ಬೆಂಗಳೂರಿಗೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ; 28 ಕ್ಷೇತ್ರಗಳಲ್ಲಿ ಗೆಲ್ಲಲು ತಯಾರಿ ನಡೆಸಲಾಗುತ್ತಿದೆ ಎಂದ ಅರುಣ್ ಸಿಂಗ್

| Updated By: Rakesh Nayak Manchi

Updated on: Jan 07, 2024 | 7:04 PM

ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿಯಿಂದ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದಾರೆ. ದೆಹಲಿಯಿಂದ 5:30 ರ ವಿಸ್ತಾರ ವಿಮಾನದಲ್ಲಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಬಿವೈ ವಿಜಯೇಂದ್ರ ನೇತೃತ್ವದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ತಯಾರಿ ನಡೆಸಲಾಗುತ್ತಿದೆ ಎಂದರು.

ಬೆಂಗಳೂರಿಗೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ; 28 ಕ್ಷೇತ್ರಗಳಲ್ಲಿ ಗೆಲ್ಲಲು ತಯಾರಿ ನಡೆಸಲಾಗುತ್ತಿದೆ ಎಂದ ಅರುಣ್ ಸಿಂಗ್
ಬೆಂಗಳೂರಿಗೆ ಆಗಮಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
Follow us on

ದೇವನಹಳ್ಳಿ, ಜ.7: ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿಯಿಂದ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ಆಗಮಿಸಿದ್ದಾರೆ. ದೆಹಲಿಯಿಂದ 5:30 ರ ವಿಸ್ತಾರ ವಿಮಾನದಲ್ಲಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಬಿವೈ ವಿಜಯೇಂದ್ರ (BY Vijayendra) ನೇತೃತ್ವದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ತಯಾರಿ ನಡೆಸಲಾಗುತ್ತಿದೆ ಎಂದರು.

ಲೋಕಸಭಾ ಚುನಾವಣಾ ತಯಾರಿ ನಡೆಯುತ್ತಿದೆ. ಎಲ್ಲಾ ಲೋಕಸಭಾ ಸ್ಥಾನಗಳನ್ನ ಪ್ರಧಾನಿ ನರೇಂದ್ರ ಮೋದಿ ‌ನೇತೃತ್ವದಲ್ಲಿ ಗೆಲ್ಲುವ ತಯಾರಿ ಮಾಡುತ್ತಿದ್ದೇವೆ. ವಿಜಯೇಂದ್ರ ನೇತೃತ್ವದಲ್ಲಿ ಅದು ಎಲ್ಲಾ ಚೆನ್ನಾಗಿ ನಡೆಯುತ್ತಿದೆ ಎಂದು ಅರುಣ್ ಸಿಂಗ್ ಹೇಳಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ಸ್ಪರ್ಧೆ: ಬಿವೈ ವಿಜಯೇಂದ್ರ ಹೇಳಿದ್ದೇನು?

ಕಾಂಗ್ರೆಸ್ ಎಲ್ಲೆಡೆ ತೃಷ್ಟಿಕರಣ ರಾಜಕೀಯ ಮಾಡುತ್ತಿದೆ. ದೇಶದಲ್ಲೆಡೆ ಜೈ ಶ್ರೀರಾಮ್ ಜೈ ಶ್ರೀರಾಮ್ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಜೈಶ್ರೀರಾಮ್ ಹೇಳುತ್ತಿಲ್ಲ. ಕಾಂಗ್ರೆಸ್ ನಾಯಕರು ತೃಷ್ಟೀಕರಣದ ರಾಜಕೀಯ ಮಾಡುವುದರಲ್ಲೇ ಇದ್ದಾರೆ ಎಂದು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ