗೆ. ನನಗೆ ಯಾವ ಸೂಚನೆಯೂ ಬಂದಿಲ್ಲ. ಕಾನೂನಿಗೆ ನಾವೆಲ್ಲ ತಲೆ ಬಾಗಬೇಕು, ಆ ರೀತಿ ನಾವು ಇದ್ದೇವೆ. ಮುಂದೆ ಏನು ಮಾಡಬೇಕು ವಕೀಲರನ್ನು ಕೇಳಿ ಮಾಡುತ್ತೇವೆ ಎಂದು ಮಾವಿನಕೆರೆ ಗ್ರಾಮದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ