ನೂತನ ರಾಜ್ಯಧ್ಯಕ್ಷರ ಪದಗ್ರಹಣಕ್ಕೆ ಸಿದ್ಧತೆ; ಸಿಟಿ ರವಿ, ಯತ್ನಾಳ್, ಸೋಮಣ್ಣ ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಿವೈ ವಿಜಯೇಂದ್ರ ಯತ್ನ
ರಾಜ್ಯಾಧ್ಯಕ್ಷ ಸ್ಥಾನದ ವಿಚಾರದಲ್ಲಿ ಮಾಜಿ ಸಚಿವ ಸಿ.ಟಿ ರವಿ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ನಾನೂ ಅವರ ಹೇಳಿಕೆ ಗಮನಿಸಿದ್ದೇನೆ. ಅಸಮಾಧಾನದ ಅರ್ಥದಲ್ಲಿ ಅವರು ಎಲ್ಲೂ ಹೇಳಿಲ್ಲ. ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರದ್ದೇ ಆದ ಅಭಿಪ್ರಾಯಗಳು ಕೂಡ ಇರುತ್ತವೆ ಎಂದು ಬಿವೈ ವಿಜಯೇಂದ್ರ ಹೇಳಿದರು.
ಬೆಂಗಳೂರು, ನ.11: ಕೊನೆಗೂ ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ (BJP Karnataka President)ರನ್ನು ನೇಮಕ ಮಾಡಲಾಗಿದೆ. ಹೌದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ (BY Vijayendra) ಅವರನ್ನು ನಿನ್ನೆ(ನ.10)ನೇಮಕ ಮಾಡಿ ಆದೇಶಿಸಿದ್ದಾರೆ. ಇನ್ನು ಇದಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದ ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಟಿ ರವಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಅಸಮಧಾನಗೊಂಡಿದ್ದರು. ಈ ಹಿನ್ನಲೆ ನೂತನ ಅಧ್ಯಕ್ಷರಾದ ವಿಜಯೇಂದ್ರ ಅವರು ‘ನಾನು ರವಿಯವರ ಜೊತೆ ಮಾತಾಡಿದ್ದೇನೆ, ನಾಡಿದ್ದು ಸೋಮಣ್ಣ ಮತ್ತು ಯತ್ನಾಳ್ ಅವರ ಜೊತೆಯೂ ಮಾತಾಡುತ್ತೇನೆ ಎಂದರು.
ಇನ್ನು ರಾಜ್ಯಾಧ್ಯಕ್ಷ ಸ್ಥಾನದ ವಿಚಾರದಲ್ಲಿ ಮಾಜಿ ಸಚಿವ ಸಿ.ಟಿ ರವಿ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ನಾನೂ ಅವರ ಹೇಳಿಕೆ ಗಮನಿಸಿದ್ದೇನೆ. ಅಸಮಾಧಾನದ ಅರ್ಥದಲ್ಲಿ ಅವರು ಎಲ್ಲೂ ಹೇಳಿಲ್ಲ. ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವಂತಹವರು. ಅವರದ್ದೇ ಆದ ಅಭಿಪ್ರಾಯಗಳು ಕೂಡ ಇರುತ್ತವೆ. ಹಿರಿಯರ ಸಲಹೆ, ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ ಇದೆ. ಅದಕ್ಕೆ ಬೇರೆ ಅಪಾರ್ಥ ಕಲ್ಪಿಸಬೇಕಿಲ್ಲ. ಮೋದಿ ಕೈ ಬಲಪಡಿಸುವುದು ನನ್ನ ಮತ್ತು ನಮ್ಮೆಲ್ಲರ ಗುರಿ ಎಂದರು.
ಇದನ್ನೂ ಓದಿ:ಬಿವೈ ವಿಜಯೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷ; ಇದು ಸ್ವಜನಪಕ್ಷಪಾತ ಎಂದ ಸುರ್ಜೇವಾಲಾ
ಪಕ್ಷ ದೊಡ್ಡ ಜವಾಬ್ದಾರಿಯನ್ನು ನನ್ನ ಹೆಗಲ ಮೇಲೆ ಹಾಕಿದೆ
ಹೌದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡು ಎಂದು ನಿರ್ಮಲಾನಂದ ಶ್ರೀ ಆಶೀರ್ವಾದ ಮಾಡಿದ್ದಾರೆ. ಪಕ್ಷ ದೊಡ್ಡ ಜವಾಬ್ದಾರಿಯನ್ನು ನನ್ನ ಹೆಗಲ ಮೇಲೆ ಹಾಕಿದೆ. ಈ ಸಂದರ್ಭದಲ್ಲಿ ಪರಮ ಪೂಜ್ಯರ ಆಶೀರ್ವಾದ ಅತ್ಯಗತ್ಯ. ನಾಳೆ ಸಿದ್ದಗಂಗಾ ಮಠ ಮತ್ತು ಮನೆ ದೇವರು ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುತ್ತೇನೆ. ಇನ್ನು ಪದಗ್ರಹಣವನ್ನು ಇದೇ ನ.15 ರಂದು ಮಾಡಲಾಗುವುದು ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ