AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲ್ಲದ ಗುರು-ಶಿಷ್ಯರ ಕಾಳಗ: ಸುನಿಲ್​​ ಕುಮಾರ್​ ವಿರುದ್ಧ ಪ್ರಮೋದ್ ಮುತಾಲಿಕ್ ದೂರು

ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ವಿರುದ್ಧ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಮಾನಹಾನಿ ದೂರು ದಾಖಲಿಸಿದ್ದಾರೆ.

ನಿಲ್ಲದ ಗುರು-ಶಿಷ್ಯರ ಕಾಳಗ: ಸುನಿಲ್​​ ಕುಮಾರ್​ ವಿರುದ್ಧ ಪ್ರಮೋದ್ ಮುತಾಲಿಕ್ ದೂರು
ಪ್ರಮೋದ್​ ಮುತಾಲಿಕ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 21, 2023 | 12:55 PM

Share

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ (Sunil Kumar) ಅವರ ವಿರುದ್ಧ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಮಾನಹಾನಿ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಸುನೀಲ್ ಕುಮಾರ್ ಬಿಜೆಪಿ (BJP) ವಿಜಯೋತ್ಸವ ಸಮಾರಂಭದಲ್ಲಿ ಸುನೀಲ್ ಕುಮಾರ್ ಪ್ರಮೋದ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಹಣ ಪಡೆದು ಸ್ಪರ್ಧೆ ಮಾಡುತ್ತಾರೆ ಎಂದು ಆರೋಪ ಮಾಡಿದ್ದರು. ಇದೇ ಹೇಳಿಕೆ ವಿರುದ್ಧ ಪ್ರಮೋದ್ ಮುತಾಲಿಕ್ ಕಾರ್ಕಳ ನಗರದ ಠಾಣೆಗೆ ಸಂಗಡಿಗರೊಂದಿಗೆ ತೆರಳಿ ಶಾಸಕ ಸುನೀಲ್ ಕುಮಾರ್​​ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಮೋದ್​ ಮುತಾಲಿಕ್​​ರನ್ನ ಜರಿದಿದ್ದ ಸುನಿಲ್​ ಕುಮಾರ್​

ಪ್ರಮೋದ್ ಮುತಾಲಿಕ್ ಮತ್ತು ಶಿಷ್ಯ, ಮಾಜಿ ಸಚಿವ ಸುನಿಲ್ ಕುಮಾರ್ ಮಧ್ಯದ ಕಾಳಗ ಅಂತ್ಯವಾಗಿಲ್ಲ. ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಶಿಷ್ಯನ ವಿರುದ್ಧ ಗುರು ಪ್ರಮೋದ್ ಮುತಾಲಿಕ್ ತೊಡೆ ತಟ್ಟಿದ್ದರು. ಈ ವೇಳೆ ಗುರುವಿನ ವಿರುದ್ಧ ಸುನಿಲ್​ ಕುಮಾರ್ ತುಟಿ ಪಿಟಿಕ್ ಎಂದಿರಲಿಲ್ಲ.

ಮೇ.15 ರಂದು ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪ್ರಮೋದ್ ಮುತಾಲಿಕ್ ಅವರು ಕಾಂಗ್ರೆಸ್​ನವರಿಂದ ಹಣ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು ಎಂದು ಆರೋಪ ಮಾಡಿದ್ದರು. ಇದಕ್ಕೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದ್ದರು. ಎಂದು ಸುನಿಲ್​ ಕುಮಾರ್​ ವಿರುದ್ಧ ಆರೋಪಿಸಿದರು.

ಇದನ್ನೂ ಓದಿ: ರಾಜ್ಯಕ್ಕೆ ಬರುವ ಕೇಂದ್ರದ ಹಣ ಕಡಿಮೆ ಎಂಬ ಆರೋಪಕ್ಕೆ ಅಂಕಿ-ಸಂಖ್ಯೆಯೊಂದಿಗೆ ತಿರುಗೇಟು ಕೊಟ್ಟ ಸಚಿವ ಜೋಶಿ

ಸುನಿಲ್​ ಕುಮಾರ್​ ವಿರುದ್ಧ ಪ್ರಮೋದ್​ ಮುತಾಲಿಕ್​ ಗರಂ

ತನ್ನ ವಿರುದ್ಧದ ಆರೋಪಕ್ಕೆ ಮಾರಿಗುಡಿಯಲ್ಲಿ ಪ್ರಮಾಣ ಮಾಡಿ ಬಂದಿದ್ದೇನೆ. ನಾನು ಕೇವಲ ಆರೋಪ ಮಾಡಿಲ್ಲ ದಾಖಲೆ ಬಹಿರಂಗಗೊಳಿಸಿದ್ದೇನೆ. ಅಭಿವೃದ್ಧಿ ಜೊತೆ ಕಮಿಷನ್ ಮತ್ತು ಕಲೆಕ್ಷನ್ ಕೂಡ ಮಾಡಿದ್ದೀರಿ. ನನ್ನನ್ನು ಡೀಲ್ ಮಾಸ್ಟರ್ ಎಂದು ಕರೆದಿದ್ದೀರಿ. ಹಣ ಗಳಿಸುವ ಉದ್ದೇಶ ಇದ್ದಿದ್ದರೇ ಧಾರವಾಡದಿಂದ ಕಾರ್ಕಳಕ್ಕೆ ಬರಬೇಕಾಗಿರಲಿಲ್ಲ. 48 ವರ್ಷ ಹೋರಾಟ ಮಾಡಬೇಕಾಗಿ ಇರಲಿಲ್ಲ. ನಾನು ಮಾಡಿರುವ ಭ್ರಷ್ಟಾಚಾರ ಆರೋಪಗಳಿಗೆ ಯಾವುದೇ ಉತ್ತರ ನೀಡಿಲ್ಲ. ಕಾರ್ಕಳಕ್ಕೆ ಬಂದು ಬಹಿರಂಗ ಚರ್ಚೆ ಮಾಡಲು ನಾನು ಸಿದ್ಧ ಎಂದು ಹೇಳಿದ್ದರು.

ಸುನಿಲ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು. ಕನ್ನಡಿ ಮುಂದೆ ನಿಂತು ಸುನಿಲ್ ಕುಮಾರ್ ಅವಲೋಕನ ಮಾಡಿಕೊಳ್ಳಬೇಕು. ಮಾಜಿ ಸಚಿವ ಈಶ್ವರಪ್ಪ ಇಂಧನ ಇಲಾಖೆ ಭ್ರಷ್ಟಾಚಾರದ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದರು. ಕಾರ್ಕಳದ ಅಧಿಕಾರಿಗಳು ಕೂಡ ಆರೋಪ ಮಾಡಿದ್ದರು. ಕಾರ್ಕಳದ ಮಾರಿಗುಡಿಗೆ ಹೋಗಿ ತೆಂಗಿನಕಾಯಿ ಇಟ್ಟು ಪ್ರಮಾಣ ಮಾಡಿ ಬಂದಿದ್ದೇನೆ. ಮಾರಿಗುಡಿಗೆ ಹೋಗಿ ತೆಂಗಿನಕಾಯಿ ಇಟ್ಟು ಪ್ರಮಾಣ ಮಾಡುವ ನೈತಿಕತೆ ನಿಮಗೆ ಇದೆಯಾ? ಭ್ರಷ್ಟತೆ, ವಂಚನೆ, ಮೋಸದಿಂದ ಗೆದ್ದಿದ್ದೀರಿ ನಿಮಗೆ ಅಭಿನಂದನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Sun, 21 May 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ