ಕಾಂಗ್ರೆಸ್ ಅಂಬೇಡ್ಕರ್​​ರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದು, ದಲಿತರನ್ನು ಕತ್ತಲಲ್ಲಿ ಇಟ್ಟಿದೆ: ಜೋಶಿ

ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕಡೆಗಣಿಸಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ. ಅವರನ್ನು ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲಾಗಿತ್ತು. ಹಾಗೂ ಭಾರತ ರತ್ನ ಪ್ರಶಸ್ತಿ ನೀಡದಿರುವುದನ್ನು ಜೋಶಿ ಖಂಡಿಸಿದ್ದಾರೆ. ಕರ್ನಾಟಕ ಸರ್ಕಾರದ ಭ್ರಷ್ಟಾಚಾರ, ಅನೇಕ ಹಗರಣಗಳು ಹಾಗೂ ಸಿಟಿ ರವಿಗೆ ಬೆದರಿಕೆ ಪತ್ರದ ವಿಷಯವನ್ನು ಜೋಶಿ ಟೀಕಿಸಿದ್ದಾರೆ. ನಕ್ಸಲ್ ಶರಣಾಗತಿ ವಿಚಾರದಲ್ಲಿಯೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಂಬೇಡ್ಕರ್​​ರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದು, ದಲಿತರನ್ನು ಕತ್ತಲಲ್ಲಿ ಇಟ್ಟಿದೆ: ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Jan 11, 2025 | 1:29 PM

ಹುಬ್ಬಳ್ಳಿ, ಜನವರಿ 11: ಕಾಂಗ್ರೆಸ್ (Congress) ಪಕ್ಷ ಡಾ. ಬಿಆರ್​ ಅಂಬೇಡ್ಕರ್ (BR Ambedkar) ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ. ಜವಾಹರ್​ ಲಾಲ್​ ನೆಹರುರಿಂದ ರಾಜೀವ್ ಗಾಂಧಿವರೆಗೂ ಬಿಆರ್​ ಅಂಬೇಡ್ಕರ್​ ಅವರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಕೇಂದ್ರಲ್ಲಿ ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ ಬಿಆರ್​ ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಡಲಿಲ್ಲ. ಬಿಆರ್​ ಅಂಬೇಡ್ಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಹರು, “ರಾಜೀನಾಮೆಯಿಂದ ಏನೂ ನಷ್ಟವಿಲ್ಲ” ಎಂದಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಹ್ಲಾದ್​ ಜೋಶಿ, ಕಾಂಗ್ರೆಸ್​ ನಾಯಕರು ಬಿಆರ್​ ಅಂಬೇಡ್ಕರ್​ ಅವರನ್ನು ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದರು. ಕಾಂಗ್ರೆಸ್ ಸುಡುವ ಪಕ್ಷ, ಅದರಲ್ಲಿ ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು. ಕೆಲವು ದಲಿತ ಮುಖಂಡರಿಗೆ ಕಾಂಗ್ರೆಸ್ ಭ್ರಮೆ ಹುಟ್ಟಿಸಿದೆ. ದಲಿತರು ಕಾಂಗ್ರೆಸ್​ನಿಂದ ದೂರ ಇದ್ದಷ್ಟು ಒಳ್ಳೆಯದು. ಕಾಂಗ್ರೆಸ್​ನವರು ಮೀಸಲಾತಿ ವಿರೋಧ ಮಾಡಿದ್ದರು. ಕಾಂಗ್ರೆಸ್ ಸದಾ ದಲಿತ ಸಮುದಾಯವನ್ನು ಕತ್ತಲಲ್ಲಿ ಇಟ್ಟಿದೆ. ದಲಿತರು ಜಾಗೃತರಾಗಿರಬೇಕು ಎಂದು ಹೇಳಿದರು.

ಕರ್ನಾಟಕ ಸರ್ಕಾರದಲ್ಲಿ ಅನೇಕ ಭ್ರಷ್ಟಾಚಾರ, ಹಗರಣಗಳು ನಡೆಯುತ್ತಿವೆ. ಸರ್ಕಾರ ಆಡಳಿತ ಯಂತ್ರದ ನಿಯಂತ್ರಣ ಕಳೆದುಕೊಂಡಿದೆ. ಸಾರಿಗೆ ಇಲಾಖೆಯ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ತಲುಪಿವೆ. ಕಾಂಗ್ರೆಸ್​ನ ಒಳ ಜಗಳದಿಂದ ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳಾಗುತ್ತಿವೆ. ಕಲಬುರಗಿಯಲ್ಲಿ ಗುತ್ತಿಗೆದಾರನ ಆತ್ಮಹತ್ಯೆಯಾಗಿದೆ. ಇದಾದ ಮೇಲೂ ಪ್ರಿಯಾಂಕ್ ಖರ್ಗೆ ಅಹಂಕಾರದಿಂದ ಮಾತಾಡಿದರು. ಬಸ್ ದರ ಏರಿಸಿ, ಜನರ ಮೇಲೆ ಹೊರೆ ಹೊರಸಿದ್ದಾರೆ. ಕಾಂಗ್ರೆಸ್ ದೇಶದಲ್ಲಿ ಅಯೋಮಯಕ್ಕೆ ತಲುಪಿದೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯಕ್ಕೆ ಬರಲಿದೆ. ಕಾಂಗ್ರೆಸ್ ಪ್ರಾದೇಶಿಕ ಪಕ್ಷವಾಗುವ ಹಂತಕ್ಕೆ ಬಂದಿದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​ನವರು ಬರೀ ಸುಳ್ಳು ಹೇಳ್ತಾರೆ, ನಿರ್ಲಜ್ಜರು: ಬಸ್ ಟಿಕೆಟ್ ದರ ಹೆಚ್ಚಳ ಖಂಡಿಸಿ ಪ್ರಹ್ಲಾದ್ ಜೋಶಿ ವಾಗ್ದಾಳಿ

ಡಿಸಿಎಂ ಡಿಕೆ ಶಿವಕುಮಾರ್ ಶತ್ರುಗಳ ಸಂಹಾರ ಎಂದಿದ್ದಾರೆ. ಅವರ ಪ್ರಕಾರ ಯಾರು ಶತ್ರುಗಳು?ರಾಜಕಾರಣದಲ್ಲಿ ಯಾರೂ ಶತ್ರುಗಳು ಅಲ್ಲ, ಪ್ರತಿಸ್ಪರ್ಧಿಗಳು. ಶತ್ರುಗಳು ಯಾರು ಅಂತ ಡಿಕೆ ಶಿವಕುಮಾರ್ ಹೇಳಬೇಕು. ಸಿದ್ದರಾಮಯ್ಯರವರಾ ಅಥವಾ ಜಿ ಪರಮೇಶ್ವರರವರಾ ಎಂದು ಸ್ಪಷ್ಟಪಡಿಸಬೇಕು ಎಂದು ವಾಗ್ದಾಳಿ ಮಾಡಿದರು. ನಾವು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರನ್ನು ಶತ್ರುಗಳು ಅಂತ ಭಾವಿಸಿಲ್ಲ. ಇದನ್ನು ನಮಗೆ ಅಟಲ್​ ಬಿಹಾರಿ ವಾಜಪೇಯಿ ಅವರು ಕಲಸಿದ್ದಾರೆ. ಯಾರನ್ನೂ ವೈರಿಗಳು ಎಂದು ನಾವು ಭಾವಿಸಿಲ್ಲ. ಇಂಡಿ ಘಟಬಂಧನ್ ಅಸ್ವಾಭಾವಿಕ, ಅನೈಸರ್ಗಿಕ ಅಂತ ನಾವು ಹೇಳಿದ್ವಿ. ಘಟಬಂಧನ್​​ನಿಂದ ಕಾಂಗ್ರೆಸ್ ಪಕ್ಷವನ್ನು ಹೊರಗೆ ಇಡಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮಾನ್ಯತೆ ಇರಲಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸುದರು.

ಸಿಟಿ ರವಿಗೆ ಬೆದರಿಕೆ ಪತ್ರ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕಾನೂನು ಕೈಗೆ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಸಿಟಿ ರವಿಯವರ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮವಾಗಿಲ್ಲ. ನಮ್ಮದು ಸುಸಂಸ್ಕೃತ ರಾಜ್ಯ, ಮನಸ್ಸು ಮಾಡಿದರೇ ಬೆದರಿಕೆ ಪತ್ರ ಕಳುಹಿಸಿದವರನ್ನು ಒಂದು ಗಂಟೆಯಲ್ಲಿ ಹಿಡಿಯಬಹುದು ಎಂದರು.

ನಕ್ಸಲ್ ಶರಣಾಗತಿಗೆ ನಮ್ಮ ವಿರೋಧವಿಲ್ಲ. ನಕ್ಸಲ್ ಚಟುವಟಿಕೆಗೆ ವಿದೇಶದಿಂದ ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾದವರ ಬೆಂಬಲವಿದೆ. ಪ್ಯಾಕೇಜ್​ಗೆ​​​ ನಮ್ಮ ವಿರೋಧವಿಲ್ಲ. ನಕ್ಸಲ್​ರು ಶಸ್ತ್ರಾಸ್ತ್ರ ಒಪ್ಪಿಸಿಲ್ಲ ಎಂಬುವುದು ಮುಖ್ಯವಾಗಿ. ಶಸ್ತ್ರಾಸ್ತ್ರ ಒಪ್ಪಿಸಿಲ್ಲ ಅಂದರೇ ಬೇರೆಯವರಿಗೆ ಕೊಟ್ರಾ? ಎಂದು ಪ್ರಶ್ನಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್